ಕುಮಾರಸ್ವಾಮಿ 
ರಾಜಕೀಯ

'ಜನತಾ ಪತ್ರಿಕೆ': ಈಗ ಜಾತ್ಯಾತೀತ ಜನತಾದಳ ಪಕ್ಷಕ್ಕೂ ತನ್ನದೇ ಆದ ಪತ್ರಿಕೆ, ನಾಳೆ ಬಿಡುಗಡೆ

ದೇಶದ ಇತರೆ ರಾಜಕೀಯ ಪಕ್ಷಗಳಂತೆ ಇದೀಗ ಕರ್ನಾಟಕದ ಜಾತ್ಯಾತೀತ ಜನತಾದಳ (Janata Dal Secular) ಪಕ್ಷ ಕೂಡ ಇದೀಗ ತನ್ನದೇ ಆದ ಪತ್ರಿಕಾ ಸಂಸ್ಥೆಯನ್ನು ತೆರೆಯುತ್ತಿದ್ದು ನಾಳೆ ಜೆಡಿಎಸ್ (JDS) ಪಕ್ಷದ ಜನತಾ ಪತ್ರಿಕೆ (Janata Patrike) ಲೋಕಾರ್ಪಣೆಯಾಗಲಿದೆ ಎಂದು ಹೇಳಲಾಗಿದೆ.

ಬೆಂಗಳೂರು: ದೇಶದ ಇತರೆ ರಾಜಕೀಯ ಪಕ್ಷಗಳಂತೆ ಇದೀಗ ಕರ್ನಾಟಕದ ಜಾತ್ಯಾತೀತ ಜನತಾದಳ (Janata Dal Secular) ಪಕ್ಷ ಕೂಡ ಇದೀಗ ತನ್ನದೇ ಆದ ಪತ್ರಿಕಾ ಸಂಸ್ಥೆಯನ್ನು ತೆರೆಯುತ್ತಿದ್ದು ನಾಳೆ ಜೆಡಿಎಸ್ (JDS) ಪಕ್ಷದ ಜನತಾ ಪತ್ರಿಕೆ (Janata Patrike) ಲೋಕಾರ್ಪಣೆಯಾಗಲಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಅವರು ಮಾಹಿತಿ ನೀಡಿದ್ದು, ''ಜನತಾ ಪತ್ರಿಕೆ ' ಲೋಕಾರ್ಪಣೆ: ಸೋಮವಾರದಂದು ಪಕ್ಷದ ವಿಚಾರಗಳನ್ನು ಜನತೆ ಮತ್ತು ಪಕ್ಷದ ಕಾರ್ಯಕರ್ತರಿಗೆ ತಿಳಿಸುವ ಮಾಸಿಕ ' ಜನತಾ ಪತ್ರಿಕೆ ' ಯನ್ನು ಬಿಡುಗಡೆ ಮಾಡಲಾಗುವುದು. ನಾಡಿನ ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಪಿ.ರಾಮಯ್ಯ ಅವರು ಪತ್ರಿಕೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದು ತಿಳಿಸಿದರು.

ಪಕ್ಷ ಸಂಘಟನೆಗೆ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿರುವ ಕುಮಾರಸ್ವಾಮಿ ಅವರ ಫಾರ್ಮ್‌ಹೌಸ್‌ನಲ್ಲಿ ಕಾರ್ಯಗಾರ ನಡೆಸಿದ ನಂತರ ಇದೀಗ ಮತ್ತೆ ಎರಡನೇ ಹಂತದ ಜೆಡಿಎಸ್ ಸಂಘಟನಾ ಕಾರ್ಯಗಾರ ಸೋಮವಾರದಿಂದ ( ನವೆಂಬರ್ 8-15) ರಿಂದ ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆಯಲಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ ಎಚ್ ಡಿಕೆ,  'ಎಲ್ಲ ಹಂತಗಳಲ್ಲೂ ಪಕ್ಷವನ್ನು ಸಂಘಟನೆ ಮಾಡಲು ಈ ಕಾರ್ಯಗಾರ ಸಹಕಾರಿ ಆಗಲಿದೆ. ಎಂಟು ದಿನಗಳ‌ ಕಾಲ ಹಾಲಿ,‌ ಮಾಜಿ ಶಾಸಕರು,‌ ಪದಾಧಿಕಾರಿಗಳ ಸಭೆ ಇಲ್ಲಿ ನಡೆಯಲಿದೆ. ನವೆಂಬರ್ 15ರಂದು ಈ ಕಾರ್ಯಗಾರ ಅಂತ್ಯವಾಗಲಿದೆ. ಅಂತೆಯೇ ದಿನಕ್ಕೆ ಎರಡು ಜಿಲ್ಲೆಗಳನ್ನು ಒಳಗೊಂಡಂತೆ ಸಭೆಗಳನ್ನು ನಡೆಸಲಾಗುವುದು. ಈ ಸಭೆಯಲ್ಲಿ ಮುಂದಿನ ಚುನಾವಣಾ ಸಿದ್ಧತೆ ಸಂಬಂಧ ಚರ್ಚಿಸಲಿದ್ದೇವೆ. ಮಹತ್ವದ ಈ ಸಭೆಯಲ್ಲಿ ಭಾಗಿಯಾಗುವ ಎಲ್ಲರಿಗೂ ಕಠಿಣ ಮತ್ತು ಸ್ಪಷ್ಟ ಮಾರ್ಗಸೂಚಿ ನೀಡಲಾಗುವುದು. ತದ ನಂತರ ಹೇಗೆ ಕೆಲಸ ಮಾಡಬೇಕು ಎಂಬುದನ್ನು ಸೂಚಿಸಲಾಗುವುದು ಎಂದು ಅವರು ತಿಳಿಸಿದರು.

ನಾಳೆ ಜನತಾ ಪತ್ರಿಕೆ ಲೋಕಾರ್ಪಣೆ
ಇದೇ ವೇಳೆ ನಾಳೆ ಬಿಡುಗಡೆಯಾಗಲಿರುವ ಜನತಾಪತ್ರಿಕೆ ಕುರಿತು ಮಾತನಾಡಿದ ಎಚ್ ಡಿ ಕುಮಾರಸ್ವಾಮಿ ಅವರು, 'ನನ್ನ ಸಂಪಾದಕೀಯ ನೇತೃತ್ವದಲ್ಲಿ ಈ ಪತ್ರಿಕೆ ಮೂಡಿ ಬರುತ್ತಿದ್ದು, ನಾಡಿನ ಜನರ ಆಶೋತ್ತರಗಳನ್ನು ಈಡೇರಿಸಲು ಹಾಗೂ ಪಕ್ಷದ ದನಿಯನ್ನು ಜನರಿಗೆ ಮುಟ್ಟಿಸುವ ಗುರಿಯನ್ನು ಪತ್ರಿಕೆ ಹೊಂದಿದೆ. ಕಾರ್ಯಕರ್ತರಿಗೆ ಪಕ್ಷದ ಬಗ್ಗೆ ದಿಕ್ಸೂಚಿಯಾಗಿ ಹಾಗೂ ಮಾರ್ಗದರ್ಶಿಯಾಗಿ ಇದು ಮುನ್ನಡೆಸುತ್ತದೆ. ಅಲ್ಲದೆ ನಾಡು, ನುಡಿ, ನೆಲ, ಜಲ, ಭಾಷೆ ಇತ್ಯಾದಿ ವಿಷಯಗಳನ್ನು ಒಳಗೊಳ್ಳುವ ಪತ್ರಿಕೆ ಇದಾಗಿದೆ. ಜನತಾ ಪತ್ರಿಕೆಯ ಮೊದಲ ಸಂಚಿಕೆಯನ್ನು ಹಿರಿಯ ಪತ್ರಕರ್ತ ಪಿ ರಾಮಯ್ಯ ಅವರು 'ಜನತಾ ಪರ್ವ 2.0' ನಲ್ಲಿ ಬಿಡುಗಡೆ ಮಾಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಇನ್ನು ಚಲನಚಿತ್ರ ವಿತರಕರೂ ಆಗಿರುವ ಮತ್ತು ನಿರ್ಮಾಪಕ, ಕುಮಾರಸ್ವಾಮಿ ಅವರು ಈಗಾಗಲೇ ಖಾಸಗಿ ಕನ್ನಡ ದೂರದರ್ಶನ ಚಾನೆಲ್ ಅನ್ನು ಹೊಂದಿದ್ದು, ಜನತಾ ಪತ್ರಿಕೆಯು ಪಕ್ಷದ ಮುಖವಾಣಿ ಮಾತ್ರವಲ್ಲ, ಜನರ ಧ್ವನಿಯೂ ಆಗಲಿದೆ ಎಂದು ಕುಮಾರಸ್ವಾಮಿ ಶನಿವಾರ ಮಾಧ್ಯಮಗಳಿಗೆ ತಿಳಿಸಿದರು.

ಲಘುವಾಗಿ ಮಾತನಾಡಬೇಡಿ
ಕೆಲವರು ನಮ್ಮ ಮಿಷನ್ 123 ಬಗ್ಗೆ ಲಘುವಾಗಿ ಮಾತನ್ನಾಡುತ್ತಿದ್ದಾರೆ. ಹಾಗೆ ಮಾತನಾಡುವ ಅಗತ್ಯವಿಲ್ಲ. 2023ರ ನಮ್ಮ ಗುರಿ ಏನಿದೆ ಅದನ್ನು ಮುಟ್ಟುತ್ತೇವೆ. ನಮ್ಮ ದಾರಿ ಮತ್ತು ಗುರಿಯ ಬಗ್ಗೆ ನಮಗೆ ಸ್ಪಷ್ಟತೆ ಇದೆ. ಯಾರೂ ಈ ಬಗ್ಗೆ ಉಪದೇಶ ಮಾಡುವ ಅಗತ್ಯ ಇಲ್ಲ. ಪಕ್ಷ ಬಿಟ್ಟುವರಿಂದ ಸಂಘಟನೆಗೆ ಯಾವುದೇ ಶಕ್ತಿ ಬಂದಿಲ್ಲ. ಪಕ್ಷದಿಂದ ಅನುಕೂಲ ಪಡೆದುಕೊಂಡು ಕೆಲವರು ಹೋಗುತ್ತಿದ್ದಾರೆ. ಯಾರು ಯಾವಾಗ ಪಕ್ಷ ಬಿಡುತ್ತಾರೆ ಎನ್ನುವ ಮಾಹಿತಿ ನನಗೆ ಎರಡು ವರ್ಷಗಳ ಹಿಂದೆಯೇ ಇದೆ. ಮಾಧ್ಯಮದವರಾದ ನಿಮಗೆ ಈಗ ಅದು ಹೊಸದು ಅನ್ನಿಸಬಹುದು. ಕೆಲವರು ದೈಹಿಕವಾಗಿ ಇಲ್ಲೇ ಇರಬಹುದು. ಮಾನಸಿಕವಾಗಿ ಬೇರೆ ಕಡೆ ಹೋಗಿದ್ದಾರೆ ಎಂದು ಅವರು ನೇರವಾಗಿಯೇ ಹೇಳಿದರು.

ಬಿಜೆಪಿ, ಜೆಡಿಎಸ್ ನಿಂದ ನಮ್ಮ ಪಕ್ಷಕ್ಕೆ ಬರುತ್ತಾರೆ ಅಂತಾ ಕಾಂಗ್ರೆಸ್ ನಾಯಕರು ಹೇಳ್ತಿದ್ದಾರೆ. ಅದರಿಂದ ನನಗೆ ಯಾವ ಶಾಕ್ ಆಗೋದಿಲ್ಲ. ಪಕ್ಷಕ್ಕಾಗಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT