ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವುದೇ ಆದರೆ 'ಜನಹಿತದ ಲಾಕ್‌ಡೌನ್‌' ಮಾಡಲಿ: ಹೆಚ್‌ ಡಿ ಕುಮಾರಸ್ವಾಮಿ

ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದ್ದು, ಒಂದುವೇಳೆ ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವುದೇ ಆದರೆ, ಅದು 'ಜನಹಿತದ ಲಾಕ್‌ಡೌನ್‌' ಆಗಿರಲಿ. ಆರ್ಥಿಕ, ಆಹಾರ ಪ್ಯಾಕೇಜ್‌, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್‌ಡೌನ್‌ನಲ್ಲಿರಲಿ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವ ಚಿಂತನೆಯಲ್ಲಿದೆ ಎಂದು ವರದಿಯಾಗುತ್ತಿದ್ದು, ಒಂದುವೇಳೆ ಸರ್ಕಾರ ಲಾಕ್‌ಡೌನ್‌ ವಿಸ್ತರಿಸುವುದೇ ಆದರೆ, ಅದು 'ಜನಹಿತದ ಲಾಕ್‌ಡೌನ್‌' ಆಗಿರಲಿ. ಆರ್ಥಿಕ, ಆಹಾರ ಪ್ಯಾಕೇಜ್‌, ಪರಿಹಾರ ಕ್ರಮಗಳು ಉದ್ದೇಶಿತ ವಿಸ್ತರಿತ ಲಾಕ್‌ಡೌನ್‌ನಲ್ಲಿರಲಿ ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸೋಮವಾರ ಈ ಸಂಬಂಧ ಟ್ವೀಟ್ ಮಾಡಿರುವ ಹೆಚ್‌ಡಿಕೆ, ಸರ್ವಪಕ್ಷಗಳ ಸಭೆಯಲ್ಲಿ ಸರ್ಕಾರಕ್ಕೆ 'ಜನಹಿತದ ಲಾಕ್‌ಡೌನ್‌' ಮಾಡಬೇಕೆಂದು ಸೂಚಿಸಿದ್ದೆವು. ನೆರೆಯ ರಾಜ್ಯಗಳಲ್ಲಿ ಲಾಕ್‌ಡೌನ್‌ ಹೇಗಿದೆ, ಜನರಿಗೆ ಹೇಗೆ ನೆರವು ಸಿಗುತ್ತಿದೆ ಎಂಬುದನ್ನು ರಾಜ್ಯ ಸರ್ಕಾರ ಒಂದು ಬಾರಿ ಅವಲೋಕಿಸಬೇಕು. ಜನರನ್ನು ಮನೆಗಳಿಂದ ಹೊರ ಬಾರದಂತೆ ತಡೆಯುವುದಷ್ಟೇ ಈ ಲಾಕ್‌ಡೌನ್‌ನ ಉದ್ದೇಶವಾಗಬಾರದು. ಜನರ ಸಹಭಾಗಿತ್ವದೊಂದಿಗೆ ವೈರಾಣುವನ್ನು ನಿಗ್ರಹಿಸುವುದು ಉದ್ದೇಶವಾಗಬೇಕು. ಅದಕ್ಕಾಗಿ ಜನರಿಗೆ ಪರಿಹಾರ ಅಗತ್ಯವಾಗಿದೆ ಎಂದಿದ್ದಾರೆ.

ಜನರಿಗೆ ಪರಿಹಾರ ನೀಡಬೇಕಾಗುತ್ತದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಲಾಕ್‌ಡೌನ್‌ನ ಉಸಾಬರಿಯನ್ನು ರಾಜ್ಯ ಸರ್ಕಾರಗಳಿಗೆ ವಹಿಸಿ ಕೈತೊಳೆದುಕೊಂಡಿದೆ. ಕೇಂದ್ರ ಸರ್ಕಾರ ಜನರ ಕೈಬಿಟ್ಟಂತೆ ರಾಜ್ಯ ಸರ್ಕಾರ ಜನರನ್ನು ನಿರ್ಲಕ್ಷಿಸಬಾರದು. ಅವರ ಅಗತ್ಯಗಳನ್ನು ಪೂರೈಸುವುದರತ್ತ ರಾಜ್ಯ ಗಮನಹರಿಸಬೇಕು. ಲಾಕ್‌ಡೌನ್‌ನಲ್ಲಿ ಪರಿಹಾರ ಕ್ರಮಗಳು ಇರಬೇಕು. 

ಲಾಕ್‌ಡೌನ್‌ ಜನರ ಜೀವ ಉಳಿಸುವ ಕ್ರಮ ಹೌದು. ಆದರೆ, ಈ ಲಾಕ್‌ಡೌನ್‌ ಜನರ ಬದುಕನ್ನು ಹೈರಾಣಾಗಿಸುತ್ತಿದೆ ಎಂಬುದೂ ನಮಗೆಲ್ಲರಿಗೂ ಅರಿವಿಗೆ ಬಂದಿರುವ ವಿಚಾರ. ಹೀಗಾಗಿಯೇ ನಾವು ಸೂಚಿಸುತ್ತಿರುವ ಜನಹಿತದ ಲಾಕ್‌ಡೌನ್‌ ಮಾಡುವುದರತ್ತ ಸರ್ಕಾರ ಆದ್ಯತೆ ನೀಡಬೇಕು. ಜನರ ಜೀವ ಉಳಿಸುತ್ತಲೇ, ಜೀವನಕ್ಕೂ ನೆರವಾಗುವುದು ಜನಪರ ಸರ್ಕಾರದ ಕರ್ತವ್ಯವಾಗಿದೆ ಎಂದು ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT