ರಾಜಕೀಯ

ನೀರಾವರಿ ಹಗರಣ ಸದನ ಸಮಿತಿ ತನಿಖೆ ನಡೆಸಿ: ಡಿ.ಕೆ.ಶಿವಕುಮಾರ್ ಆಗ್ರಹ

Manjula VN

ಬೆಂಗಳೂರು: ರಾಜ್ಯದ ಜಲಸಂಪನ್ಮೂಲ ಇಲಾಖೆಯಲ್ಲಿ ನಿಯಮಾವಳಿ ಉಲ್ಲಂಘಿಸಿ ರೂ.20 ಸಾವಿರ ಕೋಟಿ ಮೊತ್ತದ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ ಎಂದು ಬಿಜೆಪಿ ನಾಯಕರೇ ಆರೋಪಿಸಿದ್ದಾರೆ. ಇದಕ್ಕೆ ಮೌನವಹಿಸುವ ಮೂಲಕ ಮುಖ್ಯಮಂತ್ರಿಗಳು ಆರೋಪ ನಿಜ ಎಂದು ಒಪ್ಪಿಕೊಂಡಿದ್ದು, ಹಗರಣದ ತನಿಖೆಗೆ ಸರ್ಕಾರ ಜಂಟಿ ಸದನ ಸಮಿತಿ ರಚಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. 

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಮನ ಹೆಸರು ಹೇಳುವ ಪಕ್ಷದಲ್ಲಿ ರಾಮಾಯಣ, ಮಹಾಭಾರತ ಎಲ್ಲವೂ ನಡೆಯುತ್ತಿದೆ. ಬಿಜೆಪಿಯ ಯುದ್ಧಕಾಂಡ, ಜನಸಾಮಾನ್ಯರ ಕರ್ಮಕಾಂಡ. ಇದು ಮುಗಿಯದ ನರಕ ಯಾತನೆಯಾಗಿದೆ. ಈ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ನಾನು ಸದನದಲ್ಲಿ ಈ ಬಗ್ಗೆ ಭವಿಷ್ಯ ಹೇಳಿದ್ದೆ. ಈ ಸಮಯದಲ್ಲಿ ಬಿಜೆಪಿಯವರಿಗೆ ಹೆಚ್ಚು ಮಾತನಾಡಲು ನಾವು ಅವಕಾಶ ಕೊಡಬೇಕು. ರಾಜ್ಯಕ್ಕೆ ಅವರೇ ಸಂದೇಶ ನೀಡುತ್ತಿದ್ದಾರೆ. ಅವರು ಆಡಳಿತ ಪಕ್ಷದ ಜನರ ಪ್ರತಿನಿಧಿಗಳು. ಅವರಿಗೆ ನಮಗಿಂತ ಹೆಚ್ಚಿನ ಸತ್ಯ ಗೊತ್ತಿರುತ್ತದೆ. ವಿಶ್ವನಾಥ್ ಅವರು ನೀರಾವರಿ ಇಲಾಖೆ ಅವ್ಯವಹಾರದ ಬಗ್ಗೆ ಮಾಡಿರುವ ಆರೋಪ ಸಂಬಂಧ ನನಗೂ ಮಾಹಿತಿ ಇದೆ. 10 ಕೋಟಿ ರೂ. ಕಾಮಗಾರಿಗೆ 20 ಕೋಟಿ ರೂ. ಅಂದಾಜು ವೆಚ್ಚ ಸಿದ್ಧವಾಗಿದೆ. ಈ ಸರ್ಕಾರ ಬಂದ ಮೇಲೆ ಆರ್ಥಿಕ ಸಮಸ್ಯೆ ಇದ್ದರೂ, ನೀರಾವರಿ ಇಲಾಖೆಯಲ್ಲಿ ಹೇಗೆ ನಿಯಮಗಳ ಉಲ್ಲಂಘನೆ ಮಾಡಿ ಕಾಮಗಾರಿಗಳಿಗೆ ಅನುಮತಿ ನೀಡಲಾಗುತ್ತಿದೆ ಎಂಬುದೂ ತಿಳಿದಿದೆ ಎಂದು ಹೇಳಿದ್ದಾರೆ.

ಬಿಜೆಪಿಯ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಅವರು ನೀರಾವರಿ ಇಲಾಖೆ ಅವ್ಯವಹಾರದ ಬಗ್ಗೆ ಮಾಡಿರುವ ಆರೋಪ ಸಂಬಂಧ ನನಗೂ ಮಾಹಿತಿ ಇದೆ. ರೂ.10 ಸಾವಿರ ಕೋಟಿ ಕಾಮಗಾರಿಗೆ ರೂ.20 ಸಾವಿರ ಕೋಟಿ ಅಂದಾಜು ವೆಚ್ಚ ಸಿದ್ಧವಾಗಿದೆ. ಈ ಸರ್ಕಾರ ಬಂದ ಮೇಲೆ ಆರ್ಥಿಕ ಸಮಸ್ಯೆ ಇದ್ದರೂ, ನೀರಾವರಿ ಇಲಾಖೆಯಲ್ಲಿ ಹೇಗೆ ನಿಯಮಗಳ ಉಲ್ಲಂಘಿಸಿ ಕಾಮಗಾರಿಗಳಿಗೆ ಅನುಮತಿ ನೀಡಲಾಗುತ್ತಿದೆ ಎಂಬುದೂ ತಿಳಿದಿದೆ. 

ಇನ್ನೂ ಏನೆಲ್ಲಾ ಮಾಡುತ್ತಾರೋ ಮಾಡಲಿ, ಸದನದಲ್ಲಿ ಎಲ್ಲವನ್ನೂ ಒಟ್ಟಿಗೆ ಚರ್ಚೆ ಮಾಡೋಣ ಎಂದು ಕಾಯುತ್ತಿದ್ದೆವು. ಈ ಮಧ್ಯದಲ್ಲಿ ವಿಶ್ವನಾಥ್ ಅವರು ಈ ವಿಚಾರ ಬಿಚ್ಚಿಟ್ಟಿದ್ದಾರೆ. ಮುಖ್ಯಮಂತ್ರಿಗಳ ಬಳಿ ಈ ಇಲಾಖೆ ಇದ್ದು, ಈ ಬಗ್ಗೆ ಅವರು ಸ್ಪಷ್ಟನೆ ನೀಡದೇ ಅಧಿಕಾರಿಗಳ ಮೂಲಕ ಹೇಳಿಕೆ ಕೊಡಿಸಿದ್ದಾರೆ. ಆ ಮೂಲಕ ಪರೋಕ್ಷವಾಗಿ ಈ ಆರೋಪ ಸತ್ಯ ಎಂದು ಒಪ್ಪಿಕೊಂಡಿದ್ದಾರೆಂದು ಆರೋಪಿಸಿದ್ದಾರೆ. 

SCROLL FOR NEXT