ಕೆ ಎಸ್ ಈಶ್ವರಪ್ಪ 
ರಾಜಕೀಯ

ಬಿಜೆಪಿಯಲ್ಲಿ ಗೊಂದಲ ಇರುವುದು ನಿಜ, ನಾಯಕತ್ವ ಬದಲಾವಣೆ ಬಗ್ಗೆ ನನಗೆ ಗೊತ್ತಿಲ್ಲ: ಕೆ ಎಸ್ ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲಿ ಗೊಂದಲ ಇರುವುದು ನಿಜ, ಸಣ್ಣಪುಟ್ಟ ಗೊಂದಲಗಳು ಇವೆ, ಅವುಗಳನ್ನು ಬಗೆಹರಿಸಬೇಕಿದೆ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ಸರ್ಕಾರದಲ್ಲಿ ಹಿರಿಯ ಸಚಿವರಾಗಿರುವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಗೊಂದಲ ಇರುವುದು ನಿಜ, ಸಣ್ಣಪುಟ್ಟ ಗೊಂದಲಗಳು ಇವೆ, ಅವುಗಳನ್ನು ಬಗೆಹರಿಸಬೇಕಿದೆ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ಸರ್ಕಾರದಲ್ಲಿ ಹಿರಿಯ ಸಚಿವರಾಗಿರುವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.

ರಾಜ್ಯ ಬಿಜೆಪಿಯಲ್ಲಿರುವ ಗೊಂದಲಗಳ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪನವರು ಮತ್ತು ಕೇಂದ್ರ ನಾಯಕರು ಒಟ್ಟಿಗೆ ಕುಳಿತು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ನಾಯಕತ್ವ ಬದಲಾವಣೆ ಬಗ್ಗೆ ನನಗೆ ಗೊತ್ತಿಲ್ಲ, ಅದು ಯಡಿಯೂರಪ್ಪನವರಿಗೆ ಮತ್ತು ಕೇಂದ್ರ ವರಿಷ್ಠರಿಗಷ್ಟೇ ಗೊತ್ತು, ನನಗೆ ಗೊತ್ತಿಲ್ಲ ಎಂದರು.

2019ರಲ್ಲಿ ಕಾಂಗ್ರೆಸ್ -ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರವನ್ನು ಆಪರೇಷನ್ ಕಮಲ ಮೂಲಕ ಕೆಡವಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂತು. ಬಿ ಎಸ್ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರ ಇಂದಿಗೆ ಎರಡು ವರ್ಷ ಪೂರೈಸುತ್ತಿದೆ. ಈ ಎರಡು ವರ್ಷಗಳಲ್ಲಿ ನಾಯಕತ್ವ ಬಗ್ಗೆ ಆಗಾಗ ಗೊಂದಲ, ವದಂತಿಗಳು ಕೇಳಿ ಬರುತ್ತಲೇ ಇದೆ. ಬಿಜೆಪಿ ನಾಯಕರೊಳಗೆ ಸಹ ಸಾಕಷ್ಟು ಭಿನ್ನಮತ ಕಂಡುಬಂದಿತ್ತು.

ಇಂದು ಎರಡು ವರ್ಷ ಪೂರೈಸುವ ಹಿನ್ನೆಲೆಯಲ್ಲಿ ಬಿಜೆಪಿ ಸಾಧನಾ ಕಾರ್ಯಕ್ರಮವನ್ನು ವಿಧಾನಸೌಧದಲ್ಲಿ ಹಮ್ಮಿಕೊಂಡಿದೆ. ಈ ಸಂದರ್ಭದಲ್ಲಿ ಬಿಜೆಪಿ ಸರ್ಕಾರದ ಕೆಲಸಗಳು, ಸಾಧನೆಗಳನ್ನು ಸಾರುವ ಪುಸ್ತಕವನ್ನು ಬಿಡುಗಡೆ ಮಾಡಿ ಸಿಎಂ ಯಡಿಯೂರಪ್ಪ ಮಾತನಾಡಲಿದ್ದಾರೆ. ಅದರಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಪ್ರಸ್ತಾಪಿಸಲಿದ್ದಾರೆಯೇ ಎಂಬುದು ಕುತೂಹಲವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: 48 ಗಂಟೆಗಳಲ್ಲಿ ಹೋರ್ಮುಜ್ ಜಲಸಂಧಿ ತೆರೆಯದಿದ್ದರೆ ಇರಾನ್‌ನಲ್ಲಿ ನರಕ ಸೃಷ್ಟಿಸುತ್ತೇವೆ; Trump ಕೊನೇಯ ಎಚ್ಚರಿಕೆ!

IPL 2026: ಅಹಮದಾಬಾದ್ ಮೈದಾನದಲ್ಲಿ RR ವಿರುದ್ಧ ಅತ್ಯಧಿಕ ರನ್ ಚೇಸ್‌ನಲ್ಲಿ ಕೊನೆಯ ಓವರ್‌ನಲ್ಲಿ ಸೋತ Gujarat Titans

ವಿದೇಶಗಳ Mk-84 ಗೆ ಪರ್ಯಾಯ, ಆತ್ಮನಿರ್ಭರತೆಗೆ ಉತ್ತೇಜನ: ದೇಶೀಯವಾಗಿ 1000-kg ವಾಯುಬಾಂಬ್‌ ತಯಾರಿಸಲಿರುವ ಭಾರತ!

ಮಾಗಡಿ Congress ಶಾಸಕ ಹೆಚ್​​.ಸಿ ಬಾಲಕೃಷ್ಣಗೆ ಕೋರ್ಟ್ ಶಾಕ್​​: ಜಾಮೀನು ರಹಿತ ವಾರೆಂಟ್ ಜಾರಿ

'ನೀವೇನು ಸುರಕ್ಷಿತ ಅಲ್ಲ': ಟ್ರಂಪ್ 48 ಗಂಟೆಗಳ ಕೊನೆ ಎಚ್ಚರಿಕೆ ಬೆನ್ನಲ್ಲೆ CIA Station ಗೆ ಡ್ರೋನ್ ನುಗ್ಗಿಸಿ ಇರಾನ್; 1 ನಿಮಿಷದ ಅಂತರದಲ್ಲಿ 2 ಸ್ಫೋಟ!

SCROLL FOR NEXT