ರಾಜಕೀಯ

ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ: ಹಲವು ಮಹತ್ವದ ಯೋಜನೆಗಳಿಗೆ ಅನುಮೋದನೆ ನಿರೀಕ್ಷೆ

Sumana Upadhyaya

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಮಾತುಗಳು ಕೇಳಿಬರುವುದರ ಮಧ್ಯೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ನೇತೃತ್ವದ ಸಚಿವ ಸಂಪುಟ ಗುರುವಾರ ಸಭೆ ಸೇರಲಿದ್ದು ಹಲವು ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ಪಡೆಯಲಿದೆ.

ತೆರೆಮರೆಯಲ್ಲಿ ಈಗ ಹಲವು ಚಟುವಟಿಕೆಗಳು ವೇಗವಾಗಿ ನಡೆಯುತ್ತಿದ್ದು ಸಚಿವ ಸಂಪುಟ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ನಿರೀಕ್ಷೆಯಿದೆ. ಮುಖ್ಯಮಂತ್ರಿಗಳು ಹಲವು ಕ್ರಮಗಳನ್ನು ಇಂದಿನ ಸಭೆಯಲ್ಲಿ ಕೈಗೊಂಡು ಅದಕ್ಕೆ ಸಚಿವ ಸಂಪುಟ ಅನುಮೋದನೆಯನ್ನು ನೀಡಲಿದೆ ಎಂದು ಹೇಳಲಾಗುತ್ತಿದೆ.

ಈ ಮಧ್ಯೆ ಯಡಿಯೂರಪ್ಪನವರ ನೇತೃತ್ವದ ಸಂಪುಟ ಇಂದು ತರಾತುರಿಯಲ್ಲಿ ಹಲವು ಯೋಜನೆಗಳಿಗೆ ಒಪ್ಪಿಗೆ ನೀಡಿದರೆ ತಾವು ರಾಜ್ಯಪಾಲರಿಗೆ ದೂರು ಸಲ್ಲಿಸುವುದಾಗಿ ಬಿಜೆಪಿಯ ಶಾಸಕರೊಬ್ಬರು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿಸಿದ್ದಾರೆ.

ಹೊಸ ನಾಯಕರಿಗೆ ಹಾದಿ ಮಾಡಿಕೊಡಿ ಎಂದು ಕಳೆದ ವಾರ ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ವರಿಷ್ಠರು ಸೂಚಿಸಿದ್ದಾರೆ ಎಂದು ಬಿಜೆಪಿ ಮೂಲಗಳು ದೃಢಪಡಿಸಿದ್ದು, ಬಿಜೆಪಿಯಲ್ಲಿ ಬದಲಾವಣೆ ಅನಿವಾರ್ಯ ಎಂದು ಯಡಿಯೂರಪ್ಪನವರ ಆಪ್ತ ವಲಯದಲ್ಲಿ ಕೂಡ ಕೇಳಿಬರುತ್ತಿದೆ. ಅದೇ ರೀತಿ ಹಲವು ಮಠಾಧೀಶರು ಯಡಿಯೂರಪ್ಪನವರ ಪರವಾಗಿ ಮಾತನಾಡುತ್ತಿರುವುದು, ಅವರ ಬಳಿಯೇ ಬಂದು ನಾಯಕತ್ವ ಬದಲಾವಣೆ ಮಾಡಬೇಡಿ ಎಂದು ಹೇಳುತ್ತಿರುವುದು ವರಿಷ್ಠರಿಗೆ ಇರಿಸುಮುರುಸು ತಂದಿದೆ ಎಂದು ಹೇಳಲಾಗುತ್ತಿದೆ.

SCROLL FOR NEXT