ರಮೇಶ ಭೂಸನೂರ, ಶ್ರೀನಿವಾಸ ಮಾನೆ 
ರಾಜಕೀಯ

ಉಪ ಚುನಾವಣೆ: ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು, ಸಿಂದಗಿಯಲ್ಲಿ ಬಿಜೆಪಿಯ ರಮೇಶ ಭೂಸನೂರಗೆ ಜಯ

ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು ಸಾಧಿಸಿದ್ದಾರೆ. ಈ ಮೂಲಕ  ತವರು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತೀವ್ರ ಮುಖಭಂಗವಾಗಿದೆ.ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಜಯ ಸಾಧಿಸಿದ್ದಾರೆ.

ಹಾನಗಲ್: ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲುವು ಸಾಧಿಸಿದ್ದಾರೆ. ಈ ಮೂಲಕ  ತವರು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತೀವ್ರ ಮುಖಭಂಗವಾಗಿದೆ.ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಜಯ ಸಾಧಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ತನ್ನ ಸಮೀಪದ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನ ಅವರಿಗಿಂತ 7,373  ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂದು ಕೇಂದ್ರ ಚುನಾವಣಾ ಆಯೋಗ ಅಧಿಕೃತ ಮಾಹಿತಿ ನೀಡಿದೆ. 

ಶ್ರೀನಿವಾಸ ಮಾನೆ 87, 490 ಮತಗಳನ್ನು ಪಡೆದರೆ, ಶಿವರಾಜ್ ಸಜ್ಜನರಗೆ  80, 117  ಮತಗಳು ಸಿಕ್ಕಿವೆ. ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್ 927 ಮತಗಳನ್ನು ಪಡೆದಿದ್ದಾರೆ.

ಹಾನಗಲ್ ಕ್ಷೇತ್ರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆಯ ಕ್ಷೇತ್ರವಾಗಿದ್ದು, ಭಾರೀ ಪ್ರತಿಷ್ಠೆಗೆ ಕಾರಣವಾಗಿತ್ತು. ಮುಖ್ಯಮಂತ್ರಿ, ಸಚಿವರು ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಭಾರೀ ಪ್ರಚಾರ ನಡೆಸಿದ್ದರು.

ಸಿಂದಗಿ ಕ್ಷೇತ್ರದ ಉಪ ಚುನಾವಣೆಯ 22 ಸುತ್ತಿನ ಮತ ಎಣಿಕೆಯಲ್ಲಿ ಎಲ್ಲಾ ಸುತ್ತುಗಳಲ್ಲಿ ಮುನ್ನಡೆ ಸಾಧಿಸಿಕೊಂಡು ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ 30 ಸಾವಿರಕಕೂ ಅಧಿಕ ಮತಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದಾರೆ.

ಪ್ರತಿ ಸುತ್ತಿನಲ್ಲಿಯೂ ಭೂಸನೂರ ತಮ್ಮ ನಿಕಟಸ್ಪರ್ಧಿ ಕಾಂಗ್ರೆಸ್ ನ ಅಶೋಕ್ ಮನಗುಳಿಯವರಿಗಿಂತ 2,500 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದರು. ವಿಜಯಪುರದ ವಡೆಯರ್ ಭವನ ಸೈನಿಕ ಶಾಲೆಯಲ್ಲಿ ಮತ ಎಣಿಕೆ ಕಾರ್ಯ ನಡೆಯಿತು. 

ಬಿಜೆಪಿ 93,380 ಮತಗಳನ್ನು ಪಡೆದುಕೊಂಡಿದೆ, ಕಾಂಗ್ರೆಸ್ 62,292 ಮತಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ ಮತ್ತು ಜೆಡಿಎಸ್ (ಎಸ್) ಕೇವಲ 4,321 ಮತಗಳನ್ನು ಪಡೆಯುವ ಮೂಲಕ ಮೂರನೇ ಸ್ಥಾನದಲ್ಲಿದೆ, ಅಲ್ಲಿ ಅದು ಠೇವಣಿ ಕಳೆದುಕೊಂಡಿತು. ಇದೇ ವೇಳೆ 1,029 ಮಂದಿ ನೋಟಾಕ್ಕೆ ಮತ ನೀಡಿದ್ದಾರೆ. ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಶೇ.69.47ರಷ್ಟು ಮತದಾನವಾಗಿದೆ.

ರಮೇಶ ಭೂಸನೂರ ಅವರು ಸಿಂದಗಿ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಒಂದೇ ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾದ ಮೊದಲ ರಾಜಕಾರಣಿಯಾಗಿದ್ದಾರೆ. 

ಈ ಸಂದರ್ಭದಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿದ ರಮೇಶ ಭೂಸನೂರ, “ನಾನು 25,000 ಮತಗಳ ಅಂತರದಿಂದ ಚುನಾವಣೆಯಲ್ಲಿ ಗೆಲ್ಲುತ್ತೇನೆ ಎಂದು ವಿಶ್ವಾಸ ಹೊಂದಿದ್ದೆ ಆದರೆ ಜನರು ನನ್ನನ್ನು 31,088 ಮತಗಳ ಮುನ್ನಡೆಯೊಂದಿಗೆ ಆಯ್ಕೆ ಮಾಡಿದ್ದಾರೆ. ನನ್ನ ಮತ್ತು ನನ್ನ ಪಕ್ಷದ ಮೇಲೆ ವಿಶ್ವಾಸ ತುಂಬಿದ ಮತದಾರರಿಗೆ ನಾನು ಧನ್ಯವಾದ ಹೇಳುತ್ತೇನೆ. ನನ್ನ ಗೆಲುವಿಗಾಗಿ ಸಚಿವರಾದ ವಿ ಸೋಮಣ್ಣ, ಸಿ ಸಿ ಪಾಟೀಲ್ ಮತ್ತು ಗೋವಿಂದ್ ಕಾರಜೋಳ ಸೇರಿದಂತೆ ಹಿರಿಯ ನಾಯಕರು ಮೂರು ವಾರಗಳ ಕಾಲ ಕ್ಷೇತ್ರದಲ್ಲಿ ತೀವ್ರ ಪ್ರಚಾರ ನಡೆಸಿದರು ಎಂದು ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT