ಬಿ.ವೈ. ವಿಜಯೇಂದ್ರ 
ರಾಜಕೀಯ

ಸೂಪರ್ ಸಿಎಂ ಟ್ಯಾಗ್ ಲೈನ್ ನಿಂದ ಹೊರಬಂದಿದ್ದೇನೆ: ಬಿ.ವೈ.ವಿಜಯೇಂದ್ರ

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿರುವುದರಿಂದ ಸೂಪರ್ ಸಿಎಂ ಎಂಬ ಟ್ಯಾಗ್ ಲೈನ್ ನಿಂದ  ಹೊರ ಬಂದಿದ್ದೇನೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಬೆಂಗಳೂರು: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿರುವುದರಿಂದ ಸೂಪರ್ ಸಿಎಂ ಎಂಬ ಟ್ಯಾಗ್ ಲೈನ್ ನಿಂದ  ಹೊರ ಬಂದಿದ್ದೇನೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಯುವಕರಿಗೆ ಹೆಚ್ಚಿನ ಅವಕಾಶ ಸಿಗುವ ನಿರೀಕ್ಷೆ ಇದೆ.‌ ರಾಜ್ಯದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳು ಹೊಸ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಚುರುಕು ಪಡೆಯಲಿವೆ ಎಂದರು.

ನೂತನ ಸಿಎಂ ಬೊಮ್ಮಾಯಿ ಅವರು ಯಡಿಯೂರಪ್ಪನವರ ಛಾಯಾ ಸಿಎಂ ಎನ್ನುವುದೆಲ್ಲಾ ಊಹಾಪೋಹ. ಈ ರೀತಿಯ ವದಂತಿಗಳಿಗೆ ಯಾರೂ ಮಹತ್ವ ನೀಡಬಾರದು. ಕಾಂಗ್ರೆಸ್‌, ಜೆಡಿಎಸ್‌ ತೊರೆದು ಬಿಜೆಪಿಗೆ ಬಂದ 17 ಮಂದಿಯನ್ನು ಪಕ್ಷ ಗೌರವಯುತವಾಗಿ ನಡೆಸಿಕೊಳ್ಳುತ್ತದೆ. ಅವರು ಯಡಿಯೂರಪ್ಪನವರನ್ನು ಮಾತ್ರವಲ್ಲ, ಬಿಜೆಪಿಯನ್ನೂ ನಂಬಿ ಬಂದಿದ್ದಾರೆ ಎಂದು ಹೇಳಿದರು.

ಸರಕಾರ ಹಾಗೂ ಪಕ್ಷದಲ್ಲಿ ನನಗೆ ಯಾವ ಸ್ಥಾನಮಾನ ನೀಡಬೇಕು ಎಂಬುದನ್ನು ಕೇಂದ್ರ- ರಾಜ್ಯ ನಾಯಕರು ನಿರ್ಧರಿಸುತ್ತಾರೆ. ಆ ಬಗ್ಗೆ ಹೆಚ್ಚು ಚರ್ಚಿಸುವುದಿಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP ಪ್ರತಿಭಟನೆಯಲ್ಲಿ ಭಾಗಿ: ನಟ Imran Khanಗೆ ಮುಂಬೈ ಪೊಲೀಸರಿಂದ 'Leave India' ನೋಟಿಸ್, ಅ.28ರೊಳಗೆ ಭಾರತ ತೊರೆಯುವಂತೆ ಗಡುವು..!

ಭಾರತೀಯರ ಸಾಮೂಹಿಕೆ ಹತ್ಯೆಗೆ ಸಂಚು: ರೈಫಲ್ ಹಿಡಿದು ಅಮೆರಿಕದ ಹಿಂದೂ ದೇವಸ್ಥಾನಕ್ಕೆ ನುಗ್ಗಿದ್ದ ಶೂಟರ್; ಕೊನೆ ಕ್ಷಣದಲ್ಲಿ ಗನ್ ಜಾಮ್, ಆರೋಪಿ ಬಂಧನ..!

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಕೇರಳಂ: ಮಿನಿ ಕೂಪರ್ ಕಾರು ಅಪಘಾತದಲ್ಲಿ ಮೂವರ ಸಾವು, ತಡರಾತ್ರಿಯಲ್ಲಿ ಹಿಂದೂ ಯುವತಿಯರು ಹೊರಗೆ ಹೋಗಿದ್ಯಾಕೆ? ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ