ಡಿವಿ ಸದಾನಂದಗೌಡ 
ರಾಜಕೀಯ

'ಇವೆಲ್ಲ ಊಹಾಪೋಹ': ಕರ್ನಾಟಕ ಸಿಎಂ ಬದಲಾವಣೆ ಕುರಿತು ಸದಾನಂದ ಗೌಡ ಮಾತು!

ರಾಜ್ಯದಲ್ಲಿ ಅಭಿವೃದ್ಧಿ ಚಟುವಟಿಕೆಗಳು ಮತ್ತು ಕೊರೋನಾ ನಿರ್ವಹಣೆ ಕುರಿತು ಬಿಜೆಪಿ ಹೈಕಮಾಂಡ್ ಸಂತಸಗೊಂಡಿರುವುದರಿಂದ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಗೆ ಯಾವುದೇ ಅವಕಾಶವಿಲ್ಲ ಎಂದು ಕೇಂದ್ರ ಮಾಜಿ ಸಚಿವ ಡಿವಿ ಸದಾನಂದ ಗೌಡ ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಅಭಿವೃದ್ಧಿ ಚಟುವಟಿಕೆಗಳು ಮತ್ತು ಕೊರೋನಾ ನಿರ್ವಹಣೆ ಕುರಿತು ಬಿಜೆಪಿ ಹೈಕಮಾಂಡ್ ಸಂತಸಗೊಂಡಿರುವುದರಿಂದ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಗೆ ಯಾವುದೇ ಅವಕಾಶವಿಲ್ಲ ಎಂದು ಕೇಂದ್ರ ಮಾಜಿ ಸಚಿವ ಡಿವಿ ಸದಾನಂದ ಗೌಡ ಹೇಳಿದ್ದಾರೆ.

ಮುಖ್ಯಮಂತ್ರಿ ಬಿ ಎಸ್ ಯಡಿಯುರಪ್ಪ ಅವರ ಸ್ಥಾನವು ಅಡಕತ್ತರಿಯಲ್ಲಿ ಸಿಲುಕಿವೆ ಎಂಬ ಊಹಾಪೋಹಗಳ ಮಧ್ಯೆ ಬೆಂಗಳೂರು ಉತ್ತರದ ಬಿಜೆಪಿ ಸಂಸದ ಸದಾನಂದ ಗೌಡ, ಈ ರೀತಿಯ ಯಾವುದೇ ಕ್ರಮ ನಡೆದಿದೆ ಎಂಬುದನ್ನು ನಂಬುವುದಿಲ್ಲ ಎಂದು ಹೇಳಿದರು.

'ನಾಯಕತ್ವದ ಬದಲಾವಣೆಯ ಬಗ್ಗೆ ನಡೆಯುತ್ತಿರುವ ಚರ್ಚೆಯಲ್ಲಿ ಯಾವುದೇ ಸತ್ಯವಿದೆ ಎಂದು ನಾನು ಭಾವಿಸುವುದಿಲ್ಲ. ಏಕೆಂದರೆ ರಾಜ್ಯಗಳ ರಾಜಕೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ನಾಯಕರು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸುದ್ದಿಗಾರರಿಗೆ ತಿಳಿಸಿದರು.

ಯಡಿಯೂರಪ್ಪ ಅವರು 'ಪ್ರಸ್ತುತ ಪರಿಸ್ಥಿತಿ' ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾಗೆ ವಿವರಿಸಿದ ನಂತರ ನಾಯಕತ್ವ ಬದಲಾವಣೆಯಂತಹ ಯಾವುದೇ ನಿರ್ಧಾರಗಳು ಬರುವುದಿಲ್ಲ ಎಂದರು. 

ಕೊರೋನಾ ಸಾಂಕ್ರಾಮಿಕ ಮತ್ತು ಕರ್ನಾಟಕದ ಅಭಿವೃದ್ಧಿಯ ಚಟುವಟಿಕೆಗಳಲ್ಲಿ ಮುಖ್ಯಮಂತ್ರಿ ಕೈಗೊಂಡ ಕ್ರಮಗಳನ್ನು ಶ್ಲಾಘಿಸಲಾಗಿದೆ. ಈಗಿರುವಾಗ ಅವರನ್ನು ತೆಗೆದುಹಾಕಲು ಯಾವುದೇ ಕಾರಣವಿಲ್ಲ. ನಾಯಕತ್ವ ಬದಲಾವಣೆಗೆ ಸಂಪೂರ್ಣವಾಗಿ ಅವಕಾಶವಿಲ್ಲ ಎಂಬುದು ನನ್ನ ಬಲವಾದ ನಂಬಿಕೆ. ಇವೆಲ್ಲವೂ ಊಹಾಪೋಹಗಳು ಎಂದರು. 

ನಾಯಕತ್ವದ ಬದಲಾವಣೆಯ ಸುತ್ತಲಿನ ಊಹಾಪೋಹಗಳ ಮಧ್ಯೆ ವಿವಿಧ ಲಿಂಗಾಯತ ಮಠಗಳ ಮಠಾಧೀಶರು ಯಡಿಯೂರಪ್ಪನವರಿಗೆ ಬೆಂಬಲ ಸೂಚಿಸುತ್ತಿದ್ದಾರೆಂದ ಗೌಡರು, 'ನಾವು ಕೆಲವು ಒಳ್ಳೆಯ ಕೆಲಸಗಳನ್ನು ಮಾಡಿದಾಗಲೆಲ್ಲಾ ಜನರು ಅದನ್ನು ಮೆಚ್ಚುತ್ತಾರೆ. ಇದರ ಪರಿಣಾಮವಾಗಿ ಜನರು ಅವರ ಪರವಾಗಿ ನಿಲ್ಲುತ್ತಾರೆ' ಎಂದು ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನಾಯಕತ್ವ ಬದಲಾವಣೆ ಮತ್ತು ಹೊಸ ತಂಡವನ್ನು ರಚಿಸುವ ಬಗ್ಗೆ ಸುಳಿವು ನೀಡುವ ಉದ್ದೇಶಿತ ಆಡಿಯೊದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅದನ್ನು ನಕಲಿ ಎಂದು ಕರೆಯುವ ಮೂಲಕ ಅದನ್ನು ನಿರಾಕರಿಸಿದ್ದರಿಂದ ಅದರ ಬಗ್ಗೆ ಮಾತನಾಡುವ ಅಗತ್ಯವಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT