ಪ್ರಿಯಾಂಕ್ ಖರ್ಗೆ, ಡಾ ಕೆ ಸುಧಾಕರ್(ಸಂಗ್ರಹ ಚಿತ್ರ) 
ರಾಜಕೀಯ

ಬಿಟ್ ಕಾಯಿನ್ ಹಗರಣದ ಬಗ್ಗೆ ಆರೋಗ್ಯ ಸಚಿವರು ಪತ್ರಿಕಾಗೋಷ್ಠಿ ನಡೆಸುತ್ತಿರುವುದೇಕೆ?: ಪ್ರಿಯಾಂಕ್ ಖರ್ಗೆ ವ್ಯಂಗ್ಯ 

ಬಿಟ್ ಕಾಯಿನ್ ಅವ್ಯವಹಾರ ಕೇಸಿಗೂ ಆರೋಗ್ಯ ಸಚಿವರಿಗೂ ಏನು ಸಂಬಂಧ, ಹಾಗಾದರೆ ಗೃಹ ಸಚಿವರನ್ನು ಏನೆಂದು ಕರೆಯಬೇಕು ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಗಿ ಪ್ರಶ್ನೆ ಮಾಡಿದ್ದಾರೆ.

ಬೆಂಗಳೂರು: ಬಿಟ್ ಕಾಯಿನ್ ಅವ್ಯವಹಾರ ಕೇಸಿಗೂ ಆರೋಗ್ಯ ಸಚಿವರಿಗೂ ಏನು ಸಂಬಂಧ, ಹಾಗಾದರೆ ಗೃಹ ಸಚಿವರನ್ನು ಏನೆಂದು ಕರೆಯಬೇಕು ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಗಿ ಪ್ರಶ್ನೆ ಮಾಡಿದ್ದಾರೆ.

ರಾಜ್ಯದಲ್ಲಿ ಬಿಟ್ ಕಾಯಿನ್ ದಂಧೆಯ ಕೇಸು ರಾಷ್ಟ್ರಮಟ್ಟದಲ್ಲಿ ವಿವಾದ ಸೃಷ್ಟಿಸಿದೆ. ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಇದನ್ನು ಪ್ರಮುಖ ಅಸ್ತ್ರವಾಗಿ ತೆಗೆದುಕೊಳ್ಳುತ್ತಿದ್ದಾರೆ. ಸಾವಿರಾರು ಕೋಟಿ ರೂಪಾಯಿ ಅವ್ಯವಹಾರವಾಗಿದೆ, ಇದರಲ್ಲಿ ಬಿಜೆಪಿ ಸಚಿವರು, ಪ್ರಮುಖ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂಬುದು ಕಾಂಗ್ರೆಸ್ ನವರ ಆರೋಪ.

ಈ ಬಗ್ಗೆ ನಿನ್ನೆ ರಾತ್ರಿ ಸುದ್ದಿಗೋಷ್ಠಿ ನಡೆಸಿದ್ದ ಆರೋಗ್ಯ ಸಚಿವ ಡಾ ಕೆ ಸುಧಾಕರ್, ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಏನನ್ನೂ ಮುಚ್ಚಿಡುತ್ತಿಲ್ಲ. ನಾವು ಯಾವುದೇ ಸತ್ಯಗಳನ್ನು ಮರೆಮಾಚಲು ಅಥವಾ ಯಾರನ್ನೂ ರಕ್ಷಿಸಲು ಬಯಸುವುದಿಲ್ಲ, ತನಿಖೆಗೆ ಆದೇಶಿಸಿದ್ದು ನಾವೇ. ಶೀಘ್ರದಲ್ಲೇ ಎಲ್ಲ ಸಾಕ್ಷ್ಯಗಳೊಂದಿಗೆ ಸರ್ಕಾರ ಮುಂದೆ ಬರಲಿದೆ ಎಂದು ಹೇಳಿದ್ದರು.

ಆರೋಗ್ಯ ಸಚಿವರು ಸುದ್ದಿಗೋಷ್ಠಿ ನಡೆಸಿದ್ದಕ್ಕೆ ವ್ಯಂಗ್ಯವಾಡಿರುವ ಪ್ರಿಯಾಂಕ್ ಖರ್ಗೆ, ಗೃಹ ಸಚಿವಾಲಯಕ್ಕೆ‌ ಸಂಬಂಧಿಸಿದ ಬಿಟ್ ಕಾಯಿನ್ ಹಗರಣದ ಬಗ್ಗೆ ಆರೋಗ್ಯ ಸಚಿವರು ಪತ್ರಿಕಾಗೋಷ್ಠಿ ನಡೆಸುತ್ತಿರುವುದೇಕೆ? ನಾಳೆ ಗೃಹ ಸಚಿವರು ಬಂದು ರಾಜ್ಯದ ಕರೋನಾ ಲಸಿಕೆಯ ಮಾಹಿತಿ ನೀಡ್ತಾರಾ ಎಂದು ಕೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ

ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಬಸ್‌ಗೆ ಬೆಂಕಿ; ಚಾಲಕ-ಕ್ಲೀನರ್ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಸೇಫ್, Video

'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್