ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ವಿಧಾನಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಶೀಘ್ರ ಪ್ರಕಟ: ಹೆಚ್​​ಡಿ ಕುಮಾರಸ್ವಾಮಿ

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್​​ಗೆ ಘೋಷಣೆ ಆಗಿರುವ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಗಳನ್ನು ಶೀಘ್ರವೇ ಅಂತಿಮಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್​​ಗೆ ಘೋಷಣೆ ಆಗಿರುವ ಚುನಾವಣೆಗೆ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಗಳನ್ನು ಶೀಘ್ರವೇ ಅಂತಿಮಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆಯುತ್ತಿರುವ ಜನತಾ ಪರ್ವ 1.O ದ ಎರಡನೇ ಹಂತದ ಸಂಘಟನಾ ಕಾರ್ಯಗಾರ ' ಜನತಾ ಸಂಗಮ 'ದ ಮೂರನೇ ದಿನ ಮಾಧ್ಯಮಗಳ ಜತೆ ಅವರು ಮಾತನಾಡಿದರು.

ಮೈಸೂರಿನಲ್ಲಿ ಎರಡು ಕ್ಷೇತ್ರಗಳು ಇವೆ. ಮೈಸೂರಿನ ಒಂದು ಕ್ಷೇತ್ರ ಹಾಗೂ ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಅಭ್ಯರ್ಥಿಗಳ ಪಟ್ಟಿಯನ್ನು ಆದಷ್ಟು ಬೇಗ ಬಿಡುಗಡೆ ಮಾಡುತ್ತೇವೆ ಎಂದು ಅವರು ಹೇಳಿದರು.

ತುಮಕೂರಿನ ನಾಯಕರ ಸಭೆ ಕೂಡ ಮಂಗಳವಾರ  ಮಾಡಿದ್ದೇನೆ. ಟಿಕೆಟ್ ಆಕಾಂಕ್ಷಿಗಳ ಪಟ್ಟಿಯನ್ನು ಇಟ್ಟುಕೊಂಡಿದ್ದೇನೆ. ಅಂತಿಮ ವರದಿ, ಪರಿಶೀಲನೆ ಮುಗಿದ ಮೇಲೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಉಳಿದ ಜಿಲ್ಲೆಗಳ ಸಭೆಯನ್ನೂ ಆದಷ್ಟು ಬೇಗ ಮಾಡಲಾಗುವುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಉಳಿದಂತೆ, ಹಾಸನದ ವಿಚಾರ ಅಂತಿಮವಾಗಿ ದೇವೇಗೌಡರು ತೀರ್ಮಾನ ಮಾಡುತ್ತಾರೆ. ರಾಯಚೂರು ಬಿಜಾಪುರ, ಕಲಬುರ್ಗಿಯಲ್ಲು ನಮ್ಮ ಅಭ್ಯರ್ಥಿಗಳನ್ನು  ನಿಲ್ಲಿಸಬೇಕು ಎಂಬ ಮನವಿ ಇದೆ. ಪರಿಶೀಲನೆ ಮಾಡುತ್ತಿದ್ದೇವೆ ಎಂದು  ಹೆಚ್.ಡಿಕೆ ಮಾಹಿತಿ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ