ರಾಜಕೀಯ

ಕಾರ್ಯಕರ್ತರಲ್ಲಿ ಕೆಲ ಭಿನ್ನಾಭಿಪ್ರಾಯಗಳಿದ್ದರೂ, ಎಲ್ಲರೂ ಒಗ್ಗಟ್ಟಿನಿಂದ ಇದ್ದಾರೆ; ನಾಯಕತ್ವ ಬದಲಾವಣೆಯಿಲ್ಲ: ಅರುಣ್ ಸಿಂಗ್ 

Sumana Upadhyaya

ನವದೆಹಲಿ: ಪಕ್ಷದ ಕಾರ್ಯಕರ್ತರಲ್ಲಿ ಕೆಲವೊಮ್ಮೆ ಭಿನ್ನಾಭಿಪ್ರಾಯ, ಅಸಮಾಧಾನ ಬರುವುದು ಸಾಮಾನ್ಯ, ಆದರೆ ಅವರೆಲ್ಲರೂ ಒಗ್ಗಟ್ಟಾಗಿದ್ದಾರೆ, ಪಕ್ಷದ ವಿಷಯ ಬಂದಾಗ ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಸಿಎಂ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ. ನಾನು ಕರ್ನಾಟಕಕ್ಕೆ ಹೋಗಿ ಪಕ್ಷದ ನಾಯಕರಲ್ಲಿ, ಕಾರ್ಯಕರ್ತರಲ್ಲಿ ಮಾತನಾಡುತ್ತೇನೆ ಎಂದಿದ್ದಾರೆ.

ಕರ್ನಾಟಕದಲ್ಲಿ ಕೋವಿಡ್ 19 ಸಂಕಷ್ಟದ ಈ ಸಮಯದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಸಚಿವರುಗಳು, ಪಕ್ಷದ ನಾಯಕರು, ಕಾರ್ಯಕರ್ತರು ಚೆನ್ನಾಗಿ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಮಾತ್ರ ರಹಸ್ಯವಾಗಿ ಪಿತೂರಿ ನಡೆಸಿ ಈ ರೀತಿಯ ಊಹಾಪೋಹಗಳನ್ನು ಹಬ್ಬಿಸುತ್ತಿದೆ ಎಂದರು. ಕರ್ನಾಟಕದಲ್ಲಿ ಮುಖ್ಯಮಂತ್ರಿ ಅಥವಾ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯಿಲ್ಲ ಎಂದು ಪುನರುಚ್ಛರಿಸಿದ್ದಾರೆ. 

ಸಿಎಂ ಅಶೋಕ್ ಗೆಹ್ಲೋಟ್ ನಾಯಕತ್ವದಲ್ಲಿ ರಾಜಸ್ಥಾನದಲ್ಲಿ ಬೇಹುಗಾರಿಕೆ ನಡೆಸುವ ಸಂಚು ನಡೆಯುತ್ತಿದೆ. ಮೊದಲಿನಿಂದಲೂ ಅದು ನಡೆಯುತ್ತಿತ್ತು, ಫೋನ್ ಕದ್ದಾಲಿಕೆ ನಡೆದಿದೆ ಎಂದು ಅವರು ವಿಧಾನಸಭೆಯಲ್ಲಿ ಒಪ್ಪಿಕೊಂಡಿದ್ದಾರೆ. ರಾಜಸ್ತಾನ ಕಾಂಗ್ರೆಸ್ ನಲ್ಲಿ ಸಂಘರ್ಷವಿದ್ದು ಪರಿಸ್ಥಿತಿ ಅಲ್ಲಿ ಕೆಟ್ಟ ಹಂತ ತಲುಪಿದೆ ಎಂದಿದ್ದಾರೆ. 

SCROLL FOR NEXT