ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಹಾಸನ ಜಿಲ್ಲೆಯಲ್ಲಿ ಕೋವಿಡ್-19 ನಿರ್ವಹಣೆಯನ್ನು ಪರಿಶೀಲಿಸಿದರು. 
ರಾಜಕೀಯ

ರಾಜ್ಯದಲ್ಲಿ ಮುಂದಿನ 2 ವರ್ಷ ನಾನೇ ಮುಖ್ಯಮಂತ್ರಿ: ಬಿ.ಎಸ್. ಯಡಿಯೂರಪ್ಪ

ರಾಜ್ಯದಲ್ಲಿ ಮುಂದಿನ 2 ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ.

ಹಾಸನ: ರಾಜ್ಯದಲ್ಲಿ ಮುಂದಿನ 2 ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ.

ಹಾಸನದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಬಿಜೆಪಿ ರಾಷ್ಟ್ರೀಯ ನಾಯಕರು ನನ್ನ ಮೇಲೆ ವಿಶ್ಚಾಸವಿಟ್ಟು ರಾಜ್ಯ ಸರ್ಕಾರದ ನಾಯಕತ್ವದಲ್ಲಿ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದರಿಂದ ನನ್ನ ಜವಾಬ್ದಾರಿ ಹೆಚ್ಚಾಗಿದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಒಳ್ಳೆಯ ಕೆಲಸ ಮಾಡುವೆ ಎಂದು ಹೇಳಿದ್ದಾರೆ. 

ಬಿಜೆಪಿ ರಾಜ್ಯ ಉಸ್ತುವಾರಿ ಅರಣ್ ಸಿಂಗ್ ಅವರೇ ರಾಜ್ಯದ ನಾಯಕತ್ವದಲ್ಲಿ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅವರ ಹೇಳಿಕೆಯಿಂದ ನನಗೆ 100ರಷ್ಟು ಬಲ ಬಂದಿದೆ ಎಂದು ತಿಳಿಸಿದ್ದಾರೆ.

ಅರುಣ್ ಸಿಂಗ್ ಅವರ ಹೇಳಿಕೆಯಿಂದ ರಾಜ್ಯದಲ್ಲಿ ಎದ್ದಿದ್ದ ನಾಯಕತ್ವದ ಗೊಂದಲ ಬಗೆಹರಿದಿದೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನನ್ನ ಮೇಲೆ ಇಟ್ಟಿರುವ ವಿಶ್ವಾಸ ಇಟ್ಟಿದ್ದಾರೆ. ಇದರಿಂದ ನನ್ನ ಜವಾಬ್ದಾರಿ ಹೆಚ್ಚಾಗಿದೆ. ಮೋದಿ ಹಾಗೂ ಅಮಿತ್ ಶಾ ಅವರ ಪ್ರೀತಿ, ವಿಶ್ವಾಸ ಉಳಿಸಿಕೊಳ್ಳುವೆ. ಪ್ರಾಮಾಣಿಕವಾಗಿ ಅಭಿವೃದ್ಧಿ ಪರ ಕೆಲಸ ಮಾಡುತ್ತೇನೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್