ಬಸವರಾಜ ಬೊಮ್ಮಾಯಿ 
ರಾಜಕೀಯ

ಯಾರು ಹಿತವರು ಮೂವರೊಳಗೆ? ಬಿಎಲ್ ಸಂತೋಷ್, ಸಿಟಿ ರವಿ, ಜೋಶಿ; ಯಡಿಯೂರಪ್ಪ ಹಾಟ್ ಫೆವರಿಟ್ ಬೊಮ್ಮಾಯಿ!

ಜುಲೈ 26ಕ್ಕೆ ಮುಖ್ಯಮಂತ್ರಿ ಹುದ್ದೆ ಬದಲಾವಣೆಯಾಗುತ್ತದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ಕೇಂದ್ರ ನಾಯಕರು ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುತ್ತಾರೋ ಇಲ್ಲವೋ ಎಂಬುದು ಕೇಂದ್ರ ಬಿಜೆಪಿ ನಾಯಕರ ನಿರ್ಧಾರದ ಮೇಲೆ ಅವಲಂಬಿತವಾಗಿದೆ.

ಬೆಂಗಳೂರು: ಜುಲೈ 26ಕ್ಕೆ ಮುಖ್ಯಮಂತ್ರಿ ಹುದ್ದೆ ಬದಲಾವಣೆಯಾಗುತ್ತದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ಕೇಂದ್ರ ನಾಯಕರು ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುತ್ತಾರೋ ಇಲ್ಲವೋ ಎಂಬುದು ಕೇಂದ್ರ ಬಿಜೆಪಿ ನಾಯಕರ ನಿರ್ಧಾರದ ಮೇಲೆ ಅವಲಂಬಿತವಾಗಿದೆ.

ಕೇಂದ್ರ ನಾಯಕರುಗಳ ಜೊತೆ ಸಿಎಂ ಯಡಿಯೂರಪ್ಪ ಕೂಡ ತಮ್ಮ ಉತ್ತರಾಧಿಕಾರಿಯ ಆಯ್ಕೆ ಬಗ್ಗೆ ಚಿಂತಿಸುತ್ತಿದ್ದಾರೆ.  ಕಳೆದ ಎರಡು ದಿನಗಳಿಂದ ಹಲವು ಮಠಾಧೀಶರು ಸಿಎಂ ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. 

ಒಂದು ವೇಳೆ ತಾವು ಸಿಎಂ ಸ್ಥಾನದಿಂದ ಕೆಳಗಿಳಿದರೇ ತಮ್ಮ ಹುದ್ದೆಗೆ ಯಾರು ಸೂಕ್ತರು ಎಂಬುದನ್ನು ಯಡಿಯೂರಪ್ಪ ಚಿಂತಿಸುತ್ತಿದ್ದಾರೆ. ಮೂಲಗಳ ಪ್ರಕಾರ ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಮಾಡಲು ಯಡಿಯೂರಪ್ಪ ಆಸಕ್ತಿ ತೋರಿದ್ದಾರೆ ಎಂದು ತಿಳಿದು ಬಂದಿದೆ. ಇವರ ಜೊತೆಗೆ ಪ್ರಹ್ಲಾದ್ ಜೋಶಿ, ಮುರುಗೇಶ್ ನಿರಾಣಿ ಮತ್ತು ಸಿಟಿ ರವಿ ಹೆಸರುಗಳು ಕೇಳಿ ಬರುತ್ತಿವೆ. 

ಜಾತಿ, ವಿದ್ಯಾರ್ಹತೆ, ಆಡಳಿತಾತ್ಮಕ ದೃಷ್ಟಿಯಿಂದ ಕೇಂದ್ರ ನಾಯಕರು ಮತ್ತು ಆರ್ ಎಸ್ ಎಸ್ ನಾಯಕರ ಒಮ್ಮದ ಅಭ್ಯರ್ಥಿಯಾಗಿದ್ದಾರೆ ಎಂದು ತಿಳಿದು ಬಂದಿದೆ.  ಬಿಎಲ್ ಸಂತೋಷ್ ಅವರ ಹೆಸರು ಕೇಳಿ ಬರುತ್ತಿದೆಯಾದರೂ ಯಡಿಯೂರಪ್ಪ ಜೊತೆಗಿನ ಭಿನ್ನಾಭಿಪ್ರಾಯ ಮತ್ತು ಉತ್ತರ ಪ್ರದೇಶ ವಿಧಾನ ಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂತೋಷ್ ಗೆ ಸಿಎಂ ಹುದ್ದೆ ನೀಡುವುದು ಅನುಮಾನವಾಗಿದೆ.

ಪ್ರಹ್ಲಾದ್ ಜೋಶಿ ಅವರ ಹೆಸರು ಕೇಳಿ ಬರುತ್ತಿದ್ದರೂ ಸಂಸತ್ತಿನಲ್ಲಿ ಅವರ ಉಪಸ್ಥಿತಿ ಬಿಜೆಪಿಗೆ ಮುಖ್ಯವಾಗಿದೆ, ಕರ್ನಾಟಕದ ಆರು ಮಂತ್ರಿಗಳಿದ್ದು, ಪ್ರಹ್ಲಾದ್ ಜೋಶಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕರ್ನಾಟಕದ ರಾಜ್ಯ ಸಭೆ ಸದಸ್ಯರಾಗಿದ್ದಾರೆ,  ಜೋಶಿ ಮಾತ್ರ ಕೇಂದ್ರ ಸಂಪುಟ ದರ್ಜೆ ಪಡೆದಿರುವ ಏಕೈಕ ಲೋಕಸಭಾ ಸದಸ್ಯರಾಗಿದ್ದಾರೆ.

ಜೋಷಿ ಬ್ರಾಹ್ಮಣ ಸಮುದಾಯದವರಾಗಿದ್ದು, ಅವರಿಗೆ ಸ್ಥಾನ ನೀಡಲಾಗದು, ಏಕೆಂದರೆ ಯಡಿಯೂರಪ್ಪ ಲಿಂಗಾಯತ ಸಮುದಾಯದವರಾಗಿದ್ದಾರೆ, ಲಿಂಗಾಯತ ಮಠಾದೀಶರು ತಮ್ಮ ಸಮುದಾಯದವರನ್ನೇ ಸಿಎಂ ಮಾಡಬೇಕೆಂದು ಒತ್ತಡ ಹೇರುತ್ತಿದ್ದಾರೆ. ಹೀಗಾಗಿ ಮುರುಗೇಶ್ ನಿರಾಣಿ ಯಡಿಯೂರಪ್ಪ ಅವರ ಉತ್ತರಾಧಿಕಾರಿ ಎಂದೇ ಹೇಳಲಾಗುತ್ತಿದೆ. 

ಒಕ್ಕಲಿಗ ಮುಖಂಡ ಸಿಟಿ ರವಿ ಹಿಂದೂ ಮುಖಂಡರಾಗಿದ್ದು, ರವಿ ಆಯ್ಕೆ ಸೂಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ, ಜಾತಿ ಸಮೀಕರಣಗಳನ್ನು ಸಮತೋಲನಗೊಳಿಸಲು ಇತರ ಸಮುದಾಯಗಳ ಡಿಸಿಎಂಗಳನ್ನು ನೇಮಿಸಬಹುದು ಎನ್ನಲಾಗಿದೆ. ಸಿಎಂ ಹುದ್ದೆಗೆ ಹಲವು ಹೆಸರುಗಳು ಕೇಳಿ ಬರುತ್ತಿವೆ, ಆದರೆ ಕೇಂದ್ರ ನಾಯಕರ ಫಾರ್ಮುಲ ಏನಿದೆ ಎಂಬುದು ಯಾರಿಗೂ ತಿಳಿಯದ ಕಾರಣ ಅಚ್ಚರಿಗೊಳಿಸುವ ಅಭ್ಯರ್ಥಿ ಆಯ್ಕೆ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!