ಗೃಹ ಸಚಿವ ಬೊಮ್ಮಾಯಿ 
ರಾಜಕೀಯ

ರಾಜ್ಯ ನಾಯಕತ್ವ ಬದಲಾವಣೆ ಕುರಿತು ಚರ್ಚೆ ನಡೆಸಿಲ್ಲ: ಸಚಿವ ಬೊಮ್ಮಾಯಿ ಸ್ಪಷ್ಟನೆ

ಕೋವಿಡ್ ನಂತಹ ಸಮಯದಲ್ಲಿ ನಾಯಕತ್ವ ಬದಲಾವಣೆ ವಿಚಾರವು ಅಪ್ರಸ್ತುತವಾಗಿದ್ದು, ಅಂತಹ ಯಾವುದೇ ಚರ್ಚೆಗಳೂ ನಡೆದಿಲ್ಲ. ಕೇವಲ ರಾಜ್ಯದಲ್ಲಿನ ಕೊರೋನಾ ಸ್ಥಿತಿಗತಿಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಚರ್ಚೆ ನಡೆಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. 

ಬೆಂಗಳೂರು: ಕೋವಿಡ್ ನಂತಹ ಸಮಯದಲ್ಲಿ ನಾಯಕತ್ವ ಬದಲಾವಣೆ ವಿಚಾರವು ಅಪ್ರಸ್ತುತವಾಗಿದ್ದು, ಅಂತಹ ಯಾವುದೇ ಚರ್ಚೆಗಳೂ ನಡೆದಿಲ್ಲ. ಕೇವಲ ರಾಜ್ಯದಲ್ಲಿನ ಕೊರೋನಾ ಸ್ಥಿತಿಗತಿಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಚರ್ಚೆ ನಡೆಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. 

ಮುಖ್ಯಮಂತ್ರಿಗಳ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಾಗಿದೆ. ಈ ವೇಳೆ ರಾಜ್ಯದಲ್ಲಿ ಕೊರೋನಾ ನಿರ್ವಹಣೆ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗಿದೆ. ರಾಜ್ಯದಲ್ಲಿನ ಸ್ಥಿತಿಗತಿ, ಹೆಚ್ಚಾಗಿರುವ ಪ್ರಕರಣಗಳ ಕುರಿತು ಅಮಿತ್ ಶಾ ಆತಂಕ ವ್ಯಕ್ತಪಡಿಸಿದ್ದಾರೆಂದು ಹೇಳಿದ್ದಾರೆ. 

ಯಾವುದೇ ರಾಜಕೀಯ ಉದ್ದೇಶ ಭೇಟಿಯಾಗಿಲ್ಲ. ಕೊರೋನಾ ವೇಳೆಯಲ್ಲಿ ಬೇರೆ ಯಾವುದೇ ವಿಚಾರಗಳ ಬಗ್ಗೆ ಚರ್ಚೆ ಮಾಡುವ ಉದ್ದೇಶವಾಗಲಿ, ಆದ್ಯತೆಯಾಗಲೀ ಇಲ್ಲ. ಅದರ ಅಗತ್ಯವೂ ಇಲ್ಲ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಅಪ್ರಸ್ತುತ. ನಾನು ಮುಖ್ಯಮಂತ್ರಿಯಾಗುತ್ತೇನೆ ಎಂದು ಯೋಜನೆ ಮಾಡುವುದು ದೊಡ್ಡ ತಪ್ಪು ಎಂದು ತಿಳಿಸಿದ್ದಾರೆ. 

ಸೋಂಕು ನಿಯಂತ್ರಣ ಮಾಡಬೇಕಾದ ವೇಳೆಯಲ್ಲಿ ಇಂತಹ ಆಲೋಚನೆಗಳೇ ಬರಬಾರದು. ಇದೆಲ್ಲಾ ಹಸಿ ಸುಳ್ಳಾಗಿದ್ದು, ನಾಯಕತ್ವ ಬದಲಾವಣೆ ಇಲ್ಲ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತಂದೆಯ ರಾಜಕೀಯ ಜೀವನ ಮುಗಿಯಿತು; ಸತೀಶ್ ಜಾರಕಿಹೊಳಿ 'ಉತ್ತರಾಧಿಕಾರಿ': ಯತೀಂದ್ರ ಸಿದ್ದರಾಮಯ್ಯ ಹೇಳಿಕೆ; ಡಿಕೆಶಿ ಬಣಕ್ಕೆ ಶಾಕ್!

PoK: ಎಲ್‌ಒಸಿ ಉದ್ದಕ್ಕೂ ಭಯೋತ್ಪಾದಕ ಶಿಬಿರಗಳು, ಉಡಾವಣಾ ಪ್ಯಾಡ್‌ಗಳು ಮತ್ತೆ ತಲೆ ಎತ್ತುತ್ತಿವೆ; ಗುಪ್ತಚರ ವರದಿ

ದೀಪ ಹಚ್ಚೋಣ, ಇದು ಬೆಳಕಿನ ಅನ್ವೇಷಣೆಯೆಂಬ ಅನಂತ ಯಾನ (ತೆರೆದ ಕಿಟಕಿ)

'ಇಸ್ಲಾಂ ರಾಜಕೀಯ' ಸನಾತನ ಧರ್ಮಕ್ಕೆ ಅತ್ಯಂತ ಅಪಾಯಕಾರಿ; ಹಲಾಲ್ ಬಗ್ಗೆ ಎಚ್ಚರ: ಸಿಎಂ ಯೋಗಿ ಆದಿತ್ಯನಾಥ್

PNB ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ಗಡಿಪಾರಿಗೆ ಬೆಲ್ಜಿಯಂ ಕೋರ್ಟ್ ಅನುಮೋದನೆ; 8 ವರ್ಷ ಭಾರತ ನಡೆಸಿದ್ದ ಹೋರಾಟ ಸಫಲ!

SCROLL FOR NEXT