ಯಡಿಯೂರಪ್ಪ 
ರಾಜಕೀಯ

'ಹಾದಿ-ಬೀದಿಯಲ್ಲಿ ನಿಂತು ಒಬ್ಬೊಬ್ಬ ನಾಯಕ ಒಂದೊಂದು ಹೇಳಿಕೆ: ನೊಂದ ಸಿಎಂ ರಾಜಿನಾಮೆ ಮಾತು'

ಸಿಎಂ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವದಿಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಬಿಎಸ್‍ವೈ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕುರಿತಾಗಿ ಸ್ಪಷ್ಟನೆ ನೀಡಿದ್ದಾರೆ. 

ಬೆಳಗಾವಿ: ಸಿಎಂ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವದಿಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಬಿಎಸ್‍ವೈ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕುರಿತಾಗಿ ಸ್ಪಷ್ಟನೆ ನೀಡಿದ್ದಾರೆ. 

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಸಿಎಂ ಯಡಿಯೂರಪ್ಪ ಅವರ ಮನಸ್ಸಿಗೆ ಆದ ಬೇಸರದಿಂದ ಹಾಗೆ ಹೇಳಿದ್ದಾರೆ. ಅನೇಕರು ಬೇರೆ ಬೇರೆ ತರಹ ಮಾತನಾಡಿದ್ದರಿಂದ ಈ ರೀತಿ ಹೇಳಿರಬಹುದು ಎಂದಿದ್ದಾರೆ.

ನಾಯಕತ್ವ ಬದಲಾವಣೆ ವಿಷಯದಲ್ಲಿ ಹಾದಿ- ಬೀದಿಯಲ್ಲಿ ಮಾತನಾಡುವವರಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನೊಂದಿದ್ದಾರೆ. ಆದ್ದರಿಂದಲೇ, ಹೈಕಮಾಂಡ್ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎಂಬ ಮಾತುಗಳನ್ನು ಆಡಿದ್ದಾರೆ' ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು. 

ಪ್ರತಿ ದಿನ ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡಿದರೆ ಆಡಳಿತ ಯಂತ್ರದ ಮೇಲೆ ಪರಿಣಾಮ ಬಿರುತ್ತದೆ. ಅಲ್ಲದೇ ಅದು ಮಕ್ಕಳ ಆಟವಾಗುತ್ತದೆ. ಹಾದಿ ಬೀದಿಯಲ್ಲಿ ಮಾತನಾಡುವುದು ಸರಿಯಲ್ಲ' ಎಂದರು.

'ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲಿ ನಡೆಯುತ್ತದೆ. ಯಾರೋ ದೆಹಲಿಗೆ ಹೋಗಿ ಬಂದರೆ ಮುಖ್ಯಮಂತ್ರಿ ಬದಲಾವಣೆಗೆ ಹೋಗಿದ್ದಾರೆ ಎನ್ನಲಾಗುವುದಿಲ್ಲ. ಮುಖ್ಯಮಂತ್ರಿ ಬದಲಾವಣೆ ಅಷ್ಟು ಸುಲಭದ ಕೆಲಸವಲ್ಲ' ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel