ಈಶ್ವರಪ್ಪ 
ರಾಜಕೀಯ

ಸಚಿವ ಯೋಗೇಶ್ವರ್‌ಗೆ ಇಷ್ಟವಿಲ್ಲದಿದ್ದರೆ ಪಕ್ಷದಿಂದ ಹೊರ ನಡೆಯಲಿ: ಕೆ.ಎಸ್. ಈಶ್ವರಪ್ಪ

ಮುಖ್ಯಮಂತ್ರಿ ಮೇಲೂ ನಂಬಿಕೆ ಇಲ್ಲ. ಹೈಕಮಾಂಡ್ ಮೇಲೂ ನಂಬಿಕೆ ಇಲ್ಲ ಅನ್ನುವುದಾದರೆ ಸಿ. ಪಿ. ಯೋಗೇಶ್ವರ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗ: ಮುಖ್ಯಮಂತ್ರಿ ಮೇಲೂ ನಂಬಿಕೆ ಇಲ್ಲ. ಹೈಕಮಾಂಡ್ ಮೇಲೂ ನಂಬಿಕೆ ಇಲ್ಲ ಅನ್ನುವುದಾದರೆ ಸಿ.ಪಿ. ಯೋಗೇಶ್ವರ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು ಯೋಗೇಶ್ವರ್‌ ಅವರಿಗೆ ಏನೇ ಅಸಮಾಧಾನವಿದ್ದರೂ ಕೇಂದ್ರ ನಾಯಕರ ಗಮನಕ್ಕೆ ತರಬೇಕು. ಅದನ್ನು ಯೋಗೇಶ್ವರ್‌ ಮಾಡಿದ್ದಾರೆ. ಆದರೆ, ಹೊರಗಡೆ ಅವರು ಹೇಳಿಕೆ ನೀಡಿದ್ದು ಸರಿಯಲ್ಲ. ಅಸಮಾಧಾನವಿದ್ದಲ್ಲಿ ಸರ್ಕಾರದಿಂದ ಹೊರಹೋಗಬಹುದು. ಸಮಾಧಾನದಿಂದ ಮಾತನಾಡಿಕೊಂಡು ಸಮಸ್ಯೆ ಬಗೆಹರಿಸಿಕೊಳ್ಳಬೇಕು. 

ರಾಜ್ಯ ಬಿಜೆಪಿಯ ಎಲ್ಲಾ ಶಾಸಕರು ಕಲ್ಲು ಬಂಡೆಗಳಂತೆ ಒಗ್ಗಟ್ಟಾಗಿ ಇದ್ದೇವೆ. ಕೇಂದ್ರ ನಾಯಕರು ಸಿಎಂ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ. ಅವರ ತೀರ್ಮಾನಕ್ಕೆ ನಾವು ಬದ್ಧ" ಎಂದು ತಿಳಿಸಿದರು. ಯಾವುದೇ ಕಾರಣಕ್ಕೂ ಮಾಧ್ಯಮಗಳಿಗೆ ಆಹಾರವಾಗಬಾರದು. ಯೋಗೇಶ್ವರ್‌ ಹೇಳಿಕೆ ಸರಿಯಿದ್ದರೆ ಪಕ್ಷದ ವರಿಷ್ಠರು ಗಮನ ಹರಿಸುತ್ತಾರೆ ಎಂದರು.

ಬಿಜೆಪಿಯಲ್ಲಿ ಎಲ್ಲವೂ ಸರಿ ಇದೆ ಎಂದು ನಾನು ಹೇಳುತ್ತಿಲ್ಲ. ಅದನ್ನು ಒಪ್ಪುವುದೂ ಇಲ್ಲ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆ ಪ್ರಶ್ನೆ ಇಲ್ಲವೆಂದು ಪಕ್ಷದ ವರಿಷ್ಠರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT