ಉಮೇಶ್ ಕತ್ತಿ 
ರಾಜಕೀಯ

8 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ, ಅವಕಾಶ ಸಿಕ್ಕರೆ ನಾನ್ಯಾಕೆ ಮುಖ್ಯಮಂತ್ರಿ ಆಗಬಾರದು: ಉಮೇಶ್ ಕತ್ತಿ

ಅವಕಾಶ, ದೈವಬಲ, ಜನಬಲವಿದ್ದರೆ ಎರಡೂವರೆ ವರ್ಷಗಳ ಬಳಿಕ ನಾನು ಕೂಡ ಮುಖ್ಯಮಂತ್ರಿಯಾಗಬಹುದು. ಎಂಟು ಬಾರಿ ಶಾಸಕನಾಗಿ, ಸಚಿವನಾಗಿ ಕೆಲಸ ಮಾಡಿದ ಅನುಭವ ಇದೆ.

ವಿಜಯಪುರ: ಅವಕಾಶ, ದೈವಬಲ, ಜನಬಲವಿದ್ದರೆ ಎರಡೂವರೆ ವರ್ಷಗಳ ಬಳಿಕ ನಾನು ಕೂಡ ಮುಖ್ಯಮಂತ್ರಿಯಾಗಬಹುದು. ಎಂಟು ಬಾರಿ ಶಾಸಕನಾಗಿ, ಸಚಿವನಾಗಿ ಕೆಲಸ ಮಾಡಿದ ಅನುಭವ ಇದೆ, ಆದರೆ ಈಗ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ’ ಎಂದು ಸಚಿವ ಉಮೇಶ ಕತ್ತಿ ಹೇಳಿದ್ದಾರೆ. 

ಸೋಮವಾರ ಆಲಮಟ್ಟಿಯ ರಾಕ್‌ ಉದ್ಯಾನದಲ್ಲಿ ಸುದ್ದಿಗಾರರಗೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪನವರು 50 ವರ್ಷದಿಂದ ರಾಜಕೀಯದಲ್ಲಿದ್ದ ಸದೃಢವಾದ ಆಡಳಿತ ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಸಿಎಂ ಬಿಎಸ್‌ ಯಡಿಯೂರಪ್ಪ ಅವರು ಸಬಲರಾಗಿದ್ದು, ಮುಖ್ಯಮಂತ್ರಿ ಖುರ್ಚಿ ಖಾಲಿಯಿಲ್ಲ. ನಾನು 8 ಬಾರಿ ಶಾಸಕನಾಗಿದ್ದು ಸಿಎಂ ಆಗಲು ಎಲ್ಲ ಅರ್ಹತೆಯಿದೆ. ಜನ ಹಾಗೂ ದೈವಬಲವಿದ್ದರೆ ಅಥವಾ ಅವಕಾಶ ಸಿಕ್ಕರೆ ನಾನೂ ಕೂಡ ಮುಖ್ಯಮಂತ್ರಿಯಾಗಬಹುದು ಎಂದು ಸಚಿವ ಉಮೇಶ ಕತ್ತಿ ಹೇಳಿದರು.

ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಸೇರಿದಂತೆ ಎಲ್ಲ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗಿದೆ. ಈಗಾಗಲೇ ರೈತರು ಬಿತ್ತನೆ ಮಾಡಿದ್ದಾರೆ. ನೀರಿನ ತೊಂದರೆಯಿಲ್ಲ. ಮಳೆಗಾಲ ಇನ್ನೂ ಮೂರು ತಿಂಗಳು ಇದೆ. ಅಷ್ಟರಲ್ಲಿ ಮಳೆಯಾಗದಿದ್ದರೆ ಅಥವಾ ಜಲಾಶಯದಲ್ಲಿ 123 ಟಿಎಂಸಿ ನೀರು ತುಂಬಿದ ನಂತರ ರೈತರಿಗೆ ನೀರು ಕೊಡಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!