ಯಡಿಯೂರಪ್ಪ ಮತ್ತು ಸುಧಾಕರ್ 
ರಾಜಕೀಯ

'ಸುಧಾಕರ್ ಸ್ಥಿತಿ ದ್ರೌಪದಿ ವಸ್ತ್ರಾಪಹರಣ ಮಾಡಿದಂತೆ ಆಗಿದೆ: ಸಿಎಂಗೆ ಕಣ್ಣು ಕಾಣಲ್ಲ ಕಿವಿಯೂ ಕೇಳಲ್ಲ'

ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಸ್ಥಿತಿ ದ್ರೌಪದಿ ವಸ್ತ್ರಾಪಹರಣ ಮಾಡಿದಂತೆ ಆಗಿದೆ ಎಂದು ವಿಧಾನಪರಿಷತ್‌ ಸದಸ್ಯ ಎಚ್. ವಿಶ್ವನಾಥ್ ಲೇವಡಿ ಮಾಡಿದ್ದಾರೆ. 

ಮೈಸೂರು: ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಸ್ಥಿತಿ ದ್ರೌಪದಿ ವಸ್ತ್ರಾಪಹರಣ ಮಾಡಿದಂತೆ ಆಗಿದೆ ಎಂದು ವಿಧಾನಪರಿಷತ್‌ ಸದಸ್ಯ ಎಚ್. ವಿಶ್ವನಾಥ್ ಲೇವಡಿ ಮಾಡಿದ್ದಾರೆ. 

ಮೈಸೂರಿನಲ್ಲಿ ಬುಧವಾರ ಮಾತನಾಡಿದ ಅವರು, ಕೊರೊನಾ ನಿರ್ವಹಣೆಗೆ ಸಚಿವರ ನೇಮಕ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರು ಆರೋಗ್ಯ ಸಚಿವರ ಎಲ್ಲ‌ ಅಧಿಕಾರ ಕಿತ್ತು ಜಗದೀಶ್ ಶೆಟ್ಟರ್‌, ಆರ್‌ ಅಶೋಕ್ ಹಾಗೂ ಅಶ್ವತ್ಥ ನಾರಾಯಣ ಅವರಿಗೆ ಕೊಟ್ಟಿದ್ದಾರೆ ಎಂದು ಕುಹಕವಾಡಿದ್ದಾರೆ.

ಆ‌ ಸುಧಾಕರ್ ಪಾಪ. ನೀನು ಏನು ಅಂದ್ರೆ? ಹೆಲ್ತ್ ಮಿನಿಸ್ಟರ್ ಎನ್ನಬೇಕು ಅಷ್ಟೇ. ಆತನ ಬಳಿ ಬೇರೆ ಏನು ಅಧಿಕಾರ ಇಲ್ಲ. ಇದು ಕಮಿಟಿ ಮಾಡುವ ಸಮಯವಲ್ಲ. ಹಿಂದೆಯೇ ಇದನ್ನು ಮಾಡಿದ್ದರೆ ಅನುಕೂಲವಾಗುತಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಇನ್ನೂ ಸಿಎಂ ಯಡಿಯೂರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿದ ಎಚ್. ವಿಶ್ವನಾಥ್ ಮುಖ್ಯಮಂತ್ರಿಗಳಿಗೆ ಕಣ್ಣು ಕಾಣಲ್ಲ ಕಿವಿಯೂ ಕೇಳಲ್ಲ. ಹೇಳಿದ್ದು ಅರ್ಥ ಆಗಲ್ಲ ಇಂತವರನ್ನು ಕಟ್ಟಿಕೊಂಡು ಏನು ಮಾಡಲು ಸಾಧ್ಯ? ಸಿಎಂ ಬಳಿ ಹೋದ ಖಾತೆಗಳು ಸತ್ತು ಹೋಗುತ್ತವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ