ಸಂಗ್ರಹ ಚಿತ್ರ 
ರಾಜಕೀಯ

ಒಗ್ಗಟ್ಟಿನಿಂದ ಬಿಜೆಪಿಯನ್ನು ಕಿತ್ತೊಗೆಯಿರಿ: ಅಲ್ಪಸಂಖ್ಯಾತರಿಗೆ ಕಾಂಗ್ರೆಸ್

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಂವಿಧಾನಕ್ಕೆ ಬೆದರಿಕೆ ಒಡ್ಡುತ್ತಿದ್ದು, ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಅಲ್ಪಸಂಖ್ಯಾತರು ಒಗ್ಗಟ್ಟಾಗಿ ಕಾಂಗ್ರೆಸ್‌ಗೆ ಬೆಂಬಲ ನೀಡಬೇಕೆಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಕರೆ ನೀಡಿದ್ದಾರೆ.

ಬೆಂಗಳೂರು: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಂವಿಧಾನಕ್ಕೆ ಬೆದರಿಕೆ ಒಡ್ಡುತ್ತಿದ್ದು, ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಅಲ್ಪಸಂಖ್ಯಾತರು ಒಗ್ಗಟ್ಟಾಗಿ ಕಾಂಗ್ರೆಸ್‌ಗೆ ಬೆಂಬಲ ನೀಡಬೇಕೆಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಕರೆ ನೀಡಿದ್ದಾರೆ.

ನಗರದ ಅರಮನೆ ಮೈದಾನದ ನಲಪಾಡ್ ಪೆವಿಲಿಯನ್ ನಲ್ಲಿ ಮಂಗಳವಾರ ಆಯೋಜಿಸಿದ್ದ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಅವರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿರುವ ಅವರು, ಎರಡು ಬಾರಿ ಅಧಿಕಾರಕ್ಕೆ ಬಂದ ಮೋದಿ ದೇಶವನ್ನು ಸರ್ವನಾಶ ಮಾಡಿದ್ದಾರೆ. ಈ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನೇ ಬದಲಿಸಲಿದೆ. ಅವರನ್ನು ಸೋಲಿಸಲು ಮತ್ತು ಸಂವಿಧಾನವನ್ನು ರಕ್ಷಿಸಲು ಅಲ್ಪಸಂಖ್ಯಾತರು ಒಗ್ಗೂಡಬೇಕು. ನಾವು ಕೂಡ ಬಿಜೆಪಿ ವಿರುದ್ಧ ಹೋರಾಡುತ್ತೇವೆ ಮತ್ತು ಅವರನ್ನು ಸೋಲಿಸುತ್ತೇವೆಂದು ಹೇಳಿದ್ದಾರೆ.

ಬಳಿಕ ಕಾಂಗ್ರೆಸ್ ಬೆಂಬಲಕ್ಕೆ ನಿಂತಿರುವ ಸಮುದಾಯವನ್ನು ಶ್ಲಾಘಿಸಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು, ಅಲ್ಪಸಂಖ್ಯಾತರ ಹೆಸರುಗಳನ್ನು ಬಿಜೆಪಿ ಚುನಾವಣಾ ಪಟ್ಟಿಗಳಿಂದ ತೆಗೆದುಹಾಕುವ ಕೆಲಸ ಮಾಡುತ್ತಿದೆ. ಈ ಬಗ್ಗೆ ಸಮುದಾಯದ ಯುವಕರು ಜಾಗೃತರಾಗಿರಬೇಕು ಎಂದು ತಿಳಿಸಿದರು.

ಈ ನಿಟ್ಟಿನಲ್ಲಿ ಸಮಿತಿ ರಚಿಸಲಾಗುತ್ತಿದ್ದು, ಸಮುದಾಯದ ವಿರುದ್ಧದ ಟೀಕೆಗಳಿಗೆ ನೀವು ಚಿಂತಿಸದಿರಿ ನಾವು ನಿಮ್ಮೊಂದಿಗಿದ್ದೇವೆ ಎಂದು ಹೇಳಿದರು.

ಏತನ್ಮಧ್ಯೆ, ಎಐಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಇಮ್ರಾನ್ ಪ್ರತಾಪ್‌ಗರ್ಹಿ, ಬಿಜೆಪಿಯು ಸಮಾಜವನ್ನು ಕೋಮುವಾದದ ಆಧಾರದ ಮೇಲೆ ವಿಭಜಿಸುವ ತನ್ನ ತಂತ್ರವನ್ನು ಮುಂದುವರೆಸಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ