ರಾಜಕೀಯ

“ಜನಪೀಡಕ ಸರ್ಕಾರ” ಕಿರುಹೊತ್ತಿಗೆ ಬಿಡುಗಡೆ ಮಾಡಿದ ಸಿದ್ದರಾಮಯ್ಯ

Lingaraj Badiger

ಬೆಂಗಳೂರು: ಎರಡು ವರ್ಷದ ಬಿಜೆಪಿ ಸರ್ಕಾರವನ್ನು ಟೀಕಿಸಿರುವ ಕಾಂಗ್ರೆಸ್ ಗುರುವಾರ “ಜನಪೀಡಕ ಸರ್ಕಾರ” ಎಂಬ ಕಿರುಹೊತ್ತಿಗೆ ಬಿಡುಗಡೆ ಮಾಡಿ ಭ್ರಷ್ಟಾಚಾರ, ಅದಕ್ಷತೆ, ಆರಾಜಕತೆ, ದುರಾಡಳಿತ ಎರಡು ವರ್ಷದ ಸಾಧನೆಗಳು ಎಂದು ಟೀಕಿಸಿದೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರಿ ನಿವಾಸದಲ್ಲಿ “ಜನಪೀಡಕ” ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿ ಸರ್ಕಾರದ ವಿರುದ್ಧ ಹರಿಹಾಯ್ದರು.

ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಎರಡು ವರ್ಷದ ಸಾಧನೆ ಭ್ರಷ್ಟಾಚಾರ, ಅದಕ್ಷತೆ, ಅರಾಜಕತೆ, ದುರಾಡಳಿತ. ಅಭಿವೃದ್ಧಿ ಶೂನ್ಯ’ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರನ್ನು ನೇಮಿಸಿದ್ದೇ ಯಡಿಯೂರಪ್ಪ. ಇದರಿಂದ ಬದಲಾವಣೆ ಆಗಲ್ಲ. ಶರಣಾಗತಿ ಬಸವರಾಜ ಬೊಮ್ಮಾಯಿಗೆ ಅನಿವಾರ್ಯ. ಕೆಲಸ ಕೊಟ್ಟಿದ್ದೇ ಯಡಿಯೂರಪ್ಪ. ಹೀಗಾಗಿ, ಅವರ ಮರ್ಜಿಯಲ್ಲೇ ಇರಬೇಕಾಗುತ್ತದೆ ಎಂದರು.

ಯಡಿಯೂರಪ್ಪ ಅವರು ಎರಡು ವರ್ಷ ಸರ್ಕಾರ ನಡೆಸಿದ್ದೇನೆ ಎಂದು ಸಂಭ್ರಮದ ದಿನ ಆಚರಿಸಿ ರಾಜೀನಾಮೆ ನೀಡಿದರು. ರಾಜ್ಯವನ್ನು ಸಂಕಷ್ಟದ ದಿನದಲ್ಲೂ ಅಭಿವೃದ್ಧಿಗೆ ಕೊಂಡೊಯ್ದಿದ್ದೇವೆ ಎಂದೆಲ್ಲ ಹೇಳಿದರು ಎಂದು ಟೀಕಿಸಿದರು.

2018ರಲ್ಲಿ ಯಾರಿಗೂ ಬಹುಮತ ಇಲ್ಲದ ಸ್ಥಿತಿ ನಿರ್ಮಾಣವಾಗಿತ್ತು. ದೊಡ್ಡ ಪಕ್ಷ ಆಗಿದ್ದಕ್ಕೆ ಬಿ.ಎಸ್ ಯಡಿಯೂರಪ್ಪ ಅವರಿಗೆ ಸರ್ಕಾರ ರಚಿಸುವ ಅವಕಾಶ ಬಂತು. ಅವರು ವಿಫಲವಾದಾಗ ಮೈತ್ರಿ ಸರ್ಕಾರ ಬಂತು. ಅದನ್ನು ಬೀಳಿಸಿ ಮತ್ತೆ ಯಡಿಯೂರಪ್ಪ ವಾಮಮಾರ್ಗದಲ್ಲಿ ಅನೈತಿಕ ಸರ್ಕಾರ ರಚಿಸಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

SCROLL FOR NEXT