ಬಸವರಾಜ ಬೊಮ್ಮಾಯಿ 
ರಾಜಕೀಯ

ಬಸವರಾಜ ಬೊಮ್ಮಾಯಿ ಸಂಪುಟ ಸೇರಲು ಶಾಸಕರ ಹರಸಾಹಸ: ಹೈಲೆವೆಲ್ ಲಾಬಿ!

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದೆ, ತಮ್ಮ ಕ್ಯಾಬಿನೆಟ್ ಸಚಿವರನ್ನು ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡ್ ಮುಖ್ಯಮಂತ್ರಿಗಳಿಗೆ ಸಮಯಾವಕಾಶ ನೀಡಿದೆ. 

ಬೆಳಗಾವಿ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದೆ, ತಮ್ಮ ಕ್ಯಾಬಿನೆಟ್ ಸಚಿವರನ್ನು ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡ್ ಮುಖ್ಯಮಂತ್ರಿಗಳಿಗೆ ಸಮಯಾವಕಾಶ ನೀಡಿದೆ. 

ಮಾಜಿ ಸಿಎಂ ಯಡಿಯೂರಪ್ಪ ಅವರ ನಿಕಟವರ್ತಿಗಳಾದ ರಮೇಶ್ ಜಾರಕಿಹೊಳಿ ಗುಂಪಿನ 17 ಶಾಸಕರನ್ನು ಹೊರಗಿಟ್ಟು ಸಂಪುಟ ರಚನೆಯಾಗುವುದೇ ಎಂಬುದನ್ನು ಕಾದು ನೋಡಬೇಕಾಗಿದೆ.

ಯಡಿಯೂರಪ್ಪ ಅವರ ಸಂಪುಟದಲ್ಲಿದ್ದ ಹಲವು ಹಿರಿಯ ಸಚಿವರು ಮತ್ತೆ ಬೊಮ್ಮಾಯಿ ಸಂಪುಟಕ್ಕೆ ಸೇರುವ ಸಾಧ್ಯತೆಯಿದೆ, 38 ಲಿಂಗಾಯತ ಶಾಸಕರಿದ್ದು, ಅವರೆಲ್ಲಾ ಆರ್ ಎಸ್ ಎಸ್ ಮುಖಂಡರ ಜೊತೆ ಸಂಪರ್ಕದಲ್ಲಿದ್ದು, ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ.

ಮೂಲಗಳ ಪ್ರಕಾರ, ಯಡಿಯೂರಪ್ಪ ಅವರು ತಮ್ಮ ಆಪ್ತರಾದ ಸಿ ಸಿ ಪಾಟೀಲ್, ಉಮೇಶ್ ಕತ್ತಿ, ಮಾಧುಸ್ವಾಮಿ, ಸುರೇಶ್ ಕುಮಾರ್, ಹಾಲಪ್ಪ ಆಚಾರ್ ಮತ್ತು ತಿಪ್ಪಾರೆಡ್ಡಿ ಅವರನ್ನು ಹೊಸ ಕ್ಯಾಬಿನೆಟ್‌ಗೆ ಸೇರಿಸಿಕೊಳ್ಳಲು ಉತ್ಸುಕರಾಗಿದ್ದಾರೆ. 

ಯಡಿಯೂರಪ್ಪ ಸಂಪುಟದಲ್ಲಿ ಸ್ಥಾನ ವಂಚತರಾಗಿದ್ದ ಹಾವೇರಿಯ ನೆಹರು ಓಲೇಕಾರ್, ರಾಯಭಾಗದ ದುರ್ಯೋಧನ ಐಹೊಳೆ, ಮಹಾಂತೇಶ ಕವಟಗಿಮಠ, ಅಭಯ ಪಾಟೀಲ್ ಮತ್ತು ಅನಿಲ್ ಬೆನಕೆ, ಮಹೇಶ್ ಕುಮಟಳ್ಳಿ, ಪಿ ರಾಜೀವ್, ಆನಂದ್ ಮಾಮನಿ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುತ್ತಿದ್ದಾರೆ.

ಹಿರಿಯರನ್ನು ಕಡೆಗಣಿಸುವ ಯೋಜನೆ ಬಿಜೆಪಿಗೆ ಇದ್ದರೇ, ಜಗದೀಶ್ ಶೆಟ್ಟರ್, ಕೆ ಎಸ್ ಈಶ್ವರಪ್ಪ, ಉಮೇಶ್ ಕತ್ತಿ ಮತ್ತು ಶ್ರೀಮಂತ್ ಪಾಟೀಲ್ ರಂತಹ ಹಲವಾರು ಹಿರಿಯರನ್ನು ಪರಿಗಣಿಸಲಾಗುವುದಿಲ್ಲ. 

ಸೆಕ್ಸ್ ಸಿಡಿ ಪ್ರಕರಣದಲ್ಲಿ ಮಾಜಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕ್ಲೀನ್ ಚಿಟ್ ಪಡೆಯುವವರೆಗೂ, ಜಾರಕಿಹೊಳಿ ಸಹೋದರ ಅರಭಾವಿ ಎಂಎಲ್ಎಬಾಲಚಂದ್ರ ಜಾರಕಿಹೊಳಿ ಅವರನ್ನು ಬೊಮ್ಮಾಯಿ ಸಂಪುಟಕ್ಕೆ ಸೇರಿಸಬೇಕೆಂದು ಒತ್ತಾಯ ಕೇಳಿ ಬರುತ್ತಿದೆ.

ಬಿಜೆಪಿಯ ಹಿರಿಯ ಶಾಸಕ ಉಮೇಶ್ ಕತ್ತಿ ಅವರು, ಈ ಹಿಂದೆ ಅನೇಕ ಖಾತೆ ನಿರ್ವಹಿಸಿದ ಅನುಭವ ಇರುವುದರಿಂದ ಸಂಪುಟಕ್ಕೆ ಸೇರುವ ವಿಶ್ವಾಸವಿದೆ. ಹೊಸ ಕ್ಯಾಬಿನೆಟ್‌ನಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಿದೆ ಎಂದು ಹೇಳಿದರು. ಯಡಿಯೂರಪ್ಪನವರೊಂದಿಗಿನ ಅವರ ನಿಕಟ ಸಂಪರ್ಕವು ಅವರಿಗೆ ಹೆಚ್ಚುವರಿ ಅನುಕೂಲವಾಗಲಿದೆ ಎಂದು ಹೇಳಲಾಗಿದೆ.

ಹಲವಾರು ಯುವ ಶಾಸಕರ ಬೆಂಬಲಿಗರು ಸಚಿವ ಸ್ಥಾನ ನೀಡುವಂತೆ ಸಾಮಾಜಿಕ ಮಾಧ್ಯಮದಲ್ಲಿ ಬಿಜೆಪಿಗೆ ಮನವಿ ಮಾಡಿದೆ. ಬೆಳಗಾವಿ ಶಾಸಕ ಅನಿಲ್ ಬೆನಕೆ ಅವರ ಬೆಂಬಲಿಗರು ,ಅವರನ್ನು ಮರಾಠ ಕೋಟಾದ ಅಡಿಯಲ್ಲಿ ಸಂಪುಟಕ್ಕೆ ಸೇರಿಸಬೇಕೆಂದು ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT