ಡಿಕೆ ಶಿವಕುಮಾರ್ 
ರಾಜಕೀಯ

ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಬ್ಯುಸಿ: ಸ್ಥಾನಗಳನ್ನು ಉಳಿಸಿಕೊಳ್ಳುವ ವಿಶ್ವಾಸದಲ್ಲಿ 'ಕೈ' ನಾಯಕರು!

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯದ ವಿವಿಧ ಭಾಗಗಳ ಪಕ್ಷದ ಮುಖಂಡರೊಂದಿಗೆ ನಿರಂತರ ಸಭೆ ನಡೆಸುತ್ತಿದ್ದಾರೆ.

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ 25 ಸ್ಥಾನಗಳಿಗೆ ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಸಿದ್ಧತೆ ನಡೆಸಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯದ ವಿವಿಧ ಭಾಗಗಳ ಪಕ್ಷದ ಮುಖಂಡರೊಂದಿಗೆ ನಿರಂತರ ಸಭೆ ನಡೆಸುತ್ತಿದ್ದಾರೆ.

ಸೋಮವಾರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಕೊಪ್ಪಳ ಮತ್ತು ರಾಯಚೂರು ಮುಖಂಡರೊಂದಿಗೆ ಚರ್ಚೆ ನಡೆಸಿದರು. ಭಾನುವಾರ ಕಲಬುರಗಿ, ಬೆಳಗಾವಿ, ಮೈಸೂರು, ಬೆಂಗಳೂರು ನಗರ ಮತ್ತಿತರ ಭಾಗಗಳ ಮುಖಂಡರ ಜತೆ ಸಭೆ ನಡೆಸಿದರು.

ಕಾಂಗ್ರೆಸ್ ನಾಯಕರು 25 ರಲ್ಲಿ 14 ಸ್ಥಾನಗಳನ್ನು ಉಳಿಸಿಕೊಳ್ಳಲು ಶ್ರಮಿಸುತ್ತಿದೆ ಇದರ ಜೊತೆಗೆ ಮತ್ತಷ್ಟು ಸ್ಥಾನಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದೇವೆ.  ಬೆಲೆ ಏರಿಕೆ, ವಿಶೇಷವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ, ಬಿಟ್‌ಕಾಯಿನ್ ಹಗರಣ, ಕೋವಿಡ್ ನಿರ್ವಹಿಸಲುತ ವೈಫಲ್ಯ ಮತ್ತು ಪಂಚಾಯತ್‌ಗಳಿಗೆ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡುವಲ್ಲಿ ಸರ್ಕಾರ ವಿಫಲವಾಗಿರುವುದನ್ನು ಮುಂದಿಟ್ಟುಕೊಂಡು ಜನರ ಬಳಿಗೆ ಹೋಗುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿಗಳನ್ನು ಕಾಂಗ್ರೆಸ್ ಸಬಲೀಕರಣಗೊಳಿಸಿದೆ,  ಕಾಂಗ್ರೆಸ್ ಅವಧಿಯಲ್ಲಿ ನಾವು ಹೆಚ್ಚಿನ ಪ್ರಮಾಣದಲ್ಲಿಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇವೆ, ಹೀಗಾಗಿ ನಮಗೆ ಉತ್ತಮ ಬೆಂಬಲ ಸಿಗುತ್ತದೆ ಎಂದು ಮಾಜಿ ಮೇಯರ್ ಪಿಆರ್ ರಮೇಶ್ ತಿಳಿಸಿದ್ದಾರೆ. ಆದರೆ ದಕ್ಷಿಣ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ತ್ರಿಕೋನ ಸ್ಪರ್ಧೆ ನಡೆದರೆ ಪಕ್ಷಕ್ಕೆ ಕಷ್ಟವಾಗುತ್ತದೆ.

ಕಾಂಗ್ರೆಸ್ ಗೆ ಬಂಡಾಯ  ಸಮಸ್ಯೆಯಾಗಲಿದೆ. ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಉತ್ತಮ ಅವಕಾಶವಿದೆ, ಆದರೆ ಇತರ ಒಂಬತ್ತರಲ್ಲಿ ಕ್ಷೇತ್ರವನ್ನು ನಾವು  ಕಳೆದುಕೊಳ್ಳಬೇಕಾಗುತ್ತದೆ ಎಂದು ಮಾಜಿ ಸಂಸದರೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

SCROLL FOR NEXT