ಸಿದ್ದರಾಮಯ್ಯ 
ರಾಜಕೀಯ

ಇಲ್ಲಿ ಹುಲಿಯಂತೆ ಕಿರುಚಾಡುವ ಸಂಸದರು ಪ್ರಧಾನಿ ಮೋದಿ ಎದುರು ಇಲಿಗಳಾಗಿ ಬಿಲ ಸೇರುವುದು ಯಾಕೆ?: ಸಿದ್ದರಾಮಯ್ಯ

ರಾಜ್ಯದ ಕೊರೊನಾ ರೋಗಿಗಳಿಗೆ ಬೆಡ್ ಕೊಡಿ,‌ ವೆಂಟಿಲೇಟರ್ ಕೊಡಿ, ಆಕ್ಸಿಜನ್ ಕೊಡಿ ಎಂದು ಸಿಎಂ ಯಡಿಯೂರಪ್ಪ ಭಿಕ್ಷುಕರ ರೀತಿ ಪ್ರಧಾನಿಯನ್ನು ಬೇಡುತ್ತಿದ್ದಾರೆ. ರಾಜ್ಯದ 25 ಸಂಸದರು ಯಾವ ಬಿಲ ಸೇರಿದ್ದಾರೆ? ಇಲ್ಲಿ ಹುಲಿಯಂತೆ ಕಿರುಚಾಡುವ ಸಂಸದರು ಪ್ರಧಾನಿ ಮೋದಿ ಎದುರು ಇಲಿಗಳಾಗಿ ಬಿಲ ಸೇರುವುದು ಯಾಕೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಬೆಂಗಳೂರು: ರಾಜ್ಯದ ಕೊರೊನಾ ರೋಗಿಗಳಿಗೆ ಬೆಡ್ ಕೊಡಿ,‌ ವೆಂಟಿಲೇಟರ್ ಕೊಡಿ, ಆಕ್ಸಿಜನ್ ಕೊಡಿ ಎಂದು ಸಿಎಂ ಯಡಿಯೂರಪ್ಪ ಭಿಕ್ಷುಕರ ರೀತಿ ಪ್ರಧಾನಿಯನ್ನು ಬೇಡುತ್ತಿದ್ದಾರೆ. ರಾಜ್ಯದ 25 ಸಂಸದರು ಯಾವ ಬಿಲ ಸೇರಿದ್ದಾರೆ? ಇಲ್ಲಿ ಹುಲಿಯಂತೆ ಕಿರುಚಾಡುವ ಸಂಸದರು ಪ್ರಧಾನಿ ಮೋದಿ  ಎದುರು ಇಲಿಗಳಾಗಿ ಬಿಲ ಸೇರುವುದು ಯಾಕೆ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ. 

ಬೆಂಗಳೂರಿನಲ್ಲಿ ಬೆಡ್‌ ಬ್ಲಾಕಿಂಗ್‌ ದಂಧೆ ಕುರಿತು ಸಂಸದ ತೇಜಸ್ವಿ ಸೂರ್ಯ ಮಾಡಿರುವ ಆರೋಪಕ್ಕೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿರುವ ಅವರು, ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. 

‘ರಾಜ್ಯದ ಕೊರೊನಾ ರೋಗಿಗಳಿಗೆ ಬೆಡ್ ಕೊಡಿ,‌ ವೆಂಟಿಲೇಟರ್ ಕೊಡಿ, ಆಕ್ಸಿಜನ್ ಕೊಡಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಿಕ್ಷುಕರ ರೀತಿ ಪ್ರಧಾನಿಯನ್ನು ಬೇಡುತ್ತಿದ್ದಾರೆ. ರಾಜ್ಯದ 25 ಮಂದಿ ಬಿಜೆಪಿ ಸಂಸದರು ಯಾವ ಬಿಲ ಸೇರಿದ್ದಾರೆ? ಇಲ್ಲಿ ಹುಲಿಯಂತೆ ಕಿರುಚಾಡುವ ಸಂಸದರು ಪ್ರಧಾನಿ ನರೇಂದ್ರ ಮೋದಿ ಎದುರು ಇಲಿಗಳಾಗಿ ಬಿಲ ಸೇರುವುದು ಯಾಕೆ?’ ಎಂದು ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ.

ತೇಜಸ್ವಿ ಸೂರ್ಯ, ರವಿಸುಬ್ರಹ್ಮಣ್ಯ,‌ ಸತೀಶ್ ರೆಡ್ಡಿ‌ ಅವರೇ ಕೋವಿಡ್ ನಿರ್ವಹಣೆಯ ಗುಪ್ತ ಕಾರ್ಯಾಚರಣೆ‌ ನಡೆಸಬೇಕಾಗಿರುವುದು ಬಿಬಿಎಂಪಿಯ ಅಧಿಕಾರಿಗಳ ವಿರುದ್ಧವಲ್ಲ,‌ ವಿಧಾನಸೌಧದಲ್ಲಿ ಕೂತಿರುವ ಮುಖ್ಯಮಂತ್ರಿ,‌ ಸಚಿವರು ಮತ್ತು ಬಿಜೆಪಿ ಶಾಸಕರು‌, ಸಂಸದರ ವಿರುದ್ಧ. ಸಣ್ಣಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಲಗಳ ರಕ್ಷಣೆಗಾ?.

ಕೋವಿಡ್ ಪ್ರಾರಂಭದ ದಿನಗಳಲ್ಲಿಯೇ ನಾನು ಪತ್ರಿಕಾಗೋಷ್ಠಿ ನಡೆಸಿ ಕೋವಿಡ್ ನಿರ್ವಹಣೆಯಲ್ಲಿನ ಭ್ರಷ್ಟಾಚಾರವನ್ನು ದಾಖಲೆ‌ಸಹಿತ ಬಹಿರಂಗಗೊಳಿಸಿದ್ದೆ. ಅದರ ಜೊತೆ ಈಗ ನೀವು ಹೇಳುತ್ತಿರುವುದನ್ನೂ ಸೇರಿಸಿ‌ ಹೈಕೋರ್ಟ್ ಹಾಲಿ‌ ನ್ಯಾಯಾಧೀಶರಿಂದ ತನಿಖೆ ನಡೆಸಲು ಮುಖ್ಯಮಂತ್ರಿಗಳ ಮೇಲೆ ತೇಜಸ್ವಿ ಸೂರ್ಯ ಒತ್ತಡ ಹೇರಲಿ. 

ಬೆಡ್ ಬ್ಲಾಕಿಂಗ್ ನಿಮ್ಮ ಗಮನಕ್ಕೆ ಬಂದು ಹತ್ತು ದಿನ ಆಯ್ತು ಅಂತೀರಿ. ಇಷ್ಟು ದಿನ ಅಧಿಕಾರಿಗಳ ಮನವೊಲಿಸುತ್ತಿದ್ದೀರಾ? ಬೇರೇನಾದರೂ ವ್ಯವಹಾರದ ಮಾತುಕತೆ ನಡೆದಿತ್ತಾ? ನಿಮ್ಮ ನಿಗೂಢ ಮೌನವನ್ನು ಹೇಗೆ ಅರ್ಥೈಸುವುದು ತೇಜಸ್ವಿ ಸೂರ್ಯ ಅವರೇ ಎಂದು ಪ್ರಶ್ನಿಸಿದ್ದಾರೆ. 

ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದ ವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು ಎಳೆದು ತರುವ ನಿಮ್ಮ ಕೊಳಕು ಬುದ್ದಿಯನ್ನು ಕೊರೊನಾ ರೋಗಕ್ಕೂ ಯಾಕೆ ಎಳೆದು ತರ್ತೀರಿ ತೇಜಸ್ವಿ ಸೂರ್ಯ?... ಕೊರೊನಾ ವೈರಸ್ ಗಿಂತಲೂ ಅಪಾಯಕಾರಿ ನಿಮ್ಮ ಮೆದುಳಲ್ಲಿರುವ ಕೋಮು ವೈರಸ್, ಅದಕ್ಕೆ ಚಿಕಿತ್ಸೆ ಪಡ್ಕೊಳ್ಳಿ. ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಷಾಮೀಲಾಗಿರುವವರು ಒಂದೇ ಕೋಮಿನವರು ಎನ್ನುವ ರೀತಿಯಲ್ಲಿ ಆರೋಪಿಗಳ ಪಟ್ಟಿ ಓದಿದ ತೇಜಸ್ವಿ ಸೂರ್ಯ ಅವರೇ, ಮುಖ್ಯ ಆರೋಪಿಗಳಾದ ಮುಖ್ಯಮಂತ್ರಿ ಅವರಿಂದ ಹಿಡಿದು ಸಚಿವರು, ಶಾಸಕರು, ಸಂಸದರೆಲ್ಲರೂ ಯಾವ ಧರ್ಮದವರು? ಅದನ್ನೂ ಓದಿ ಹೇಳಿಬಿಡಿ. 

'ಯಥಾ ರಾಜಾ ತಥಾ‌ ಮಂತ್ರಿ'. 'ಮೈ ಬೀ ಕಾವೂಂಗಾ, ತುಮ್ ಬಿ ಕಾವೋ' ಎನ್ನುವುದೇ ನಿಮ್ಮ ನರೇಂದ್ರ ಮೋಜಿಯವರ ನಿಜವಾದ ಘೋಷಣೆ.‌ ಅದನ್ನೇ ನೀವೆಲ್ಲ ಮಾಡ್ತಿದ್ದೀರಿ. ಪಾಲು ಹಂಚಿಕೆಯಲ್ಲಿ ಜಗಳವಾದಾಗ ಇಂತಹ ಕಿಡಿಗಳು ಸಿಡಿಯುತ್ತವೆ ಅಷ್ಟೆ ಅಲ್ಲವೇ ತೇಜಸ್ವಿ ಸೂರ್ಯ? ಮುಖ್ಯಮಂತ್ರಿಗಳಿಂದ ಕರ್ತವ್ಯಲೋಪ-ಭ್ರಷ್ಟತೆ ನಡೆದಿದ್ದರೆ ಅವರ ವಿರುದ್ಧ ನೇರ ಆರೋಪ‌ಪಟ್ಟಿ ಸಲ್ಲಿಸಿ ಅವರನ್ನು ಕಿತ್ತು ಹಾಕಿ. ಇದಕ್ಕಾಗಿ ಸರ್ಕಾರಿ ಅಧಿಕಾರಿ-ಸಿಬ್ಬಂದಿಗಳನ್ನು‌ ಯಾಕೆ ಬಳಸಿಕೊಳ್ತೀರಿ? ನಿಮ್ಮ ಆಂತರಿಕ ಕಿತ್ತಾಟಕ್ಕೆ ಕೊರೊನಾವನ್ನು ಯಾಕೆ ಬಳಸಿಕೊಳ್ತೀರಿ...ಕೋವಿಡ್ ನಿರ್ವಹಣೆಯಲ್ಲಿ‌ ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎನ್ನುವುದು ಜಗಜ್ಜಾಹೀರಾಗಿದೆ. ನಿಮ್ಮ ಕೇಂದ್ರ ಸರ್ಕಾರ ಏನು ಕಡಿದು ಕಟ್ಟೆ ಹಾಕಿದೆ‌‌ ಅದನ್ನೂ ರಾಜ್ಯದ ಜನತೆಗೆ ತಿಳಿಸಿ. 

ಕೇಂದ್ರ ಮತ್ತು ರಾಜ್ಯದಲ್ಲಿ‌ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಯ ಭಾಗ್ಯದ ಬಾಗಿಲು ತೆರೆಯುತ್ತೆ ಎಂದು ಮತದಾರರ ದಿಕ್ಕುತಪ್ಪಿಸಿ ಅಧಿಕಾರಕ್ಕೆ ಬಂದಿದ್ದೀರಿ, ಈಗ ರಾಜ್ಯದಲ್ಲಿ ದೌರ್ಭಾಗ್ಯದ ಬಾಗಿಲು ತೆರೆದಿದೆ,‌ ಸ್ಮಶಾನದಲ್ಲಿ‌ ಹೆಣಗಳ ಸಾಲು ಬೆಳೆಯುತ್ತಿದೆ. ಇದೇನಾ ನರೇಂದ್ರ ಮೋದಿಯವರು ಅವರ ಅಚ್ಚೇ ದಿನ್? 

ಪಿಎಂ ಕೇರ್ಸ್ ನಿಧಿಗೆ ರಾಜ್ಯದಿಂದ ಎಷ್ಟು‌ ಹಣ ಸಂದಾಯವಾಗಿದೆ? ಅದರಿಂದ ರಾಜ್ಯಕ್ಕೆ ಎಷ್ಟು ನೆರವು ಹರಿದು ಬಂದಿದೆ? ರಾಜ್ಯಕ್ಕೆ ವೆಂಟಿಲೇಟರ್,‌ ಐಸಿಯು,‌ ಆಕ್ಸಿಜನ್ ಎಷ್ಟು ಸಿಕ್ಕಿದೆ? ಮಾಹಿತಿ ಹಕ್ಕಿಗೆ ನಿಷೇಧ ಹೇರಿ ನರೇಂದ್ರ ಮೋದಿಯವರು  ರಕ್ಷಿಸುತ್ತಿರುವುದು ಯಾರನ್ನು ತಮ್ಮನ್ನೋ? ಅಧಿಕಾರಿಗಳನ್ನೋ? ರಾಜ್ಯದ ಕೊರೊನಾ ರೋಗಿಗಳಿಗೆ ಬೆಡ್ ಕೊಡಿ,‌ ವೆಂಟಿಲೇಟರ್ ಕೊಡಿ, ಆಕ್ಸಿಜನ್ ಕೊಡಿ ಎಂದು ಯಡಿಯೂರಪ್ಪ ಭಿಕ್ಷುಕರ ರೀತಿ ಪ್ರಧಾನಿಯನ್ನು ಬೇಡುತ್ತಿದ್ದಾರೆ. ರಾಜ್ಯದ 25 ಬಿಜೆಪಿ ಸಂಸದರು ಯಾವ ಬಿಲ ಸೇರಿದ್ದಾರೆ? ಇಲ್ಲಿ ಹುಲಿಯಂತೆ ಕಿರುಚಾಡುವ ಸಂಸದರು ಪ್ರಧಾನಿ ಮೋದಿ  ಎದುರು ಇಲಿಗಳಾಗಿ ಬಿಲ ಸೇರುವುದು ಯಾಕೆ? ಎಂದು ಪ್ರಶ್ನಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!