ರಾಜಕೀಯ

ಉತ್ತಮ ಆಡಳಿತ ಕೊಟ್ಟಿಲ್ಲವೆಂದು ಬಿಜೆಪಿಯಲ್ಲಿ ಸಿಎಂ ಬದಲಾವಣೆ ಮಾಡುತ್ತಿದ್ದಾರೆ: ಡಿ.ಕೆ. ಶಿವಕುಮಾರ್

Sumana Upadhyaya

ಮಂಗಳೂರು: ಕಳೆದ ಎರಡು ವರ್ಷಗಳಲ್ಲಿ ಈ ರಾಜ್ಯದಲ್ಲಿ ಉತ್ತಮ ಆಡಳಿತವಿರುವ ಸರ್ಕಾರವನ್ನು ನೀಡಲು ಸಾಧ್ಯವಾಗಿಲ್ಲವೆಂದು ಬಿಜೆಪಿ ಹೈಕಮಾಂಡ್ ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡುತ್ತಿದೆ. ಡಬಲ್ ಎಂಜಿನ್ ಸರ್ಕಾರ ಇಟ್ಟುಕೊಂಡು ಒಳ್ಳೆಯ ಆಡಳಿತ ಕೊಟ್ಟಿಲ್ಲವೆಂದಾದ ಮೇಲೆ ಬಿಜೆಪಿ ಪಕ್ಷಕ್ಕೆ ಎಲ್ಲಿದೆ ಗೌರವ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.

ಮಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿ ಪಕ್ಷದೊಳಗಿನ ಕಿತ್ತಾಟ, ಆಂತರಿಕ ಜಗಳಗಳೆಲ್ಲವೂ ಅವರ ಪಕ್ಷದ ವಿಚಾರ. ಆದರೆ ಜನರಿಗೆ ಉತ್ತಮ ಆಡಳಿತ ನೀಡಬೇಕಲ್ಲವೇ, ಗ್ರಾಮ ಪಂಚಾಯತಿಯಿಂದ ಹಿಡಿದು ವಿಧಾನ ಸೌಧದವರೆಗೆ ಯಾರೂ ಯಾರ ಮಾತನ್ನೂ ಕೇಳುವುದಿಲ್ಲ. ಅಧಿಕಾರಿಗಳ ಮಾತಿಗೆ ಬೆಲೆಯಿಲ್ಲದಂತಾಗಿದೆ. ಇಲಾಖೆಗಳಲ್ಲಿ ಭ್ರಷ್ಟಾಚಾರ, ತರಾತುರಿಯಲ್ಲಿ ಫೈಲ್ ಗಳಿಗೆ ಸಹಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮುಖ್ಯಮಂತ್ರಿಗಳು ಬಜೆಟ್ ಲ್ಲಿ ಘೋಷಿಸಿದ ಹಣಕ್ಕೂ ಈಗ ಬಿಡುಗಡೆಯಾದ ಹಣಕ್ಕೂ ತಾಳೆಯಾಗುತ್ತಿದೆಯೇ,ಎಲ್ಲ ದಾಖಲೆಗಳನ್ನು ತೆಗೆದುಕೊಂಡು ವಿಧಾನಸಭೆ ಅಧಿವೇಶನದಲ್ಲಿ ಮಂಡಿಸುತ್ತೇನೆ ಎಂದರು. 

SCROLL FOR NEXT