ಸುರೇಶ್ 
ರಾಜಕೀಯ

'ಗಂಗಾನದಿಯಲ್ಲಿ ತೇಲುತ್ತಿರುವ ಶವಗಳಿಗೆ ಯಾರು ಜವಾಬ್ದಾರಿ: ಕೋವಿಡ್ ನಿರ್ವಹಿಸಲು ಸರ್ಕಾರ ಸಂಪೂರ್ಣ ವಿಫಲ'

ಕೊರೋನಾ ಪರಿಸ್ಥಿತಿಯನ್ನು ವ್ಯವಸ್ಥಿತವಾಗಿ ನಿರ್ವಹಿಸದ ಸರ್ಕಾರ ಮಾಧ್ಯಮಗಳ ಗಮನವನ್ನು ಬೇರೆಡೆ ವರ್ಗಾಯಿಸಲು ಟೂಲ್ ಕಿಟ್ ಬಗ್ಗೆ ಅಪ ಪ್ರಚಾರಕ್ಕೆ ಮುಂದಾಗಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.

ಬೆಂಗಳೂರು: ಕೊರೋನಾ ಪರಿಸ್ಥಿತಿಯನ್ನು ವ್ಯವಸ್ಥಿತವಾಗಿ ನಿರ್ವಹಿಸದ ಸರ್ಕಾರ ಮಾಧ್ಯಮಗಳ ಗಮನವನ್ನು ಬೇರೆಡೆ ವರ್ಗಾಯಿಸಲು ಟೂಲ್ ಕಿಟ್ ಬಗ್ಗೆ ಅಪ ಪ್ರಚಾರಕ್ಕೆ ಮುಂದಾಗಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ.

ಕೊರೋನಾ ಎರಡನೇ ಅಲೆ ನಿರ್ವಹಿಸಲು ಜಗತ್ತಿನ ಎಲ್ಲಾ ರಾಷ್ಟ್ರಗಳು ಸಿದ್ಧತೆ ಮಾಡಿಕೊಂಡಿದ್ದವು, ಆದರೆ ಭಾರತ ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ.

ಮೋದಿ ಅವರು ದೀಪ ಬೆಳಗಲು ಮತ್ತು ಜಾಗಟೆ ಬಾರಿಸಲು ಹೇಳಿದ್ದರು, ಆದರೆ ಅನೇಕ ಮನೆಯ ದೀಪಗಳೇ ಆರಿ ಹೋಗಿವೆ, ಇದಕ್ಕೆ ಮೋದಿ ಸರ್ಕಾರವೇ ನೇರ ಹೊಣೆ ಎಂದು ಸುರೇಶ್ ಆರೋಪಿಸಿದ್ದಾರೆ.

ವಿದೇಶಿ ಮಾಧ್ಯಮಗಳು ಕೂಡ ಭಾರತ ಸರ್ಕಾರವನ್ನು ಟೀಕಿಸಿವೆ ಎಂದು ಅವರು ಹೇಳಿದರು. ಯಡಿಯೂರಪ್ಪ ಅವರು ಶವಸಂಸ್ಕಾರಕ್ಕೆ ಕೇವಲ 50,000 ರೂ. ನೀಡಿದ್ದಾರೆ. ಸರ್ಕಾರ ನೀಡುವ 2,000-3,000 ರೂ.ಗಳ ಮೊತ್ತವು ಅಲ್ಪವಾಗಿದ್ದು ಅದು ಸಾರಿಗೆ ವೆಚ್ಚವನ್ನು ಸಹ ಭರಿಸಲು ಸಾಕಾಗುವುದಿಲ್ಲ ಎಂದು ದೂರಿದ್ದಾರೆ. ಹಾಸಿಗೆಗಳು ಮತ್ತು ಆಮ್ಲಜನಕವನ್ನು
ಪಡೆಯಲು ಹೋರಾಟ ನಡೆಸಬೇಕಾಗಿದೆ ಎಂದು ಸುರೇಶ್ ಹೇಳಿದ್ದಾರೆ.  

ಲಾನ್ಸೆಟ್‌ನಂತಹ ಹೆಸರಾಂತ ವೈದ್ಯಕೀಯ ನಿಯತಕಾಲಿಕಗಳು ಕೂಡ ಭಾರತದ ಕೋವಿಡ್ ನಿರ್ವಹಣೆಗೆ ಮೋದಿ ಸರ್ಕಾರವನ್ನು ಟೀಕಿಸಿವೆ ಎಂದು ಕಾಂಗ್ರೆಸ್ ಮುಖಂಡ ಬ್ರಿಜೇಶ್ ಕಾಳಪ್ಪ ಹೇಳಿದರು. ಕಾಂಗ್ರೆಸ್ ಅನ್ನು 'ಟೂಲ್ಕಿಟ್' ಎಂದು ಬಿಜೆಪಿ ದೂಷಿಸುತ್ತಿದೆ. ಬಿಜೆಪಿ ನಾಯಕರಾದ ಜೆ.ಪಿ.ನಡ್ಡಾ, ಸಂಬಿತ್ ಪತ್ರ, ಬಿ.ಎಲ್.ಸಂತೋಷ್, ತೇಜಸ್ವಿ ಸೂರ್ಯ ಮತ್ತು ಇತರರು ಇದಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಫೋರ್ಜರಿ ಮಾಡಿದ್ದಕ್ಕಾಗಿ ಇವರಿಗೆ 7 ವರ್ಷ ಶಿಕ್ಷೆ ವಿಧಿಸಬೇಕಾಗುವುದು ಎಂದಿದ್ದಾರೆ.

ಗುಜರಾತ್, ಉತ್ತರ ಪ್ರದೇಶ, ಬಿಹಾರ ಮತ್ತು ಇತರ ರಾಜ್ಯಗಳಂತೆ ಸರ್ಕಾರವು ಸಾವಿನ ಬಗ್ಗೆ ಮಾಹಿತಿ ನೀಡುತ್ತಿದೆ ಎಂದು ರಾಜ್ಯಸಭಾ ಸಂಸದ ಸೈಯದ್ ನಾಸಿರ್ ಹುಸೇನ್ ಹೇಳಿದ್ದಾರೆ. "ಗಂಗಾ ನದಿಯಲ್ಲಿ ತೇಲುತ್ತಿರುವ ಶರೀರಗಳ ಜವಾಬ್ದಾರಿಯನ್ನು ಯಾರು ತೆಗೆದುಕೊಳ್ಳುತ್ತಾರೆ?" ಎಂದು ಹುಸೇನ್ ಪ್ರಶ್ನಿಸಿದ್ದಾರೆ.

ಈ ಮೊದಲು ಸರ್ಕಾರವು ಲಸಿಕೆಗಳನ್ನು ಆಮದು ಮಾಡಿಕೊಳ್ಳಲು ಏಕೆ ಸಾಧ್ಯವಾಗಲಿಲ್ಲ ಮತ್ತು ಅವುಗಳನ್ನು ಜನರಿಗೆ ಲಭ್ಯವಾಗುವಂತೆ ಏಕೆ ಮಾಡಲಿಲ್ಲ ಎಂದು ಕಾಂಗ್ರೆಸ್ ಸಂಸದರಾದ ಜಿಸಿ ಚಂದ್ರಶೇಖರ್ ಮತ್ತು  ಎಲ್.ಹನುಮಂತಯ್ಯ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!