ಸಿದ್ದರಾಮಯ್ಯ 
ರಾಜಕೀಯ

ಉಪಚುನಾವಣೆ ಫಲಿತಾಂಶ ದೇಶಕ್ಕೆ ಸಂದೇಶ ಎನ್ನುವುದು ಮೂರ್ಖತನ: ಒಂದು ಫಲಿತಾಂಶ, ಹಲವು ಬಣ!

ಉಪ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಪ ಮುಂದುವರಿದಿದೆ. ಹಾನಗಲ್ ಉಪಚುನಾವಣೆ ಫಲಿತಾಂಶದ ಕಾಂಗ್ರೆಸ್  ಹೇಳಿಕೆಗೆ ಬಿಜೆಪಿ ಕಿಡಿ ಕಾರಿದೆ.

ಬೆಂಗಳೂರು: ಉಪ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ರಾಜಕೀಯ ಪಕ್ಷಗಳ ಆರೋಪ-ಪ್ರತ್ಯಾರೋಪ ಮುಂದುವರಿದಿದೆ. ಹಾನಗಲ್ ಉಪಚುನಾವಣೆ ಫಲಿತಾಂಶದ ಕಾಂಗ್ರೆಸ್  ಹೇಳಿಕೆಗೆ ಬಿಜೆಪಿ ಕಿಡಿ ಕಾರಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ , ಸಿದ್ದರಾಮಯ್ಯ ಅವರೇ, ಕಳೆದ ಎರಡು ವರ್ಷದ ಅವಧಿಯಲ್ಲಿ ಎದುರಾದ ಉಪಚುನಾವಣೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಫಲಿತಾಂಶ ಗಮನಿಸಿದ್ದೀರಾ?

ನಿಮಗೆ ಮರೆವಿನ ಸಮಸ್ಯೆ ಇಲ್ಲ ಎಂದಾದರೆ ನಾವು ಅಂಕಿ-ಸಂಖ್ಯೆ ನೀಡುವುದಿಲ್ಲ. ಇಲ್ಲವಾದರೆ ಅಂಕಿಸಂಖ್ಯೆಗಳ ಸಮೇತ ನಿಮ್ಮ ಅವಕಾಶವಾದಿತನದ ಹೇಳಿಕೆ ಬಿಚ್ಚಿಡಬೇಕಾಗುತ್ತದೆ

ಉಪಚುನಾವಣೆ ಮುಂದಿನ ರಾಜಕೀಯದ ದಿಕ್ಸೂಚಿಯೇ ಎಂದು ಚುನಾವಣೆಗೆ‌ ಮುನ್ನ ಪತ್ರಕರ್ತರು ಪ್ರಶ್ನಿಸಿದಾಗ ಉತ್ತರಿಸದೇ ಜಾರಿಕೊಂಡ ಡಿಕೆ ಶಿವಕುಮಾರ್, ಅವರು ಈಗ ಇದು ರಾಷ್ಟ್ರ ರಾಜಕಾರಣದ ಬದಲಾವಣೆ ಸಂಕೇತ ಎನ್ನುತ್ತಿದ್ದಾರೆ. ಗಾಳಿ ಬಂದತ್ತ ತೂರಿಕೊಳ್ಳುವುದು ನಾಯಕನ ಲಕ್ಷಣವಲ್ಲ, ಅವಕಾಶವಾದಿಕಾಂಗ್ರೆಸ್ ಎಂದು ಲೇವಡಿ ಮಾಡಿದೆ.

ನಕಲಿ ಗಾಂಧಿ ಕುಟುಂಬದ ಭದ್ರಕೋಟೆ, ತವರು ಕ್ಷೇತ್ರ ಅಮೇಥಿಯಲ್ಲಿ ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್‌ ಗಾಂಧಿ ಅವರು ಸೋತಿದ್ದರು. ಮುಖ್ಯಮಂತ್ರಿಯಾಗಿದ್ದುಕೊಂಡೇ ಸಿದ್ದರಾಮಯ್ಯ ಅವರು ತಮ್ಮ ಸ್ವಕ್ಷೇತ್ರದಲ್ಲೇ ಸೋಲನುಭವಿಸಿದ್ದಾರೆ. ಒಂದು ಕ್ಷೇತ್ರವನ್ನು ಗೆದ್ದು "ಈ ಫಲಿತಾಂಶ ದೇಶಕ್ಕೆ ಸಂದೇಶ" ಎನ್ನುವುದು ಮೂರ್ಖತನ.

ಹಾನಗಲ್ ಗೆಲುವು, ಸಿಂಧಗಿ ಸೋಲು ಸೇರಿದಂತೆ ರಾಜಕೀಯ ಬೆಳವಣಿಗೆಗಳ ಬಗ್ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಜೊತೆ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಿಗಿಂತ‌‌ ಮೊದಲು ಹೈಕಮಾಂಡ್ ತಲುಪುವ ಧಾವಂತ. ಒಂದು ಫಲಿತಾಂಶ, ಹಲವು ಬಣ! ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!