ರಾಜಕೀಯ

ಪಕ್ಷ ಸಂಘಟನೆ, ಉಪಚುನಾವಣೆಗೆ ಕಾಂಗ್ರೆಸ್ ಸಿದ್ಧತೆ: ರಣದೀಪ್ ಸುರ್ಜೇವಾಲ 5 ದಿನಗಳ ರಾಜ್ಯ ಪ್ರವಾಸ

Shilpa D

ಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಇದೇ 22ರಿಂದ ರಾಜ್ಯ ಪ್ರವಾಸ ಮಾಡಲಿದ್ದು, 25 ಜಿಲ್ಲೆಗಳ ಕಾಂಗ್ರೆಸ್‌ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದರು.

ಮಂಗಳೂರಿನಲ್ಲಿ ಮಾತನಾಡಿದ ಅವರು, ಸಿಂಧಗಿ, ಹಾನಗಲ್ ವಿಧಾನಸಭೆ ಉಪಚುನಾವಣೆ, ಮುಂಬರುವ ಉಪ  ಚುನಾವಣೆ, ವಿಧಾನ ಪರಿಷತ್ ಚುನಾವಣೆ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳಿಗಾಗಿ ಪಕ್ಷ ಸಂಘಟನೆ ಮಾಡಲು ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಜುಲೈ 23ರಂದು ಮಂಗಳೂರಿಗೆ ಬರುವ ಸುರ್ಜೇವಾಲ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರು.

ಒಂದು ವಾರ ರಾಜ್ಯ ಪ್ರವಾಸ ನಡೆಸಲಿರುವ ಅವರು, ಬೆಂಗಳೂರು, ಮಂಗಳೂರು, ಹುಬ್ಬಳ್ಳಿ, ಬೆಳಗಾವಿಯಲ್ಲಿ ಸಭೆ ನಡೆಸಲಿದ್ದಾರೆ. ಹಾಲಿ, ಮಾಜಿ ಶಾಸಕರು, ಸಂಸದರು ಸೇರಿದಂತೆ ಪ್ರಮುಖ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಪಕ್ಷ ಸಂಘಟನೆ ನಿಟ್ಟನಲ್ಲಿ ಈ ಸರಣಿ ಸಭೆ ಆಯೋಜಿಸಲಾಗಿದೆ ಎಂದು  ಸರ್ಕಾರದ ವೈಫಲ್ಯ, ಜನರು ಎದುರಿಸುತ್ತಿರುವ ಸಂಕಷ್ಟ ಇತ್ಯಾದಿಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದರು.

ಸಿ.ಎಂ. ಬಿ.ಎಸ್.ಯಡಿಯೂರಪ್ಪ ಬದಲಾವಣೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ವಿರುದ್ಧ ವಿಚಾರಕ್ಕೆ  ಸಲೀಂ ಅಹ್ಮದ್ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಮೇಲೆ ಹೈಕಮಾಂಡ್ ಗೆ ವಿಶ್ವಾಸವಿಲ್ಲ.  ಅವರ ಪಕ್ಷದ ಮುಖಂಡರೇ ಬಿ.ಎಸ್.ವೈ.ಆಡಳಿತ ವಿಫಲ ಅಂತಾರೆ. ಅರುಣ್ ಸಿಂಗ್ ರಾಜ್ಯಕ್ಕೆ ಬಂದ್ರು ಏನು ಪ್ರಯೋಜನ ಇಲ್ಲ ಎಂದಿದ್ದಾರೆ.

ಮೂರು ದಿನ ಬೆಂಗಳೂರಿನಲ್ಲಿ ಕುಳಿತು ಮೀಟಿಂಗ್ ಮಾಡಿದ್ರು ಅಷ್ಟೆ. ಯಡಿಯೂರಪ್ಪ ಹೋಗಬೇಕಾ ಇರಬೇಕಾ ಎಂಬುದೇ ಚರ್ಚೆ. ಜನರ ಜೀವನದ ಬಗ್ಗೆ ಸ್ವಲ್ಪನೂ ಕಾಳಜಿ ಇಲ್ಲದ ಸರ್ಕಾರ ಇದು.  ಇದೊಂದು ಅಯೋಗ್ಯರ ಸರ್ಕಾರ ಎಂದು ಟೀಕಿಸಿದರು. ಮೊದಲು ರಾಜಕೀಯ ಸರ್ಕಸ್ ಮಾಡುವುದನ್ನ ನಿಲ್ಲಿಸಲಿ. ಜನರ ಕಷ್ಟಗಳಿಗೆ ಸ್ಪಂದಿಸುವ ಕೆಲಸವನ್ನ ಮೊದಲು ಮಾಡಲಿ  ಎಂದು ಸಲಹೆ ನೀಡಿದರು.

SCROLL FOR NEXT