ಡಿಕೆ ಶಿವಕುಮಾರ್ ಮತ್ತು ಎಂಬಿ ಪಾಟೀಲ್ 
ರಾಜಕೀಯ

ಅಕ್ರಮಗಳ ಸರದಾರರಾದ ನೀವು ಬಿಟ್ ಕಾಯಿನ್ ಹಗರಣದಲ್ಲಿ ಪಾಲು ಪಡೆದಿರುವಿರೆ? ಎಷ್ಟು ದಿನ ಸಿದ್ದರಾಮಯ್ಯಗೆ ರಾಜಕೀಯ ದಾಳವಾಗುತ್ತೀರಿ?

ಬಿಟ್ ಕಾಯಿನ್ ಹಗರಣ ಸಂಬಂಧ ಭಾರತೀಯ ಜನತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿದೆ.

ಬೆಂಗಳೂರು: ಬಿಟ್ ಕಾಯಿನ್ ಹಗರಣ ಸಂಬಂಧ ಭಾರತೀಯ ಜನತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿದೆ.

ಈ ಸಂಬಂಧ ಟ್ವೀಟ್ ಮಾಡಿರು ಬಿಜೆಪಿ, ಅಂದು ಕೇಂದ್ರೀಯ ತನಿಖಾ ಸಂಸ್ಥೆಗಳು ಅಕ್ರಮ ಆದಾಯ ಸಂಬಂಧಿತವಾಗಿ ನಿಮ್ಮ ಮೇಲೆ ದಾಳಿ ನಡೆಸಿದಾಗ ಈ ಲೋಕಜ್ಞಾನ ಎಲ್ಲಿ ಹೋಗಿತ್ತು, ಅಕ್ರಮಗಳ ಸರದಾರರಾದ ನೀವು ಬಿಟ್ ಕಾಯಿನ್ ಹಗರಣದಲ್ಲೂ ಬೆಂಬಲಿಗರ ಮೂಲಕ ಪಾಲು ಪಡೆದಿರುವ ಬಗ್ಗೆ ರಾಜ್ಯದ ಜನತೆಗೆ ಅನುಮಾನವಿದೆ, ನಿಜವೇ? ಎಂದು ಡಿಕೆ ಶಿವಕುಮಾರ್ ಅವರಿಗೆ ಪ್ರಶ್ನಿಸಿದೆ.

ಇನ್ನೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧವೂ ಹರಿಹಾಯ್ದಿರುವ ಬಿಜೆಪಿ, ವೀರಶೈವ ಲಿಂಗಾಯತ ವಿಭಜನೆಗೆ ಸಿದ್ದರಾಮಯ್ಯ ಅವರು ಎಂಬಿ ಪಾಟೀಲ್  ಅವರನ್ನು ದಾಳವಾಗಿ ಬಳಸಿಕೊಂಡರು,ಇದರ ಪರಿಣಾಮವಾಗಿ ಕಾಂಗ್ರೆಸ್ ಸರ್ವನಾಶವಾಯಿತು. ನಾನೂ ದಲಿತ ಎನ್ನುತ್ತಲೇ ದಲಿತ ನಾಯಕರನ್ನು ಹತ್ತಿಕ್ಕಿ, ದಲಿತರನ್ನೇ ಅವಮಾನ ಮಾಡಿದರು ಎಂದು ಬಿಜೆಪಿ ಆರೋಪಿಸಿದೆ.

ಸಿದ್ದರಾಮಯ್ಯರನ್ನು ಸಮರ್ಥಿಸಿಕೊಂಡು ನೀವು ಬಲಿಪಶುವಾಗಲು ಹೊರಟಿದ್ದೀರಾ ಪಾಟೀಲರೇ? ದಲಿತ ನಾಯಕರ ವಿರುದ್ಧ ಸಿದ್ದರಾಮಯ್ಯ ಅವರು ಆಡಿರುವ ಮಾತುಗಳು ದಲಿತ ಸಮುದಾಯದ ಭಾವನೆಯನ್ನು ಕೆರಳಿಸಿದೆ. ಇದರಿಂದ ಬಚಾವ್ ಆಗುವುದಕ್ಕೆ ಸಿದ್ದರಾಮಯ್ಯ ಅವರು ಬಿಟ್ ಕಾಯಿನ್ ವಿಚಾರ ಪ್ರಸ್ತಾಪಿಸುತ್ತಿದ್ದಾರೆ. ಎಂ.ಬಿ. ಪಾಟೀಲರೇ, ಎಷ್ಟು ದಿನ ದಲಿತ ವಿರೋದಿ ಸಿದ್ದರಾಮಯ್ಯನವರಿಗೆ ರಾಜಕೀಯ ದಾಳವಾಗುತ್ತೀರಿ? ಎಂದು ಲೇವಡಿ ಮಾಡಿದೆ.

ಸಿದ್ದರಾಮಯ್ಯ ಅವರು ದಲಿತ ಶಬ್ದ ಬಳಸಿಯೇ ಇಲ್ಲ ಎಂದು ವಾದಿಸುವ ಎಂಬಿ ಪಾಟೀಲ್ ಅವರೇ ಇದು ನಿಮ್ಮ ನಾಯಕ ಸಿದ್ದರಾಮಯ್ಯನವರ ಭಾಷಣ, ಸರಿಯಾಗಿ ಕೇಳಿಸಿಕೊಳ್ಳಿ. ಇಲ್ಲಿ ದಲಿತ ನಾಯಕರ ಬಗ್ಗೆ ಆಡಿರುವ ಅವಹೇಳನಕಾರಿ ಮಾತುಗಳು ಅರ್ಥವಾಗುತ್ತವೆ ಎಂದಿರುವ ಬಿಜೆಪಿ ಸಿದ್ದರಾಮಯ್ಯ ಅವರು ದಲಿತ ನಾಯಕರ ಬಗ್ಗೆ ಮಾತನಾಡಿರುವ ವಿಡಿಯೋವನ್ನು ಟ್ಯಾಗ್ ಮಾಡಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!