ಹೆಚ್.ಡಿ.ಕುಮಾರಸ್ವಾಮಿ 
ರಾಜಕೀಯ

ನೀರಾವರಿ ಇಲಾಖೆ ಬಳಿಕ ಇದೀಗ ಅಬಕಾರಿ ಇಲಾಖೆಯ ಅಕ್ರಮ ಬಯಲು: ತನಿಖೆಗೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ನೀರಾವರಿ ಇಲಾಖೆಯ ರೂ.20,000 ಕೋಟಿ ಯೋಜನೆಯಲ್ಲಿ 10% ಕಿಕ್‌ ಬ್ಯಾಕ್‌ ಪಡೆಯಲಾಗಿದೆ ಎಂಬ ಆರೋಪ ಜೀವಂತವಾಗಿರುವಾಗಲೇ ಅಬಕಾರಿ ಇಲಾಖೆಯ ಅಕ್ರಮ ಬಯಲಾಗಿದ್ದು, ಈ ಕುರಿತು ಸೂಕ್ತ ತನಿಖೆ ನಡೆಸುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಆಗ್ರಹಿಸಿದ್ದಾರೆ. 

ಬೆಂಗಳೂರು: ನೀರಾವರಿ ಇಲಾಖೆಯ ರೂ.20,000 ಕೋಟಿ ಯೋಜನೆಯಲ್ಲಿ 10% ಕಿಕ್‌ ಬ್ಯಾಕ್‌ ಪಡೆಯಲಾಗಿದೆ ಎಂಬ ಆರೋಪ ಜೀವಂತವಾಗಿರುವಾಗಲೇ ಅಬಕಾರಿ ಇಲಾಖೆಯ ಅಕ್ರಮ ಬಯಲಾಗಿದ್ದು, ಈ ಕುರಿತು ಸೂಕ್ತ ತನಿಖೆ ನಡೆಸುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಆಗ್ರಹಿಸಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರು, ನೀರಾವರಿ ಇಲಾಖೆಯ 20,000 ಕೋಟಿ ಯೋಜನೆಯಲ್ಲಿ 10% ಕಿಕ್‌ ಬ್ಯಾಕ್‌ ಪಡೆಯಲಾಗಿದೆ ಎಂಬ ಆರೋಪ ಜೀವಂತವಾಗಿರುವಾಗಲೇ ಅಬಕಾರಿ ಇಲಾಖೆಯ ಅಕ್ರಮ ಬಯಲಾಗಿದೆ. ಅಬಕಾರಿ ಸಚಿವರಿಗೆ ಪ್ರತಿ ಜಿಲ್ಲೆಯಿಂದ ₹5 ಲಕ್ಷ ಹೋಗಬೇಕು ಎಂಬ ಅಧಿಕಾರಿಗಳ ಸಂಭಾಷಣೆ ಬಹಿರಂಗವಾಗಿದೆ. ಹಣ ಖರ್ಚು ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಹಣ ಲೂಟಿ ಮಾಡುವಲ್ಲಿ ನಿರತವಾಗಿದೆ ಎಂದು ಆರೋಪಿಸಿದ್ದಾರೆ.

ಆಡಿಯೊ ಬಹಿರಂಗವಾಗುತ್ತಲೇ ಅಬಕಾರಿ ಇಲಾಖೆಯ ಮೂವರು ಇನ್ಸ್‌ಪೆಕ್ಟರ್‌ಗಳನ್ನು ಅಮಾನತು ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೊಟ್ಟಿರಬಹುದಾದವರಿಗೆ ಶಿಕ್ಷೆ ಕೊಟ್ಟ ಮೇಲೆ ಈಸ್ಕೋಂಡಿರಬಹುದಾದವರಿಗೆ ಶಿಕ್ಷೆ ಇಲ್ಲ ಏಕೆ? ಅಧಿಕಾರಿಗಳ ಮೇಲಿನ ಕ್ರಮ ಭ್ರಷ್ಟಾಚಾರಕ್ಕಾಗಿಯೋ ಅಥವಾ ಸರ್ಕಾರದ ಬಂಡವಾಳ ಬಯಲು ಮಾಡಿದರು ಎಂಬ ಕಾರಣಕ್ಕೋ? ಎಂದು ಪ್ರಶ್ನಿಸಿದ್ದಾರೆ.

2 ಸಾವಿರ ಕೋಟಿ ಕಿಕ್‌ ಬ್ಯಾಕ್‌ ಪ್ರಕರಣವನ್ನು ತನಿಖೆಗೆ ಒಳಪಡಿಸುವಂತೆ ಈಗಾಗಲೇ ನಾನು ಆಗ್ರಹಿಸಿದ್ದೇನೆ. ಅದರಲ್ಲಿನ ಬಿಎಸ್‌ವೈ ಕುಟುಂಬದ ಪಾತ್ರದ ಬಗ್ಗೆ ತನಿಖೆಯಾಗಲಿ ಎಂದು ಹೇಳಿದ್ದೇನೆ. ಅದರ ಜೊತೆಗೆ ಅಬಕಾರಿ ಇಲಾಖೆಯಲ್ಲಿನ ಈ ಪ್ರಕರಣದ ಬಗ್ಗೆಯೂ ತನಿಖೆಯಾಗಬೇಕು. ಸರ್ಕಾರ ಈ ಪ್ರಕರಣವನ್ನು ಕೂಡಲೇ ಸೂಕ್ತ ತನಿಖಾ ಸಂಸ್ಥೆಗೆ ವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷಕ್ಕೆ ಮುಜುಗರ ತಪ್ಪಿಸಲು ಸಚಿವ ಬಿ ನಾಗೇಂದ್ರ ರಾಜೀನಾಮೆ; ಸುಳ್ಳೇ ಬಿಜೆಪಿ ಮನೆ ದೇವರು: CM DK Shivakumar

ಡಿಕೆಶಿ ಸರ್ಕಾರದ ಮೊದಲ ವಿಕೆಟ್ ಪತನ: ಕಣ್ಣೀರಿಡುತ್ತಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ನಾಗೇಂದ್ರ; BJP ಹೋರಾಟಕ್ಕೆ ಜಯ! Video

ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ; ಬನ್ನಿ ಅಖಾಡಕ್ಕೆ, ಬಳ್ಳಾರಿಯಲ್ಲಿ ನೀವು ರಿಜೆಕ್ಟ್ ಪೀಸ್‌ಗಳು: ರಾಮುಲು, ರೆಡ್ಡಿಗೆ ನಾಗೇಂದ್ರ ಸವಾಲು

Toxic: ಇಂತಹ ವಿಭಿನ್ನ ಸಿನಿಮಾ ಮಾಡಲು ಗಟ್ಸ್ ಬೇಕು; ಯಶ್ ಹಾಡಿ ಹೊಗಳಿದ ಕಿಚ್ಚ ಸುದೀಪ್!

ರಕ್ಷಾ ಬಂಧನ: ವಿರಾಟ್ ಕೊಹ್ಲಿ ಸಹೋದರಿಯ ಪೋಸ್ಟ್; ಫೋಟೋ ವೈರಲ್!