ಹೆಚ್.ಡಿ.ಕುಮಾರಸ್ವಾಮಿ 
ರಾಜಕೀಯ

ಜನಧನ್ ಖಾತೆಗಳಿಂದ ಸಾವಿರಾರು ಕೋಟಿ ರೂ. ಕಳವು: ಸರ್ಕಾರದ ವಿರುದ್ಧ ಎಚ್​ಡಿ ಕುಮಾರಸ್ವಾಮಿ ಗಂಭೀರ ಆರೋಪ

ಜನಧನ್​ ಖಾತೆಗಳಿಂದ ಸಾವಿರಾರು ಕೋಟಿ ಕಳುವಾಗಿರುವ ಶಂಕೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಶಂಕೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಜನಧನ್​ ಖಾತೆಗಳಿಂದ ಸಾವಿರಾರು ಕೋಟಿ ಕಳುವಾಗಿರುವ ಶಂಕೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಶಂಕೆ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಕುರಿತು ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಪ್ರತಿ ಜನಧನ್​ ಖಾತೆಯ ಮೂಲಕ ಒಂದು ಅಥವಾ ಎರಡು ರೂಪಾಯಿ ಕದ್ದಿರುವ ಮಾಹಿತಿಯಿದೆ. ಇದರಲ್ಲಿ ಎರಡೂ ಪಕ್ಷಗಳು ಶಾಮೀಲಾಗಿವೆ. ಇದೊಂದು ಅಂತರರಾಷ್ಟ್ರೀಯ ಮಟ್ಟದ ಹಗರಣ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕ್ರಮ ಕೈಗೊಳ್ಳಬೇಕಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಬಗ್ಗೆ ಯಾರೋ ಮಾಹಿತಿ ನೀಡಿದ್ದಾರೆ. ಅವರೂ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಹೇಳಿದರು.

ಜನರಿಗೆ ರಾಜಕಾರಣಿಗಳ ಮೇಲಿನ ವಿಶ್ವಾಸ ಕಡಿಮೆಯಾಗಿದೆ. ಜಾಗತಿಕ ಮಟ್ಟದಲ್ಲಿಯೂ ಭಾರತದ ಮೇಲೆ ವಿಶ್ವಾಸ ಕಡಿಮೆಯಾಗುತ್ತಿದೆ. ಅಭಿವೃದ್ಧಿ ಕಾರ್ಯಗಳ ಕುರಿತ ಚರ್ಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿರಬಹುದು ಎಂದು ಅಭಿಪ್ರಾಯಪಟ್ಟರು. ಕರ್ನಾಟಕದಲ್ಲಿ ಮೂವರಲ್ಲ ನಾಲ್ವರು ಮುಖ್ಯಮಂತ್ರಿ ಆಗಬಹುದು ಎಂದು ಇದೇ ವೇಳೆ ಮತ್ತೊಂದು ಬಾಂಬ್ ಸಿಡಿಸಿದರು.

ಬಿಟ್​ಕಾಯಿನ್ ಹಗರಣದ ಪ್ರಮುಖ ಆರೋಪಿಗೆ ಜಾಮೀನು ಸಿಕ್ಕಿದೆ. ಇದು ಹೇಗೆ ಸಾಧ್ಯವಾಯಿತು? ಜಾಮೀನು ಕೊಡಲು ವಾದಿಸಿದ್ದು, ಜಾಮೀನು ಕೊಟ್ಟವರು ಯಾರು? ಬಿಟ್​ಕಾಯಿನ್ ಪ್ರಕರಣದಲ್ಲಿ ಹಲವರ ಹೆಸರುಗಳು ಕೇಳಿ ಬರುತ್ತಿವೆ ಚಾರ್ಜ್​​ಶೀಟ್​ ಹಾಕುವ ಬಗ್ಗೆ ಮಾಧ್ಯಮಗಳಿಂದ ಮಾಹಿತಿ ಲಭ್ಯವಾಗಿದೆ. ದೊಡ್ಡಮಟ್ಟದಲ್ಲೇ ಈ ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಗಳು ನಡೆಯುತ್ತಿವೆ. ಅಷ್ಟು ಸುಲಭವಾಗಿ ಆರೋಪಿಗೆ ಜಾಮೀನು ಹೇಗೆ ಸಿಕ್ಕಿತು? ಸರ್ಕಾರಿ ಅಭಿಯೋಜಕರು ಹೇಗೆ ವಾದ ಮಾಡಿದರು ಎಂದು ಪ್ರಶ್ನಿಸಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT