ಯಡಿಯೂರಪ್ಪ 
ರಾಜಕೀಯ

'ಮಠಾಧೀಶರನ್ನು, ಮಾಧ್ಯಮಗಳನ್ನು, ವಿರೋಧ ಪಕ್ಷಗಳನ್ನು ಖರೀದಿ ಮಾಡುವ ಅಹಂಕಾರ ಮತ್ತು ಹಣದ ಪಿತ್ತ ನೆತ್ತಿಗೆ ಏರಿದೆ'

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಮಗ ಬಿ.ವೈ.ವಿಜಯೇಂದ್ರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​​ ಫೇಸ್​ಬುಕ್ ಪೋಸ್ಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಮಗ ಬಿ.ವೈ.ವಿಜಯೇಂದ್ರ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​​ ಫೇಸ್​ಬುಕ್ ಪೋಸ್ಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಭ್ರಷ್ಟಾಚಾರದಿಂದ ಗಳಿಸಿದ ಹಣದಿಂದ ಏನು ಬೇಕಾದರೂ ಖರೀದಿಸಬಹುದು, ಎಂಬ ಸೊಕ್ಕಿನಿಂದ ಇಂದು ಎಲ್ಲರನ್ನೂ ಅಂದರೆ ಪೂಜ್ಯ ಮಠಾಧೀಶರನ್ನು. ಮಾಧ್ಯಮಗಳನ್ನು ವಿರೋಧ ಪಕ್ಷಗಳನ್ನು ಖರೀದಿ ಮಾಡುವ ಅಹಂಕಾರ ಮತ್ತು ಹಣದ ಪಿತ್ತ ನೆತ್ತಿಗೆ ಏರಿದೆ ಎಂದು ಲೇವಡಿ ಮಾಡಿದ್ದಾರೆ.

ಸಿಎಂ ಯಡಿಯೂರಪ್ಪ ಅವರ ಇಡೀ ಕುಟುಂಬ ಹಗಲು ದರೋಡೆಯಲ್ಲಿ ನಿರತವಾಗಿದೆ. ಭ್ರಷ್ಟಾಚಾರದಿಂದ ಗಳಿಸಿದ‌ ಹಣದಿಂದ ಏನನ್ನು ಬೇಕಾದರೂ ಖರೀದಿಸಬಹುದೆಂಬ ಅಹಂಕಾರ ಸಿಎಂ ಯಡಿಯೂರಪ್ಪ ಕುಟುಂಬದ ನೆತ್ತಿಗೇರಿದೆ. ತಮ್ಮದೇ ಜಾಲತಾಣಗಳ ಮೂಲಕ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಲಾಗುತ್ತಿದೆ. ಇದನ್ನು ವೀರಶೈವ ಲಿಂಗಾಯತ ಸಮಾಜ ಎಂದಿಗೂ ಸಹಿಸುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಮಗ
ಬಿ.ವೈ. ವಿಜಯೇಂದ್ರರನ್ನು ಕುಟುಕಿದ್ದಾರೆ.

ತಂದೆ ಯಡಿಯೂರಪ್ಪ ಅವರ ಸ್ಥಾನ ಪತನದ ಮುನ್ಸೂಚನೆ ವಿಜಯೇಂದ್ರಗೆ ಸಿಕ್ಕಿದ್ದು, ಇದನ್ನು ವೀರಶೈವ ಲಿಂಗಾಯತ ಸಮುದಾಯಕ್ಕೆ ಅವಮಾನ ಎಂಬಂತೆ ಎಂದು ಬಿಂಬಿಸಲಾಗುತ್ತಿದೆ. ಇದರಿಂದ ಪಕ್ಷಕ್ಕೆ ಭಾರಿ ಹಿನ್ನಡೆ‌ ಆಗಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Kurnool Bus Fire: ಆಂಧ್ರ ಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಹೈದರಾಬಾದ್-ಬೆಂಗಳೂರು ಖಾಸಗಿ ಬಸ್ ನಲ್ಲಿ ಭೀಕರ ಬೆಂಕಿ ಅವಘಡ: 21 ಮಂದಿ ಸಜೀವ ದಹನ-Video

ಕರ್ನೂಲ್ ಬಸ್ ದುರಂತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ-ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ, 2 ಲಕ್ಷ ರೂ. ಪರಿಹಾರ ಘೋಷಣೆ

ಭಾರತದ ನಂತರ ಇದೀಗ ಅಪ್ಘಾನಿಸ್ತಾನದಿಂದಲೂ 'ಜಲಬಾಂಬ್': ಪಾಕಿಸ್ತಾನ ವಿಲವಿಲ!

Kurnool Bus Fire: ಬೆಂಗಳೂರಿನಲ್ಲಿ ನೆಲೆಸಿದ್ದ ನೆಲ್ಲೂರು ಮೂಲದ ಒಂದೇ ಕುಟುಂಬದ ನಾಲ್ವರು ಸಜೀವ ದಹನ!

'ಅಹಿಂದ ಕಿರೀಟ'ಕ್ಕಾಗಿ ಕಚ್ಚಾಟ; ಸಿದ್ದರಾಮಯ್ಯ ಸೈದ್ಧಾಂತಿಕ ಉತ್ತರಾಧಿಕಾರಿ ಪಟ್ಟಕ್ಕಾಗಿ ಕಿತ್ತಾಟ! ಒಳಗೊಳಗೆ ಖರ್ಗೆ ಕೊತ-ಕೊತ?

SCROLL FOR NEXT