ರಾಜಕೀಯ

'ಮೋದಿ ಕ್ರಮದಿಂದ ಭ್ರಷ್ಟಾಚಾರದಲ್ಲಿ ಮುಳುಗಿದ್ದ ಕಾಂಗ್ರೆಸ್‌ ಮುಖಂಡರು ವಿಲವಿಲ ಒದ್ದಾಡುವಂತಾಗಿದೆ’

Shilpa D

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸರ್ಕಾರ ನೀಡುವ ವಿವಿಧ ಬಗೆಯ ಆರ್ಥಿಕ ನೆರವನ್ನು ಜನರ ನೇರ ನಗದು ವರ್ಗಾವಣೆ (ಡಿಬಿಟಿ) ವ್ಯವಸ್ಥೆ ಜಾರಿಗೆ ತಂದ ಪರಿಣಾಮ ಒಂದು ರು. ಭ್ರಷ್ಟಾಚಾರ ಮಾಡಲು ಆಗುತ್ತಿಲ್ಲ. ಹೀಗಾಗಿ ಭ್ರಷ್ಟಾಚಾರದಲ್ಲಿ ಮುಳುಗಿದ್ದ ನಾಯಕರು ವಿಲವಿಲ ಒದ್ದಾಡುವಂತಾಗಿದೆ ಎಂದು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ.

ಬಿಜೆಪಿ ರಾಜ್ಯ ಮಟ್ಟದ ‘ಇ ಪ್ರಶಿಕ್ಷಣ’ ಚಿಂತನವರ್ಗದಲ್ಲಿ ವೆಬೆಕ್ಸ್‌ ಮೂಲಕ ಮಾತನಾಡಿದ ಅವರು, ಯುಪಿಎ ಅವಧಿಯಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿದ್ದ ಕಾಂಗ್ರೆಸ್‌ ಮುಖಂಡರಿಗೆ ಈಗ  ವಿಲವಿಲ ಒದ್ದಾಡುವಂತಾಗಿದೆ’ ಎಂದರು. ಬ್ಯಾಂಕ್‌ಗಳ ರಾಷ್ಟ್ರೀಕರಣ ಮಾಡಿದರೂ ದೇಶದ ಬಡ ಜನರಿಗೆ ಅದರ ಪ್ರಯೋಜನ ಸಿಗಲಿಲ್ಲ. ಪ್ರಧಾನಿ ಮೋದಿಯವರ ಒಂದು ನಿರ್ಧಾರ ಬಡವರ ಬಾಳಿಗೆ ಬೆಳಕಾಯಿತು. ಕಾಂಗ್ರೆಸ್‌ನವರ ಗರೀಬಿ ಹಠಾವೋ ಒಂದು ಘೋಷಣೆಯಾಗಿತ್ತೇ ವಿನಾ ಅದರಿಂದ ಬಡವರ ಏಳಿಗೆ ಆಗಲಿಲ್ಲ. ಅವರ ಅವಧಿಯಲ್ಲಿ ಭ್ರಷ್ಟಾಚಾರ ತಾರಕಕ್ಕೆ ಏರಿತ್ತು ಎಂದು ಅವರು ಟೀಕಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು, 46 ಕೋಟಿ ಜನರ ಬ್ಯಾಂಕ್‌ ಖಾತೆಗಳನ್ನು ಜನಧನ್‌ ಯೋಜನೆಯಡಿ ತೆರೆಸಿ ನೇರ ನಗದು ವರ್ಗಾವಣೆಯನ್ನು (ಡಿಬಿಟಿ) ಅನುಷ್ಠಾನಕ್ಕೆ ತರುವ ಮೂಲಕ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದರು ಎಂದರು.

ಕಿಸಾನ್‌ ಸಮ್ಮಾನ್‌ ಯೋಜನೆ ರೈತರು ಸ್ವಾವಲಂಬಿಯಾಗುವ ನಿಟ್ಟಿನಲ್ಲಿ ಇದೊಂದು ಮಹತ್ವದ ಹೆಜ್ಜೆಯಾಗಿದೆ. ‘ಉಡಾನ್‌’ ಯೋಜನೆಯಡಿ ಹುಬ್ಬಳ್ಳಿ, ಬೆಳಗಾವಿ, ತೋರಣಗಲ್‌, ಬೀದರ್‌ ಮತ್ತು ಕಲಬುರಗಿಯಲ್ಲಿ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಜಲ ಮಿಷನ್‌ ಯೋಜನೆಯಡಿ ಲಕ್ಷಾಂತರ ಹಳ್ಳಿಗಳಿಗೆ ಪ್ರಯೋಜನ ಲಭಿಸಲಿದೆ. ಉಜಾಲಾ ಯೋಜನೆಯಡಿ ಲಕ್ಷಾಂತರ ಹಳ್ಳಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ ಎಂದು ವಿವರಿಸಿದರು.

SCROLL FOR NEXT