ಅಂಜನಾದ್ರಿ ಬೆಟ್ಟದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಸಚಿವ ಸಿ ಪಿ ಯೋಗೇಶ್ವರ್ 
ರಾಜಕೀಯ

ಯಡಿಯೂರಪ್ಪನವರನ್ನು ಮುಟ್ಟಿದ್ರೆ ಸುಟ್ಟು ಹೋಗುತ್ತೇವೆ: ಸಚಿವ ಸಿ.ಪಿ. ಯೋಗೇಶ್ವರ್

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ವಿರುದ್ಧ ಕಾರ್ಯತಂತ್ರ ಹೆಣೆಯುವ ಕೆಲಸ ನಾನು ಎಂದಿಗೂ ಮಾಡುವುದಿಲ್ಲ ಎಂದು ಪ್ರವಾಸೋದ್ಯಮ ಇಲಾಖೆ ಸಚಿವ ಸಿ ಪಿ ಯೋಗೇಶ್ವರ್ ಪುನರುಚ್ಛರಿಸಿದ್ದಾರೆ.

ಅಂಜನಾದ್ರಿ ಬೆಟ್ಟ(ಕೊಪ್ಪಳ): ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ವಿರುದ್ಧ ಕಾರ್ಯತಂತ್ರ ಹೆಣೆಯುವ ಕೆಲಸ ನಾನು ಎಂದಿಗೂ ಮಾಡುವುದಿಲ್ಲ ಎಂದು ಪ್ರವಾಸೋದ್ಯಮ ಇಲಾಖೆ ಸಚಿವ ಸಿ ಪಿ ಯೋಗೇಶ್ವರ್ ಪುನರುಚ್ಛರಿಸಿದ್ದಾರೆ.  ಅವರು ಇಂದು ಬೆಳಗ್ಗೆ ಕುಟುಂಬ ಸಮೇತ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗೊಂದಿಯ ಪ್ರಸಿದ್ಧ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಬಳಿಕ ಹೊರಬಂದ ಅವರನ್ನು ಸುದ್ದಿಗಾರರು ಮಾತನಾಡಿಸಿ ನಾಯಕತ್ವ ಬದಲಾವಣೆ ಬಗ್ಗೆ ಕೇಳಿದಾಗ, ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಪದಚ್ಯುತಿಗೊಳಿಸುವ ಕೆಲಸವನ್ನು ನಾವೆಂದಿಗೂ ಮಾಡಿಲ್ಲ, ಮಾಡುವುದೂ ಇಲ್ಲ. ನಾನು ದೆಹಲಿಗೆ ಹೋದಾಗಲೆಲ್ಲಾ ಈ ರೀತಿ ಸುದ್ದಿಯಾಗುತ್ತದೆ, ನಾವು ನಮ್ಮ ಕೆಲಸಕ್ಕೆ, ನಮ್ಮ ಆಂತರಿಕ ಸಮಸ್ಯೆಗಳನ್ನು ವರಿಷ್ಠರ ಬಳಿ ಹೇಳಿಕೊಳ್ಳಲು ಹೋಗುತ್ತೇವೆ, ಆದರೆ ಅದು ಬೇರೆ ರೀತಿಯಲ್ಲಿಯೇ ಸುದ್ದಿಯಾಗುತ್ತದೆ, ನನ್ನನ್ನು ಸುಮ್ಮನೆ ವಿಲನ್ ಮಾಡಬೇಡಿ ಎಂದರು.

ಯಡಿಯೂರಪ್ಪನವರು ನಮ್ಮ ನಾಯಕರು, ಅವರನ್ನು ಮುಟ್ಟಿದರೆ ಸುಟ್ಟುಹೋಗುತ್ತೇವೆ ಎಂದರು. ಇನ್ನು ಪರೀಕ್ಷೆ ಬರೆದಿದ್ದು ಉತ್ತಮ ಫಲಿತಾಂಶ ಬರಲೆಂದು ದೇವರ ಆಶೀರ್ವಾದ ಕೇಳಲು ಬಂದಿದ್ದೀರೋ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, ಹಾಗೇನು ಇಲ್ಲ, ಉತ್ತರ ಕರ್ನಾಟಕ ಪ್ರವಾಸದಲ್ಲಿದ್ದೇನೆ, ಹೀಗಾಗಿ ಇಂದು ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ್ದೇನೆ. ಈ ಬೆಟ್ಟವನ್ನು ಪ್ರವಾಸಿ ತಾಣವಾಗಿ ಇನ್ನಷ್ಟು ಅಭಿವೃದ್ಧಿಪಡಿಸಲಾಗುವುದು, ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ ಎಂದರು. 

ಕೊರೋನಾ ನಿರ್ಬಂಧ ಉಲ್ಲಂಘನೆ ಆರೋಪ: ಇನ್ನು ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧವಿದ್ದರೂ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟಕ್ಕೆ ಸಚಿವ ಯೋಗೇಶ್ವರ್ ತಮ್ಮ ಕುಟುಂಬಸ್ಥರು ಮತ್ತು ಆಪ್ತರೊಂದಿಗೆ ಭೇಟಿ ನೀಡಿರುವುದು ಕೊರೋನಾ ನಿರ್ಬಂಧ ಉಲ್ಲಂಘನೆಯಾಗಿದೆ ಎಂಬ ಆರೋಪ ಕೇಳಿಬರುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT