ರಾಜ್ಯಾದ್ಯಂತ ಕಠಿಣ ಕರ್ಪ್ಯೂ ಜಾರಿಗೊಳಿಸಿ: ಸಂಸದೆ ಶೋಭಾ ಕರಂದ್ಲಾಜೆ ಆಗ್ರಹ
ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಕಳೆದ ಬಾರಿಯಂತೆ ರಾಜ್ಯಾದ್ಯಂತ ಕಠಿಣ ಕರ್ಪ್ಯೂ ಜಾರಿಗೊಳಿಸಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಗುರುವಾರ ಹೇಳಿದ್ದಾರೆ.
ಉಡುಪಿ: ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಕಳೆದ ಬಾರಿಯಂತೆ ರಾಜ್ಯಾದ್ಯಂತ ಕಠಿಣ ಕರ್ಪ್ಯೂ ಜಾರಿಗೊಳಿಸಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಗುರುವಾರ ಹೇಳಿದ್ದಾರೆ.
ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ ನೀಡಬೇಕು. ಉಳಿದಂತೆ ಪೂರ್ಣ ಲಾಕ್ ಡೌನ್ ಮಾಡುವುದು ಉತ್ತಮ. ಜನ ಈಗಿನಂತೆ ಓಡಾಡಿದರೆ ಕೊರೋನಾ ತಡೆಯಲು ಸಾಧ್ಯವಿಲ್ಲ. ಮದುವೆ, ದೇವಸ್ಥಾನ ಕಾರ್ಯಕ್ರಮ, ಭೂತಾರಾಧನೆ ಎಲ್ಲವೂ ನಡೆಯುತ್ತಿದೆ. ಜನ ಹೆಚ್ಚು ಬೆರೆಯುವುದರಿಂದ ಸೋಂಕು ಹೆಚ್ಚು ಹರಡುತ್ತಿದೆ ಎಂದರು.
ಮುಂಬೈ ಹಾಗೂ ಬೆಂಗಳೂರಿನಿಂದಲೂ ಜನ ಉಡುಪಿ ಜಿಲ್ಲೆಗೆ ಬರುತ್ತಿದ್ದಾರೆ. ಹೊರ ಜಿಲ್ಲೆಗಳಿಂದ ಬಂದವರಿಗೆ ಆದ್ಯತೆ ಮೇಲೆ ಕೊರೋನಾ ಪರೀಕ್ಷೆ ಮಾಡಿಸಬೇಕು ಎಂದು ಅವರು ಹೇಳಿದರು.
ರಾಜ್ಯದಲ್ಲಿ ಈಗ ಜಾರಿಯಲ್ಲಿರುವ ಕೊರೋನಾ ಕರ್ಫ್ಯೂ ಸಂಪೂರ್ಣ ವಿಫಲವಾಗಿದ್ದು, ಸಂಪೂರ್ಣ ಲಾಕ್ ಡೌನ್ ಮಾಡುವುದು ಉತ್ತಮ ಎಂದು ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಸೇರಿದಂತೆ ಹಲವು ನಾಯಕರು ಹೇಳುತ್ತಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.