ಮುರುಗೇಶ್ ನಿರಾಣಿ 
ರಾಜಕೀಯ

ಇನ್ನು ಎರಡು ವರ್ಷ ಯಡಿಯೂರಪ್ಪ ಅವರೇ ಸಿಎಂ; ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ನಿರಾಣಿ

ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಮಾತೇ ಇಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. 

ಮೈಸೂರು: ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಮಾತೇ ಇಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. 

ಮೈಸೂರಿನಲ್ಲಿ ಮಾತನಾಡಿದ ಸಚಿವ ಮುರುಗೇಶ್ ನಿರಾಣಿ ರಾಜ್ಯದಲ್ಲಿ ಯಡಿಯೂರಪ್ಪ ಅವರ ಆಡಳಿತ ಉತ್ತಮವಾಗಿದೆ. ಇನ್ನೂ ಎರಡು ವರ್ಷ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದರು. ರಾಜ್ಯದಲ್ಲಿ ನಾಯಕತ್ವ ಬದಲಾಗಲಿದೆ ಎನ್ನುವುದು ಕೇವಲ ಊಹಾಪೋಹ. ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಸಚಿವ ನಿರಾಣಿ ಸ್ಪಷ್ಟಪಡಿಸಿದರು.

ಸಿಎಂ ಯಡಿಯೂರಪ್ಪ ಅವರು ಕೊರೋನಾ ಸಾಂಕ್ರಾಮಿಕ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ, ಮುಂದಿನ ಚುನಾವಣೆಯನ್ನು ನಾವು ಅವರ ನಾಯಕತ್ವದಲ್ಲೇ ಎದುರಿಸಲಿದ್ದೇವೆ ಎಂದು ನಿರಾಣಿ ತಿಳಿಸಿದ್ದಾರೆ.

ಮೈಸೂರು ಮೃಗಾಲಯದಲ್ಲಿ ಹಣಕಾಸಿನ ಕೊರತೆ ಬಗ್ಗೆ ಮಾಹಿತಿ ಪಡೆದ ಅವರು ತಮ್ಮ ಮೊಮ್ಮಗ ಸಮರ್ಥ್ ವಿಜಯ್ ಹೆಸರಿನಲ್ಲಿ ಹುಲಿಯೊಂದನ್ನು ದತ್ತು ಪಡೆದರು. ಪ್ರಾಣಿಗಳನ್ನು ದತ್ತು ಪಡೆಯಲು ಜನ ಮುಂದಾಗಬೇಕು ಎಂದು ನಿರಾಣಿ ಕರೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ನಾವು ಯುದ್ಧದಲ್ಲಿದ್ದೇವೆ; ಟ್ರಂಪ್ ಮಾರ್ಮಿಕ ನುಡಿ, ಸಂಘರ್ಷ ಮತ್ತಷ್ಟು ಉದ್ನಿಗ್ನ ಸಾಧ್ಯತೆ

'ಸಿಎಂ ಸಿದ್ದರಾಮಯ್ಯ ತಮ್ಮ ಮಗನನ್ನು ವಸೂಲಿ ಮಾಡಲು ರಾಜಕೀಯಕ್ಕೆ ಕರೆತಂದಿದ್ದಾರೆ': ಹೆಚ್ ಡಿ ಕುಮಾರಸ್ವಾಮಿ

ಮಹಾರಾಷ್ಟ್ರ: ನಾಸಿಕ್ ಬಳಿ ಬಾವಿಗೆ ಬಿದ್ದ ಕಾರು; 9 ಮಂದಿ ಸಾವು-Video

ಗಡಿ ನುಗ್ಗಿ RSS ಶಿಬಿರ-ಮನೆಗಳ ಮೇಲೆ ನೇರ ದಾಳಿ: ಮತ್ತೆ ಬಾಲ ಬಿಚ್ಚಿದ ಪಾಕ್‌; ಭಾರತಕ್ಕೆ ಗೊಡ್ಡು ಬೆದರಿಕೆ

ಅತ್ತೆ ಮನೆ ಕಿರುಕುಳ: ಬೇಸತ್ತು ಬೆಂಕಿ ಹಚ್ಚಿಕೊಂಡು ಗರ್ಭಿಣಿ ಮಹಿಳೆ ಆತ್ಮಹತ್ಯೆ, ನಾಲ್ವರ ಬಂಧನ

SCROLL FOR NEXT