ಉಮೇಶ್ ಕತ್ತಿ 
ರಾಜಕೀಯ

ಸಿಎಂ ರೇಸ್‌ನಲ್ಲಿ ನಾನು ಮುಂಚೂಣಿಯಲ್ಲಿರುವೆ: ಸಚಿವ ಉಮೇಶ್ ಕತ್ತಿ

ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿ ನಾನು ಮುಂಚೂಣಿಯಲ್ಲಿರುವೆ ಎಂದು ಬಿಜೆಪಿ ಹಿರಿಯ ನಾಯಕ, ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಉಮೇಶ ಕತ್ತಿ ಹೇಳಿದ್ದಾರೆ.

ಬೆಳಗಾವಿ: ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿ ನಾನು ಮುಂಚೂಣಿಯಲ್ಲಿರುವೆ ಎಂದು ಬಿಜೆಪಿ ಹಿರಿಯ ನಾಯಕ, ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಉಮೇಶ ಕತ್ತಿ ಹೇಳಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹಿರಿತನವಿದೆ. ಕಳಂಕರಹಿತನಾಗಿರುವೆ. ನಸೀಬು ಗಟ್ಟಿ ಇದ್ದರೆ ಮತ್ತು ಪಕ್ಷದ ಹೈಕಮಾಂಡ್ ತೀರ್ಮಾನಿಸಿದರೆ ಜವಾಬ್ದಾರಿ ನಿರ್ವಹಿಸುವೆ. ಆದರೆ, ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲ ಎಂದು ಹೇಳಿದ್ದಾರೆ. 

ರಾಜ್ಯದಲ್ಲಿ ಮುಖ್ಯಮಂತ್ರಿಗಳು ಇದ್ದಾರೆ. ಒಳ್ಳೆಯ ಸರ್ಕಾರ ನಡೆಯುತ್ತಿದೆ. ಕಳೆದ ವರ್ಷದಿಂದ ಸಿಎಂ ಬದಲಾವಣೆ ಕೂಗು ಇದ್ದೇ ಇದೆ. ಆ ಕೂಗನ್ನು ಯಾರು ಹಾಕುತ್ತಿದ್ದಾರೆಯೋ ಗೊತ್ತಿಲ್ಲ. ಆ ಬಗ್ಗೆ ನಾನೇನು ಪ್ರತಿಕ್ರಿಯಿಸುವುದಿಲ್ಲ. ಆದರೆ ಸಿಎಂ ಹುದ್ದೆ ಖಾಲಿಯಾದರೆ ಮುಂದಿನ ಸಾಲಿನಲ್ಲಿ ನಾನಿದ್ದೇನೆ. ಸಿಎಂ ಸ್ಥಾನ ಬದಲಾವಣೆ ಆದರೆ, ನಂದೇ ಮುಂದಿನ ನಂಬರ್ ಇದೆ ಎಂದು ತಿಳಿಸಿದ್ದಾರೆ. 

ಹುಕ್ಕೇರಿ ವಿಧಾನಸಭಾ ಕ್ಷೇತ್ರದ ಜನರ ಆಶೀರ್ವಾದವಿದ್ದು, 8 ಬಾರಿ ಶಾಸಕನಾಗಿ, ನಾಲ್ಕು ಬಾರಿ ಮಂತ್ರಿಯಾಗಿದ್ದೇನೆ. ಕಳಂಕಹರಿತ ವ್ಯಕ್ತಿತ್ವ ನನ್ನದಾಗಿದೆ. ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆಗಳು ನನಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!