ರಾಜಕೀಯ

ಬಿಬಿಎಂಪಿ ಚುನಾವಣೆ: ಕಾರ್ಯತಂತ್ರ ರೂಪಿಸಲು ನಿವಾಸದಲ್ಲಿ ಡಿಕೆ ಶಿವಕುಮಾರ್ ಸಭೆ

Manjula VN

ಬೆಂಗಳೂರು: ಬಿಬಿಎಂಪಿ ಚುನಾವಣೆ ಹತ್ತಿರಬರುತ್ತಿದ್ದು, ಈ ನಡುವಲ್ಲೇ ಪಕ್ಷವನ್ನು ಸಜ್ಜುಗೊಳಿಸುವ ಸಂಬಂಧ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಪಕ್ಷದ ಹಿರಿಯ ನಾಯಕರು, ನಗರದ ಶಾಸಕರು, ಸಂಸದರು, ವಿಧಾನ ಪರಿಷತ್‌ ಸದಸ್ಯರು ಮತ್ತು ವಿಧಾನಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿಗಳ ಜತೆ ಶುಕ್ರವಾರ ರಾತ್ರಿ ತಮ್ಮ ನಿವಾಸದಲ್ಲಿ ಸಭೆ ನಡೆಸಿದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಹಿರಿಯ ಮುಖಂಡ ಎಂ. ವೀರಪ್ಪ ಮೊಯಿಲಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಈಶ್ವರ ಖಂಡ್ರೆ, ಸಲೀಂ ಅಹ್ಮದ್‌, ಸಂಸದ ಡಿ.ಕೆ. ಸುರೇಶ್, ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್‌ ಹಾಗೂ ಕಾಂಗ್ರೆಸ್‌ನ ಎಲ್ಲ ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ವಿಧಾನಸಭೆಯ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಾಗಿದ್ದವರು, ಮಾಜಿ ಮೇಯರ್‌ಗಳೂ ಸಭೆಯಲ್ಲಿ ಭಾಗವಹಿಸಿದ್ದರು.

ಬಿಬಿಎಂಪಿ ಚುನಾವಣೆಯ ವಿಳಂಬವಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆ, ಚುನಾವಣೆಗೆ ಆದೇಶ ಬಂದರೆ ಮಾಡಿಕೊಳ್ಳಬೇಕಾದ ಸಿದ್ಧತೆ, ಪಾಲಿಕೆ ವ್ಯಾಪ್ತಿಯಲ್ಲಿ ಪಕ್ಷ ಸಂಘಟನಾ ಕಾರ್ಯಕ್ರಮಗಳ ಆಯೋಜನೆ ಸೇರಿದಂತೆ ಹಲವು ವಿಷಯಗಳ ಕುರಿತು ಮುಖಂಡರು ಚರ್ಚೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. 

SCROLL FOR NEXT