ಶಾಸಕ ರವೀಂದ್ರ ಶ್ರೀಕಂಠಯ್ಯ, ಸಂಸದೆ ಸುಮಲತಾ 
ರಾಜಕೀಯ

ಸಂಸದೆ ಸುಮಲತಾ ದೇಶದ್ರೋಹಿ, ನಟೋರಿಯಸ್: ಶಾಸಕ ರವೀಂದ್ರ ಶ್ರೀಕಂಠಯ್ಯ

ಸಂಸದೆ ಸುಮಲತಾ ದೇಶದ್ರೋಹಿ, ನಟೋರಿಯಸ್ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಆರೋಪಿಸಿದ್ದಾರೆ. ರಾಷ್ಟ್ರೀಯ ಆಸ್ತಿಯಾಗಿರುವ ಕೆಆರ್ ಎಸ್ ಬಗ್ಗೆ ಬಹಿರಂಗ ಹೇಳಿಕೆ ನೀಡಿದ್ದು, ಏಕೆ, ದೇಶ ವಿರೋಧಿ ಶಕ್ತಿಗಳು ನಿಮ್ಮ ಹೇಳಿಕೆಯನ್ನು ದುರ್ಬಳಕೆ ಮಾಡಿಕೊಳ್ಳುವುದಿಲ್ಲವೇ ಎಂದು ಪ್ರಶ್ನಿಸಿದರು.

ಮಂಡ್ಯ: ಮಂಡ್ಯದಲ್ಲಿ ಸಂಸದೆ ಸುಮಲತಾ ಹಾಗೂ ಜೆಡಿಎಸ್ ಮುಖಂಡರ ನಡುವಣ ವಾಕ್ಸಮರ, ಶೀತಲ ಸಮರ ಮುಂದುವರೆದಿದೆ. ಕೆಆರ್ ಎಸ್ ಜಲಾಶಯ ಕುರಿತಂತೆ ಸುಮಲತಾ ನೀಡಿರುವ ಹೇಳಿಕೆ ವಿರುದ್ಧ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್. ಡಿ. ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ, ಶಾಸಕ ರವೀಂದ್ರ ಶ್ರೀಕಂಠಯ್ಯ ಸೇರಿದಂತೆ ಹಲವು ಜೆಡಿಎಸ್ ನಾಯಕರು ಪ್ರತಿನಿತ್ಯ ಆರೋಪ, ಪ್ರತ್ಯಾರೋಪದಲ್ಲಿ ನಿರತರಾಗಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸುಮಲತಾ ದೇಶದ್ರೋಹಿ, ನಟೋರಿಯಸ್ ಎಂದು ಕರೆದರು. ಯಾವ ಆಧಾರದ ಮೇಲೆ ಕೆಆರ್ ಎಸ್ ಜಲಾಯಶದಲ್ಲಿ ಬಿರುಕು ಬಿಟ್ಟಿದೆ ಎಂದು ಹೇಳಿದ್ದೀರಿ. ದೇಶದ ಗೋಪ್ಯತೆ ಕಾಪಾಡುವುದಾಗಿ ಪ್ರಮಾಣ ವಚನ ಮಾಡಿರುವ ನೀವು ರಾಷ್ಟ್ರೀಯ ಆಸ್ತಿಯಾಗಿರುವ ಕೆಆರ್ ಎಸ್ ಬಗ್ಗೆ ಬಹಿರಂಗ ಹೇಳಿಕೆ ನೀಡಿದ್ದು, ಏಕೆ, ದೇಶ ವಿರೋಧಿ ಶಕ್ತಿಗಳು ನಿಮ್ಮ ಹೇಳಿಕೆಯನ್ನು ದುರ್ಬಳಕೆ ಮಾಡಿಕೊಳ್ಳುವುದಿಲ್ಲವೇ ಎಂದು ಪ್ರಶ್ನಿಸಿದರು.

ಅಂಬರೀಷ್ ಸಂಸದರಾಗಿದ್ದ ಅವಧಿಯಲ್ಲೇ ಜಿಲ್ಲೆಯಲ್ಲಿ ಅತಿ ಹೆಚ್ಚು ಕಲ್ಲು ಗಣಿಗಾರಿಕೆ ನಡೆದಿದೆ, ಅವರ ಬೆಂಬಲಿಗರೇ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದರು ಎಂದು ಆರೋಪಿಸಿದರು.

ಬೆಂಗಳೂರಿನ ಹೋಟೆಲ್ ನಲ್ಲಿ ಕುಳಿತು ದಲ್ಲಾಳಿಗಳ ಮೂಲಕ ಗಣಿ ಮಾಲೀಕರಿಂದ ಹಣ ಪಡೆಯಲು ಸುಮಲತಾ ಪ್ರಯತ್ನಿಸುತ್ತಿರುವುದಾಗಿ ಆರೋಪಿಸಿದ ರವೀಂದ್ರ ಶ್ರೀಕಂಠಯ್ಯ, ಈ ಕುರಿತ ಎಲ್ಲಾ ದಾಖಲೆಗಳಿದ್ದು, ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!