ರೇಣುಕಾಚಾರ್ಯ 
ರಾಜಕೀಯ

ಹೈಕಮಾಂಡ್ ನಿರ್ಧಾರವೇ ಅಂತಿಮ: ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ

ನಾಯಕತ್ವ ವಿಚಾರ ಸಂಬಂಧ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರ ಅಂತಿಮವಾಗಿದ್ದು, ನಿರ್ಧಾರಕ್ಕೆ ತಲೆಬಾಗುತ್ತೇನೆಂದು ಬಿಜೆಪಿ ಶಾಸಕ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ಭಾನುವಾರ ಹೇಳಿದ್ದಾರೆ.

ದಾವಣಗೆರೆ: ನಾಯಕತ್ವ ವಿಚಾರ ಸಂಬಂಧ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರ ಅಂತಿಮವಾಗಿದ್ದು, ನಿರ್ಧಾರಕ್ಕೆ ತಲೆಬಾಗುತ್ತೇನೆಂದು ಬಿಜೆಪಿ ಶಾಸಕ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರು ಭಾನುವಾರ ಹೇಳಿದ್ದಾರೆ. 

ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಆದರೆ, ಅವಕಾಶ ನೀಡಿದರೆ, ಉತ್ತಮವಾಗಿ ಕೆಲಸ ಮಾಡುತ್ತೇನೆ. ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವನ್ನು ನಾನು ಮತ್ತು ಎಲ್ಲಾ ಶಾಸಕರು ಪಾಲನೆ ಮಾಡುತ್ತೇವೆ. ಪ್ರಸ್ತುತ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ನಾಯಕರ ನಡುವೆ ಯಾವುದೇ ರೀತಿಯ ಮಾತುಕತೆಗಳೂ ನಡೆದಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. 

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಹಾಗೆಂದು ನನಗೆ ಸಾಮರ್ಥ್ಯವಿಲ್ಲ ಎಂದಲ್ಲ. ಸಚಿವ ಸ್ಥಾನ ನಿಭಾಯಿಸುವ ಸಾಮರ್ಥ್ಯ ನನಗೂ ಇದೆ. ರಾಷ್ಟ್ರೀಯ ನಾಯಕರು ಏನು ತೀರ್ಮಾನ ಮಾಡುತ್ತಾರೋ ಕಾದು ನೋಡೋಣ ಎಂದು ತಿಳಿಸಿದ್ದಾರೆ.

ಮೂರು ಬಾರೀ ಶಾಸಕನಾಗಿದ್ದೇನೆ ನನಗೆ ಕ್ಷೇತ್ರ ಜನರು ಮುಖ್ಯ, ಹಾಗಾಗಿ ನಾನು ದೆಹಲಿಯಿಂದ ನೇರವಾಗಿ ಕ್ಷೇತ್ರಕ್ಕೆ ಬಂದು ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿದ್ದೇನೆ ಎಂದ ರೇಣುಕಾಚಾರ್ಯ, ನಿಗಮದ ಅಧ್ಯಕ್ಷನಾಗಿ, ಸಚಿವನಾಗಿ ಕೆಲಸ ಮಾಡಿದ್ದೇನೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3,260 ನಕಲಿ ಪಕ್ಷಗಳ ಮೂಲಕ 10,000 ಕೋಟಿ ಕಪ್ಪುಹಣ ಅಕ್ರಮ ವರ್ಗಾವಣೆ; ಬಿಜೆಪಿಯ 'ಸಿ' ಟೀಮ್: ಕಾಂಗ್ರೆಸ್ ಆರೋಪ!

'ಚಿಂತೆ ಮಾಡುತ್ತ ಕೂರಬೇಡಿ'; ಟಾಕ್ಸಿಕ್ ಸೋಲು ಒಪ್ಪಿಕೊಂಡ ಯಶ್‌: ಆಪ್ತನ ಬಳಿ ರಾಕಿಂಗ್ ಸ್ಟಾರ್ ಹೇಳಿದ್ದೇನು?

Duleep Trophy: 'ತಗೋ... ತಗೋ..ಮೊದ್ಲು DRS ತಗೋ'.. ನಾಯಕ ಇಶಾನ್ ಕಿಶನ್ ಗೆ ದುಂಬಾಲು ಬಿದ್ದ 'ಸೂಪರ್ ಡೆಪ್ಯುಟಿ' Vaibhav Sooryavanshi, ಆಗಿದ್ದೇನು? Video

5 ರಾಜ್ಯಗಳ ಚುನಾವಣೆ: ರಾಜಕೀಯ ಪಕ್ಷಗಳ ಖರ್ಚು- ದೇಣಿಗೆ ಮಾಹಿತಿ ಬಹಿರಂಗ; ಆಡಳಿತಾರೂಢ ಬಿಜೆಪಿಗೆ ಬಂದಿದ್ದೆಷ್ಟು?

ಈ ದಶಕದ ಅಂತ್ಯಕ್ಕೆ AI ನಮ್ಮನ್ನೆಲ್ಲಾ ಕೊಲ್ಲುತ್ತೆ: Anthropic ಸಂಶೋಧಕನ ರಾಜೀನಾಮೆ; ಸುರಕ್ಷತಾ ಕಾರ್ಯನಿರ್ವಾಹಕರಿಂದಲೂ ಬೆಂಬಲ!