ಬಿಜೆಪಿಗೆ ವಲಸೆಬಂದ ಶಾಸಕರು 
ರಾಜಕೀಯ

ವಲಸಿಗರಿಗೀಗ ಬೊಮ್ಮಾಯಿ ಸಂಪುಟ ಸೇರಲು 'ಸಿಡಿ' ಸಂಕಟ

ಬಿಜೆಪಿ ಹೈಕಮಾಂಡ್ ಮಟ್ಟದಲ್ಲಿ ಬಸವರಾಜ್ ಬೊಮ್ಮಾಯಿ ಅವರ ಸಂಪುಟದಲ್ಲಿ ಯಾವುದೇ ಆರೋಪ ಇರದವರನ್ನು ಸೇರಿಸಿಕೊಳ್ಳಬೆಂಕೆಂಬ ಲೆಕ್ಕಾಚಾರಗಳು ಜೋರಾಗಿ ನಡೆಯುತ್ತಿದ್ದು, ಇದರಿಂದ ಸಿಡಿ ಭಯದಲ್ಲಿರುವ ಶಾಸಕರಿಗೆ ಸಂಪುಟದಲ್ಲಿ...

ಬೆಂಗಳೂರು: ಬಿಜೆಪಿ ಹೈಕಮಾಂಡ್ ಮಟ್ಟದಲ್ಲಿ ಬಸವರಾಜ್ ಬೊಮ್ಮಾಯಿ ಅವರ ಸಂಪುಟದಲ್ಲಿ ಯಾವುದೇ ಆರೋಪ ಇರದವರನ್ನು ಸೇರಿಸಿಕೊಳ್ಳಬೆಂಕೆಂಬ ಲೆಕ್ಕಾಚಾರಗಳು ಜೋರಾಗಿ ನಡೆಯುತ್ತಿದ್ದು, ಇದರಿಂದ ಸಿಡಿ ಭಯದಲ್ಲಿರುವ ಶಾಸಕರಿಗೆ ಸಂಪುಟದಲ್ಲಿ ಅವಕಾಶ ಕೈ ತಪ್ಪುತ್ತದೆ ಎಂಬ ಆತಂಕ ಶುರುವಾಗಿದೆ. ಆದರೆ, ಅವರನ್ನು ಬಿಟ್ಟು ಸಂಪುಟ ರಚಿಸುವುದೂ ಕಷ್ಟ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿವೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಹೊರ ಬರುತ್ತಿದ್ದಂತೆ ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದ ಕೆಲವು ವಲಸಿಗರು ತಮ್ಮ ವಿರುದ್ಧ ಮಾನಹಾನಿಕರ ಸುದ್ದಿಗಳನ್ನು ಪ್ರಕಟಿಸದಂತೆ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು. ಅಲ್ಲದೇ ಮೂಲ ಬಿಜೆಪಿಯ ಕೆಲವು ಸಚಿವರೂ ಹಾಗೂ ಶಾಸಕರು ಬೆರೆ ಬೇರೆ ಕಾರಣಗಳಿಗೆ ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ ಪ್ರಕಟಿಸದಂತೆ ತಡೆಯಾಜ್ಞೆ ತಂದಿದ್ದಾರೆ.
ಈ ಬೆಳವಣಿಗೆ ಬಿಜೆಪಿಗೆ ರಾಷ್ಟ್ರಮಟ್ಟದಲ್ಲಿ ಮುಜುಗರಕ್ಕೆ ಕಾರಣವಾಗಿತ್ತು. ಆ ರೀತಿಯ ಬೆಳವಣಿಗೆ ಮುಂಬರುವ ದಿನಗಳಲ್ಲಿ ಮರುಕಳಿಸದಂತೆ ಸಿಡಿ ಆತಂಕದಲ್ಲಿರುವವರಿಗೆ ಸಂಪುಟದಲ್ಲಿ ಅವಕಾಶ ನೀಡಬಾರದು ಎಂದು ಆರ್‌ಎಸ್‌ಎಸ್ ನಾಯಕರು ಸಲಹೆ ನೀಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಸಿಡಿ ಆತಂಕದಲ್ಲಿರುವ ಶಾಸಕರನು ಸಚಿವರನ್ನಾಗಿ ಮಾಡಿದರೆ, ನಂತರ ಅವರ ವಿರುದ್ಧ ಸಿಡಿ ಬಿಡುಗಡೆಯಾದರೆ ಪಕ್ಷ ಹಾಗೂ ಸರ್ಕಾರ ಮತ್ತೆ ರಾಷ್ಟ್ರ ಮಟ್ಟದಲ್ಲಿ ಮುಜುಗರ ಅನುಭವಿಸಬೇಕಾಗುತ್ತದೆ ಎನ್ನುವ ಕಾರಣಕ್ಕೆ ಯಾವುದೇ ಆರೋಪ ಇರದವರನ್ನು ನೂತನ ಸಂಪುಟಕ್ಕೆ ಪರಿಗಣಿಸಬೇಕೆಂಬ ಲೆಕ್ಕಾಚಾರ ಬಿಜೆಪಿ ಹೈಕಮಾಂಡ್ ಹೊಂದಿದೆ ಎನ್ನಲಾಗುತ್ತಿದೆ.

ಆದರೆ, ಬಹುತೇಕ ವಲಸೇ ಶಾಸಕರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವುದರಿಂದ ಅವರನ್ನು ಹೊರಗಿಟ್ಟು ಸಂಪುಟ ರಚಿಸಿದರೆ, ಸುಗಮ ಸರ್ಕಾರ ನಡೆಸುವುದು ಕಷ್ಟ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿವೆ.

ಮಾಜಿ ಸಿಎಂ ಯಡಿಯೂರಪ್ಪ ವಲಸಿಗರಿಗೆ ನ್ಯಾಯ ಕೊಡಿಸುವ ಭರವಸೆ ನೀಡಿರುವುದರಿಂದ ಬಿಜೆಪಿ ಹೈಕಮಾಂಡ್ ಹಾಗೂ ನೂತನ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಸಿಡಿ ಶಾಸಕರ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಬಿಸಿ ತುಪ್ಪವಾಗಿ ಪರಿಣಮಿಸಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT