ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮೂರು ದಿನಗಳ ಭೇಟಿಗಾಗಿ ದೆಹಲಿಗೆ ಭಾನುವಾರ ಪ್ರಯಾಣ ಬೆಳೆಸಿದ್ದಾರೆ.
ರಾಜ್ಯದಲ್ಲಿನ ಕೊರೋನಾ ಸ್ಥಿತಿಗತಿ, ಪಕ್ಷ ಇದುವರೆಗೆ ಕೊರೋನಾ ವಿಚಾರದಲ್ಲಿ ಮಾಡಿರುವ ಕೆಲಸಗಳು, ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ನಡೆಸಿರುವ ಪ್ರತಿಭಟನೆ ಸಂಬಂಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೆವಾಲಾ ಅವರಿಗೆ ಮಾಹಿತಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ದೆಹಲಿಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ನಾಯಕ ರಾಹುಲ್ ಗಾಂಧಿಯವರನ್ನು ಕೂಡ ಡಿ ಕೆ ಶಿವಕುಮಾರ್ ಭೇಟಿ ಮಾಡಲಿದ್ದಾರೆಯೇ ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ.