ಟಿಪು ಜಯಂತಿಯಲ್ಲಿ ಸಿದ್ದರಾಮಯ್ಯ 
ರಾಜಕೀಯ

ಟಿಪ್ಪು ಜಯಂತಿಯ ಮೋಜಿನಲ್ಲಿ ಕಳೆದು ಹೋಗಬೇಡಿ: ಇತಿಹಾಸದ ಪುಸ್ತಕ ಓದಿ, ಇತಿಹಾಸ ತಿರುಚಿದವರ ಬರಹವನ್ನಲ್ಲ!

ವೀರವನಿತೆ ಒನಕೆ ಓಬವ್ವ ಜಯಂತಿ ಪ್ರಯುಕ್ತ ಶುಭಾಶಯ ಹೇಳುವುದಕ್ಕೆ ಸಿದ್ದರಾಮಯ್ಯ ಅವರಿಗೆ ಧೈರ್ಯವಿದೆಯೇ? ಎಂದು ಪ್ರಶ್ನಿಸಿದೆ.

ಬೆಂಗಳೂರು: ಟಿಪು ಜಯಂತಿ ಆಚರಣೆ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟೀಕಾ ಪ್ರಹಾರ ನಡೆಸಿದೆ,  ವೀರವನಿತೆ ಒನಕೆ ಓಬವ್ವ ಜಯಂತಿ ಪ್ರಯುಕ್ತ ಶುಭಾಶಯ ಹೇಳುವುದಕ್ಕೆ ಸಿದ್ದರಾಮಯ್ಯ ಅವರಿಗೆ ಧೈರ್ಯವಿದೆಯೇ? ಎಂದು ಪ್ರಶ್ನಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ  ಸಿದ್ದರಾಮಯ್ಯನವರೇ, ಟಿಪ್ಪು ಜಯಂತಿಯ ಮೋಜಿನಲ್ಲಿ ಚಾಮರಾಜಪೇಟೆಯಲ್ಲಿ‌ ಕಳೆದು ಹೋಗಬೇಡಿ. ಸಿದ್ದರಾಮಯ್ಯನವರೇ, ಇತಿಹಾಸದ ಪುಸ್ತಕ ಓದಿ, ಇತಿಹಾಸ ತಿರುಚಿದವರ ಬರಹವನ್ನಲ್ಲ.ಟಿಪ್ಪು ಒಬ್ಬ ವೀರ... ! ಇದು ಸಿದ್ದರಾಮಯ್ಯನವರ ವ್ಯಾಖ್ಯಾನ. ಈ ರಣ ಹೇಡಿಯನ್ನು ಚಿತ್ರದುರ್ಗದ ಮದಕರಿನಾಯಕ ಹೆಡೆಮುರಿ‌ ಕಟ್ಟಿದ್ದ ಇತಿಹಾಸ ನಿಮಗೆ ಗೊತ್ತೇ? ಎಂದು ಟೀಕಿಸಿದೆ.

ಚರಿತ್ರೆಯ ಆಯ್ದ ಭಾಗವನ್ನು ಮಾತ್ರ ಓದುವ ಹವ್ಯಾಸ ಒಳ್ಳೆಯದಲ್ಲ. ಸಿದ್ದರಾಮಯ್ಯ ಅವರೇ, ನಿಮಗೆ ಓಲೈಕೆ ರಾಜಕಾರಣ ಮಾತ್ರ ಮುಖ್ಯ, ಹೀಗಾಗಿ ವೀರಾಗ್ರಣಿ ಒನಕೆ ಓಬವ್ವ ಹಾಗೂ ಮದಕರಿ ನಾಯಕರ ಜಯಂತಿಯ ಬದಲು ಟಿಪ್ಪು ಜಯಂತಿ ಆಚರಿಸಿದಿರಿ.  ನೀವೊಬ್ಬ ಹಿಂದು ವಿರೋಧಿ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ.

ಹೈದರಾಲಿ ಮತ್ತು ಟಿಪ್ಪು ಅಪ್ರತಿಮ ದೇಶಪ್ರೇಮಿಗಳು ಎನ್ನುವ ಸಿದ್ದರಾಮಯ್ಯನವರೇ, ವೀರವನಿತೆ ಓಬವ್ವ ಹಾಗೂ ಚಿತ್ರದುರ್ಗದ ಮದಕರಿ ನಾಯಕರಿಗೆ ಯಾವ ಪಟ್ಟಕಟ್ಟುತ್ತೀರಿ? ಟಿಪ್ಪುವನ್ನು ವೈಭವೀಕರಿಸುವ ನಿಮಗೆ ಓಬವ್ವ ಹಾಗೂ ಮದಕರಿ ನಾಯಕನ ಶೌರ್ಯ ಕಾಣಿಸುವುದಿಲ್ಲವೇ? ಎಂದು ಪ್ರಶ್ನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್