ರಾಜಕೀಯ

ಬಸವಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಗೆಲುವು: ಮುಖ್ಯಮಂತ್ರಿ ಯಡಿಯೂರಪ್ಪ ಅಭಿನಂದನೆ

Sumana Upadhyaya

ಬಸವಕಲ್ಯಾಣ: ಬೀದರ್ ಜಿಲ್ಲೆಯ ಬಸವ ಕಲ್ಯಾಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ 20 ಸಾವಿರದ 904 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಈ ಮೂಲಕ ವಿಧಾನಸಭೆಗೆ ಶರಣು ಸಲಗರ ಮೊದಲ ಬಾರಿಗೆ ಪ್ರವೇಶಿಸುತ್ತಿದ್ದಾರೆ. ಅವರು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಮಾಲಾ ಬಿ ನಾರಾಯಣರಾವ್ ಅವರ ಎದುರು ಗೆಲುವು ಸಾಧಿಸಿದ್ದಾರೆ.

ತಮ್ಮ ಗೆಲುವನ್ನು ಕ್ಷೇತ್ರದ ಮತದಾರರು ಮತ್ತು ಪಕ್ಷಕ್ಕೆ ಅರ್ಪಿಸಿದ ಶರಣು ಸಲಗರ, ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ ಎಂದು ಹೇಳಿದರು. 

ಬಸವಕಲ್ಯಾಣ ಕ್ಷೇತ್ರದಲ್ಲಿ ಗೆದ್ದ ಪಕ್ಷದ ಅಭ್ಯರ್ಥಿ ಶರಣು ಸಲಗರ ಅವರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. ಕ್ಷೇತ್ರದ ಮತದಾರರಿಗೆ ಧನ್ಯವಾದಗಳು, ಕ್ಷೇತ್ರದ ಜನರ ವಿಶ್ವಾಸ ಗಳಿಸಿ, ಗೆಲುವು ಕಂಡ ನಮ್ಮ ಅಭ್ಯರ್ಥಿ ಮತ್ತು ಅವರ ಗೆಲುವಿಗಾಗಿ ದುಡಿದ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.

ಬಿಜೆಪಿಯ ಶರಣು ಸಲಗಾರ್ ಅವರು ಆರಂಭದಿಂದಲೂ ಮತ ಎಣಿಕೆ ವೇಳೆ ಮುನ್ನಡೆ ಸಾಧಿಸುತ್ತಲೇ ಬಂದು ಕೊನೆಯ 16ನೇ ಸುತ್ತಿನವರೆಗೂ ಮುನ್ನಡೆ ಕಾಯ್ದುಕೊಂಡಿದ್ದಾರೆ. 
 

SCROLL FOR NEXT