ಜೆ ಸಿ ಮಾಧುಸ್ವಾಮಿ 
ರಾಜಕೀಯ

ನಿಮ್ಮ ಜೊತೆ ಇರುವ ಸಚಿವರಿಗೆ ಉದಾರವಾಗಿ ವರ್ತಿಸುವಂತೆ ಹೇಳಿ: ಸಿಎಂ ವಿರುದ್ಧ ಮಾಧುಸ್ವಾಮಿ ಕಿಡಿ

ನಿಮ್ಮ ಜತೆಯಲ್ಲಿ ಇರುವವರಿಗೆ ಉದಾರವಾಗಿ ವರ್ತಿಸುವಂತೆ ಹೇಳಿ. ಆ ಮೇಲೆ ನಮ್ಮ ಪರಿಶೀಲನೆ ನಡೆಸಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ನಿಮ್ಮ ಜತೆಯಲ್ಲಿ ಇರುವವರಿಗೆ ಉದಾರವಾಗಿ ವರ್ತಿಸುವಂತೆ ಹೇಳಿ. ಆ ಮೇಲೆ ನಮ್ಮ ಪರಿಶೀಲನೆ ನಡೆಸಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೋಮವಾರ ಸಂಜೆ ಕೋವಿಡ್ ನಿಯಂತ್ರಣ ಸಂಬಂಧ ಮುಖ್ಯಮಂತ್ರಿ ಜತೆಗೆ ನಡೆದ ವಿಡಿಯೋ ಸಂವಾದದ ವೇಳೆ ಡಿಸಿಗಳ ಕಾರ್ಯವೈಖರಿಯನ್ನು ಸಿಎಂ ಅವರು ತರಾಟೆಗೆ ತೆಗೆದುಕೊಂಡ ಬೆನ್ನಿಗೇ ಮಾತನಾಡಿದ ಸಚಿವ ಮಾಧುಸ್ವಾಮಿ, ಅಧಿಕಾರಿಗಳು ಸ್ಪಂದಿಸುತ್ತಿಲ್ಲ, ಮೊದಲು ನಿಮ್ಮ ಜತೆ ಇರೋರಿಗೆ ಕೆಲಸ ಮಾಡಲು ಹೇಳಿ. ಆ ನಂತರ ನಮ್ಮ ಪರಿಶೀಲನೆ ನಡೆಸಿ ಸರ್‌ ಎಂದು ಸಿಎಂ ಎದುರೇ ಸಚಿವ ಜೆ.ಸಿ. ಮಾಧುಸ್ವಾಮಿ ಗುಡುಗಿದ್ದಾರೆ.

ಹಿಂದೆಯೇ ಜಿಲ್ಲೆಯಲ್ಲಿ ಆಮ್ಲಜನಕದ ಒಂದು ಪ್ಲಾಂಟ್ ನಿರ್ಮಾಣಕ್ಕೆ ಅನುಮತಿ ನೀಡಿದ್ದರೆ ಈ ವೇಳೆಗೆ ಉತ್ಪಾದನೆ ಆರಂಭವಾಗುತ್ತಿತ್ತು. ನಮಗೆ ಸಮಸ್ಯೆ ಆಗುತ್ತಿರಲಿಲ್ಲ. ಎಚ್.ಡಿ. ಕೋಟೆಯಲ್ಲಿ ಆಮ್ಲಜನಕ ಘಟಕ ನಿರ್ಮಾಣ ಮಾಡಿದರೆ ಏನು ಪ್ರಯೋಜನ. ನಮಗೆ ಅವಕಾಶ ನೀಡಿದ್ದರೆ ಸಮಸ್ಯೆ ಉಂಟಾಗುತ್ತಿರಲಿಲ್ಲ. ಇದಕ್ಕೆ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ಅವರು ಅವಕಾಶ ನೀಡಲಿಲ್ಲ. ನಿಮ್ಮ ಜತೆಯಲ್ಲಿ ಇರುವವರಿಗೆ ರಾಜ್ಯವೆಲ್ಲ ನಮ್ಮದೇ ಎನ್ನುವಂತೆ ವರ್ತಿಸಲು ಹೇಳಿ’ ಎಂದು ಕಿಡಿ ಕಾರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

SCROLL FOR NEXT