ರಾಜಕೀಯ

ನಾಯಕತ್ವ ಬದಲಾದರೂ ಯಡಿಯೂರಪ್ಪ ಕ್ಯಾಬಿನೆಟ್ ನಲ್ಲಿ ಪ್ರಮುಖ ಬದಲಾವಣೆ ಮಾಡುವ ಸಾಧ್ಯತೆ ಕಡಿಮೆ!

Lingaraj Badiger

ಕಲಬುರಗಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾದರೂ ಪ್ರಸ್ತುತ ಸಚಿವ ಸಂಪುಟದಲ್ಲಿ ಪ್ರಮುಖ ಬದಲಾವಣೆ ಮಾಡುವ ಸಾಧ್ಯತೆ ಇಲ್ಲ.  ಕಾಂಗ್ರೆಸ್ ಹಾಗೂ ಜೆಡಿಎಸ್ ತೊರೆದು ಬಿಜೆಪಿ ಸೇರಿ ಬಿಎಸ್ ಯಡಿಯೂರಪ್ಪ ಅವರ ಸಂಪುಟದಲ್ಲಿ ಸಚಿವರಾಗಿರುವ 17 ಸಚಿವರಿಗೆ ಯಾವುದೇ ಆತಂಕ ಬೇಡ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ಶನಿವಾರ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ನಿರಾಣಿ ಅವರು, ನಾಯಕತ್ವದ ಬದಲಾವಣೆಯ ವದಂತಿಗಳ ಬಗ್ಗೆ ನಾನು ಹೆಚ್ಚು ಗಮನ ಕೊಡುವುದಿಲ್ಲ. ಈ ಬಗ್ಗೆ ಪತ್ರಿಕೆಗಳಲ್ಲಿ ಮಾತ್ರ ಓದಿದ್ದೇನೆ ಮತ್ತು ಮುಖ್ಯಮಂತ್ರಿ ಸೇರಿದಂತೆ ಪಕ್ಷದಲ್ಲಿ ಯಾರೂ ಅವರೊಂದಿಗೆ ನಾಯಕತ್ವ ಬದಲಾವಣೆಯ ಬಗ್ಗೆ ಮಾತನಾಡಿಲ್ಲ ಎಂದು ನಿರಣಿ ಹೇಳಿದರು. 

ಆದರೆ ನನಗೆ ತಿಳಿದ ಮಟ್ಟಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕಾರಣರಾದ 17 ಸಚಿವರು ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ ಎಂದು ಹೇಳಿದರು.

ತಾವೂ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯೇ ಎಂದು ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ನಿರಾಣಿ, ಎಲ್ಲಾ 120 ಶಾಸಕರು ಸಿಎಂ ಹುದ್ದೆಯ ಆಕಾಂಕ್ಷಿಗಳಾಗಿದ್ದಾರೆ. ಆದರೆ ಸಿಎಂ ಹುದ್ದೆಗಾಗಿ ನಾನು ಎಂದೂ ಲಾಬಿ ಮಾಡಿಲ್ಲ ಎಂದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ದಟ್ಟ ವದಂತಿಗಳ ಸಂದರ್ಭದಲ್ಲಿ ಹಲವು ಸಚಿವರು ಬೆಂಗಳೂರಿಗೆ ತೆರಳುತ್ತಿದ್ದಾರೆ ಎಂಬ ಪ್ರಶ್ನೆಗೆ, ರಾಜಕೀಯಕ್ಕಿಂತ ಜನರ ಕಲ್ಯಾಣ ಮುಖ್ಯ, ಹೆಚ್ಚಿನ ಜಿಲ್ಲೆಗಳಲ್ಲಿ ಪ್ರವಾಹ ಮತ್ತು ಭಾರಿ ಮಳೆಯಾಗುತ್ತಿದೆ. ಜಿಲ್ಲಾ ಉಸ್ತುವಾರಿ ಸಚಿವರಾಗಿ, ಜಿಲ್ಲೆಗೆ ಭೇಟಿ ನೀಡಿ ರಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡುವುದು ನಮ್ಮ ಕರ್ತವ್ಯವಾಗಿದೆ, ಆ ಕರ್ತವ್ಯವನ್ನು ನಿರ್ವಹಿಸುವುದಕ್ಕಾಗಿ ಜಿಲ್ಲೆಗೆ ಬಂದಿರುವುದಾಗಿ ನಿರಣಿ ಹೇಳಿದರು.

SCROLL FOR NEXT