ಸುಧಾಕರ್ 
ರಾಜಕೀಯ

ಸಿಎಂ ಸ್ಥಾನಕ್ಕಷ್ಟೇ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ, ರಾಷ್ಟ್ರ, ರಾಜ್ಯ ರಾಜಕಾರಣಕ್ಕಲ್ಲ: ಸಚಿವ ಸುಧಾಕರ್

ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕಷ್ಟೇ ರಾಜೀನಾಮೆ ನೀಡಿದ್ದಾರೆ, ರಾಷ್ಟ್ರ, ರಾಜ್ಯ ರಾಜಕಾರಣಕೆಕ ನೀಡಿಲ್ಲ ಎಂದು ಸಚಿವ ಸುಧಾಕರ್ ಅವರು ಸೋಮವಾರ ಹೇಳಿದ್ದಾರೆ. 

ಬೆಂಗಳೂರು: ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕಷ್ಟೇ ರಾಜೀನಾಮೆ ನೀಡಿದ್ದಾರೆ, ರಾಷ್ಟ್ರ, ರಾಜ್ಯ ರಾಜಕಾರಣಕೆಕ ನೀಡಿಲ್ಲ ಎಂದು ಸಚಿವ ಸುಧಾಕರ್ ಅವರು ಸೋಮವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಯಡಿಯೂರಪ್ಪ ಅವರು ಅಂತಿಮವಾಗಿ ನಿರ್ಣಯ ಕೈಗೊಂಡಿದ್ದಾರೆ. ಹೈಕಮಾಂಡ್ ಸಲಹೆಯಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷದ ಸಿಪಾಯಿ, ನಿಷ್ಠಾವಂತ ಕಾರ್ಯಕರ್ತರೆಂದು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕಷ್ಟೇ ರಾಜೀನಾಮೆ ನೀಡಿದ್ದಾರೆ, ರಾಷ್ಟ್ರ, ರಾಜ್ಯ ರಾಜಕಾರಣಕ್ಕೆ ರಾಜೀನಾಮೆ ನೀಡಿಲ್ಲ ಎಂದು ಹೇಳಿದ್ದಾರೆ. 

ಜನಪರ ಕಾಳಜಿಯನ್ನು ಮತ್ತಷ್ಟು ಬಲದಿಂದ ಪ್ರತಿಪಾದಿಸಲು ಪಕ್ಷದ ಆಶಯ ಮತ್ತು ಸಿದ್ಧಾಂತದ ಅಡಿಯಲ್ಲಿ ಪಕ್ಷದ ಲಕ್ಷಾಂತರ ಕಾರ್ಯಕರ್ತರ ಸಹಕಾರಕ್ಕೆ, ಬೆಂಬಲಕ್ಕೆ ನಿಂತು ನಮಗೆಲ್ಲರಿಗೂ ಮಾರ್ಗದರ್ಶನ, ನಾಯಕತ್ವವನ್ನು ನೀಡಲಿದ್ದಾರೆ. ಅವರ ನಾಯಕತ್ವದಲ್ಲಿ ನಂಬಿಕೆಯಿಟ್ಟು ಭಾರತ ಜನತಾ ಪಕ್ಷದ ಆಶಯ ಮತ್ತು ಸಿದ್ಧಾಂತಗಳನ್ನು ಒಪ್ಪಿಕೊಂಡು ಬಂದಿದ್ದೇವೆ. ಯಡಿಯೂರಪ್ಪ ಅವರ ರಾಜೀನಾಮೆ ನಿಜಕ್ಕೂ ಆಶ್ಚರ್ಯ ಹಾಗೂ ನಿರಾಸೆಯನ್ನುಂಟು ಮಾಡಿದೆ. ಆದರೆ, ಪಕ್ಷ ದೊಡ್ಡದು. ನಾವೆಲ್ಲರೂ ಒಂದು ತಂಡವಾಗಿ ರಾಜ್ಯವನ್ನು ಮುನ್ನಡೆಸಬೇಕಿದೆ. 

ಯಡಿಯೂರಪ್ಪ ನಾಯಕತ್ವ ಅಡಿಯಲ್ಲಿ ಕೋವಿಡ್ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವ ಅವಕಾಶ ಸಿಕ್ಕಿದೆ. 2 ಬಾರಿ ರಾಜ್ಯದಲ್ಲಿ ಎದುರಾದ ನೆರೆಯನ್ನು ಉತ್ತಮವಾಗಿ ನಿಭಾಯಿಸಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ವೈಯಕ್ತಿಕವಾಗಿ ನೋವು ತಂದಿದೆ. ಪಕ್ಷದ ಸಿದ್ಧಾಂತದ ಮೇಲೆ ನಂಬಿಕೆಯಿದೆ. ಮುಂದಿನ ದಿನಗಳಲ್ಲಿ ಹೈಕಮಾಂಡ್ ನೀಡಿದ ನಿರ್ಧಾರದಂತೆ ನಡೆದುಕೊಳ್ಳುತ್ತೇವೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?