'ವಿನಾಶ ಕಾಲೇ ವಿಪರೀತ ಬುದ್ದಿ! ತಮ್ಮ ಅಯೋಗ್ಯತನ ಮರೆಮಾಚಲು ಬಿಜೆಪಿಗರಿಂದ ಎಷ್ಟೆಲ್ಲ ಹರಸಾಹಸ': ಕೆಪಿಸಿಸಿ
ಕೋವಿಡ್-19 ಸಾಂಕ್ರಾಮಿಕ ರೋಗದ ಸಂಕಷ್ಟದ ಸಮಯದಲ್ಲಿ ಬಿಜೆಪಿಯ ನೀಚತನ ಅನಾವರಣಗೊಳ್ಳುತ್ತಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆರೋಪಿಸಿದೆ.
ಬೆಂಗಳೂರು: ಕೋವಿಡ್-19 ಸಾಂಕ್ರಾಮಿಕ ರೋಗದ ಸಂಕಷ್ಟದ ಸಮಯದಲ್ಲಿ ಬಿಜೆಪಿಯ ನೀಚತನ ಅನಾವರಣಗೊಳ್ಳುತ್ತಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆರೋಪಿಸಿದೆ.
'ಕುಣಿಲಾರದವನು ನೆಲನೇ ಡೊಂಕು' ಎಂದಂತೆ ಜನಪರ ಚಿಂತನೆ ಇಲ್ಲದ ಅಸಮರ್ಥ ಬಿಜೆಪಿ ಸರ್ಕಾರಕ್ಕೆ ಪ್ರತಿಯೊಂದು ವಿಷಯದಲ್ಲೂ ಹೈಕೋರ್ಟ್ ಮಾನಿಟರ್ ಮಾಡಬೇಕಾದ ಸ್ಥಿತಿ ಬಂದಿದ್ದು ದುರ್ದೈವ. ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ ಬೀಸುತ್ತಿದೆ, ರಾಜ್ಯದಲ್ಲಿ ಹೈಕೋರ್ಟ್ ಚಾಟಿ ಬೀಸುತ್ತಿದೆ. ಕೊರೊನಾ ಹೊತ್ತಲ್ಲಿ ಬಿಜೆಪಿಯ ನೀಚತನ ಅನಾವರಣಗೊಳ್ಳುತ್ತಿದೆ ಎಂದು ಹೇಳಿದೆ.
ಮತ್ತೊಂದು ಟ್ವೀಟ್‌ನಲ್ಲಿ ಡಿ.ವಿ. ಸದಾನಂದಗೌಡ ಹಾಗೂ ಸಿ.ಟಿ. ರವಿ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದೆ. ತಮ್ಮ ಅಯೋಗ್ಯತನ ಮರೆಮಾಚಲು ಎಷ್ಟೆಲ್ಲ ಹರಸಾಹಸಪಡುತ್ತಿದ್ದಾರೆ ಬಿಜೆಪಿಗರು. ಜನರ ಪರವಾಗಿ ಮಾತನಾಡುತ್ತಿದ್ದ ವಿರೋಧಪಕ್ಷದ ನಾಯಕರ ಬಗ್ಗೆ ಮುಗಿಬಿಳುತ್ತಿದ್ದವರು ಈಗ ನ್ಯಾಯಾಧೀಶರ ವಿರುದ್ಧವೇ ಮಾತಾಡುತ್ತಿದ್ದಾರೆ. 'ವಿನಾಶ ಕಾಲೇ ವಿಪರೀತ ಬುದ್ದಿ'! ಎಂದು ತಿರುಗೇಟು ನೀಡಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.