ಯಡಿಯೂರಪ್ಪ ಮತ್ತು ವಿಜಯೇಂದ್ರ 
ರಾಜಕೀಯ

ರಾಷ್ಟ್ರ ರಾಜಕಾರಣಕ್ಕೆ ಯಡಿಯೂರಪ್ಪ?: ಸಕ್ರಿಯ ರಾಜಕೀಯಕ್ಕೆ ಬರುವಂತೆ ವಿಜಯೇಂದ್ರಗೆ ಬಿಎಸ್ ವೈ ಪರಮಾಪ್ತರ ಒತ್ತಡ!

ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜಿನಾಮೆ ನೀಡಿದ ಬೆನ್ನಲ್ಲೇ ಅವರ ಪರಮಾಪ್ತರೆಲ್ಲ ಸೇರಿ ವಿಜಯೇಂದ್ರ ಅವರನ್ನು ಚೊಚ್ಚಲ ಚುನಾವಣೆಯಲ್ಲಿ ಕಣಕ್ಕಿಳಿಸಲು ತಯಾರಿ ಆರಂಭಿಸಿದ್ದಾರೆ.

ಮೈಸೂರು: ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜಿನಾಮೆ ನೀಡಿದ ಬೆನ್ನಲ್ಲೇ ಅವರ ಪರಮಾಪ್ತರೆಲ್ಲ ಸೇರಿ ವಿಜಯೇಂದ್ರ ಅವರನ್ನು ಚೊಚ್ಚಲ ಚುನಾವಣೆಯಲ್ಲಿ ಕಣಕ್ಕಿಳಿಸಲು ತಯಾರಿ ಆರಂಭಿಸಿದ್ದಾರೆ.

ಬಸವಕಲ್ಯಾಣ ಅಥವಾ ರಾಣೆ ಬೆನ್ನೂರು ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆಗೆ ವಿಜಯೇಂದ್ರ ಹೆಸರು ಕೇಳಿ ಬರುತ್ತಿದೆ. ಆದರೆ ಚುನಾವಣಾ ಕಣದಿಂದ ದೂರ ಉಳಿದು ಪಕ್ಷದ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುವುದಾಗಿ ವಿಜಯೇಂದ್ರ ತಿಳಿಸಿದ್ದಾರೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಭದ್ರಕೋಟೆಯಾಗಿದ್ದ ಶಿರಾ ಮತ್ತು ಕೆಆರ್ ಪೇಟೆ ವಿಧಾನಸಬೆ ಉಪ ಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದಾಗ ಪಕ್ಷದ ಹೈಕಮಾಂಡ್ ವಿಜಯೇಂದ್ರ ಅವರ ಕಾರ್ಯವನ್ನು ಶ್ಲಾಘಿಸಿತ್ತು. 

ಸದ್ಯ ಸಿಂಧಗಿ ಮತ್ತು ಹಾನಗಲ್ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಾಗಿದೆ, ಯಡಿಯೂರಪ್ಪ ಅವರ ಆಪ್ತ ಸಿಎಂ ಉದಾಸಿ ನಿಧನದಿಂದ ತೆರವಾಗಿರುವ ಹಾನಗಲ್ ಕ್ಷೇತ್ರದಿಂದ ವಿಜಯೇಂದ್ರ ಅವರನ್ನು ಕಣಕ್ಕಿಳಿಸುವಂತೆ ಹೇಳಲಾಗುತ್ತಿದೆ. ಜೆಡಿಎಸ್ ಶಾಸಕ ಎಂಸಿ ಮನಗೂಳಿ ಅವರ ನಿಧನದಿಂದ ತೆರವಾಗಿರುವ ಸಿಂಧಗಿ ಕ್ಷೇತ್ರಕ್ಕೆ ಜನವರಿಯಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ.

ಯಡಿಯೂರಪ್ಪನವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದರೊಂದಿಗೆ ಮತ್ತು ವಿಜಯೇಂದ್ರ ಅವರು "ಸೂಪರ್ ಸಿಎಂ" ಟ್ಯಾಗ್ ಇರುವುದಿಲ್ಲ, ಹೀಗಾಗಿ ಬಿಎಸ್ ವೈ ನಿಷ್ಠರು ವಿಜಯೇಂದ್ರ ವಿಧಾನಸೌಧವನ್ನು ಪ್ರವೇಶಿಸಲು ಬಯಸುತ್ತಾರೆ, ಶಾಸಕರಾದರೇ ರಾಜ್ಯ ರಾಜಕೀಯಕ್ಕೆ ಹೊಸ ಆಯಾಮವನ್ನು ತರುತ್ತದೆ ಎಂದು ಆಶಿಸಿದ್ದಾರೆ. ಶಾಸಕರಾಗಿ  
ಆಯ್ಕೆಯಾದರೇ ಸದನದ ಒಳಗೆ ಮತ್ತು ಹೊರಗೆ ಶಾಸಕರೊಂದಿಗೆ ಬಾಂಧವ್ಯವನ್ನು ನಿರ್ಮಿಸಲು ಸಹಾಯ ಮಾಡುತ್ತದೆ ಮತ್ತು ಭವಿಷ್ಯದಲ್ಲಿ ಸರ್ಕಾರದಲ್ಲಿ ಯಾವುದೇ ಜವಾಬ್ದಾರಿ ತೆಗೆದುಕೊಳ್ಳಲು ಅವರಿಗೆ ಬಲವಾದ ಆಧಾರವನ್ನು ಒದಗಿಸುತ್ತದೆ ಎಂಬುದು ಅವರ ವಾದ.

ಸಿಎಂ ಉದಾಸಿ ಜಾರಿಗೆ ತಂದಿರುವ ಅಭಿವೃದ್ಧಿ ಕಾರ್ಯಗಳನ್ನು ಆಧರಿಸಿ ಉಪಚುನಾವಣೆಯನ್ನು ಎದುರಿಸಲು ಸಜ್ಜಾಗಿದ್ದೇವೆ ಎಂದು ಹಾವೇರಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದರಾಜು ಕಲ್ಕೋಟಿ  ಹೇಳಿದ್ದಾರೆ. ವಿಜಯೇಂದ್ರ ಅವರ ಹೆಸರು ಇಲ್ಲಿಯವರೆಗೆ ಪ್ರಸ್ತಾಪವಾಗಿಲ್ಲ. ಬಿಜೆಪಿ ಟಿಕೆಟ್‌ನಲ್ಲಿ ಯಾರು ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಾರೋ ಅವರು ಗೆಲ್ಲುತ್ತಾರೆ.  
ಉಪಚುನಾವಣೆ ಸಂಬಂಧ ಪಕ್ಷದೊಳಗೆ ಚರ್ಚೆಗಳು ಆರಂಭವಾಗಬೇಕಿದೆ, ಅಭ್ಯರ್ಥಿಗಳನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಸ್ಪಷ್ಟಪಡಿಸಿದರು.

ಮುಂಬರುವ ತಿಂಗಳುಗಳಲ್ಲಿ ರಾಜ್ಯ ರಾಜಕೀಯ ಸನ್ನಿವೇಶವು ಹೇಗೆ ಬದಲಾವಣೆಯಾಗುತ್ತವೆ ಎಂಬುದರ ಮೇಲೆ ಎಲ್ಲವೂ ಅವಲಂಬಿತವಾಗಿರುವುದರಿಂದ ವಿಜಯೇಂದ್ರ ಅವರು ಚುನಾವಣಾ ರಾಜಕೀಯಕ್ಕೆ ಧುಮುಕುವುದಿಲ್ಲ ಎಂದು ಬಿಜೆಪಿಯ ಕೆಲವು ಮೂಲಗಳು ತಿಳಿಸಿವೆ. ತಮ್ಮ ತಂದೆ ಯಡಿಯೂರಪ್ಪನವರನ್ನು ರಾಜ್ಯಪಾಲರನ್ನಾಗಿ ಮಾಡಿದರೆ ಅಥವಾ ಬಿಜೆಪಿ ಹೈಕಮಾಂಡ್ ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಹುದ್ದೆ ನೀಡುವ ಸಾಧ್ಯತೆಯಿದೆ. ಆ ವೇಲೆ ವಿಜಯೇಂದ್ರ ತನ್ನ ತಂದೆಯ ಕ್ಷೇತ್ರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರವನ್ನು ಆರಿಸಿಕೊಳ್ಳುತ್ತಾರೆ.

ವಿಜಯೇಂದ್ರ ಅವರನ್ನು ರಾಜ್ಯ ಘಟಕದ ಕಾರ್ಯಾಧ್ಯಕ್ಷರನ್ನಾಗಿ ಮಾಡಬೇಕು ಮತ್ತು 2023 ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಮುನ್ನಡೆಸಬೇಕು, ಇದರಿಂದ ಮುಂದೆ ಅವರು ಉನ್ನತ ಹುದ್ದೆಗೆ ಅವಕಾಶ ಪಡೆಯುತ್ತಾರೆ ಎಂದು ಕೆಲವರು ಹೇಳಿದ್ದಾರೆ. ಏತನ್ಮಧ್ಯೆ, ಮೈಸೂರಿನ ಬಿಜೆಪಿ ಘಟಕವು ವಿಜಯೇಂದ್ರ 2023 ರ ವಿಧಾನಸಭಾ ಚುನಾವಣೆಯಲ್ಲಿ ವರುಣಾದಿಂದ ಸ್ಪರ್ಧಿಸಬೇಕೆಂದು ಬಯಸಿದೆ. ಸದ್ಯ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಪ್ರತಿನಿಧಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT