ಜಮೀರ್ ಅಹ್ಮದ್ ಖಾನ್ 
ರಾಜಕೀಯ

ಒಡೆದ ಮನೆಯಾದ ಕಾಂಗ್ರೆಸ್: ಜಮೀರ್ ಫೋಟೋ ಪ್ರದರ್ಶನ! ಡಿಕೆ ಪರ ಘೋಷಣೆ; ಮುಜುಗರದಿಂದ ವೇದಿಕೆ ತೊರೆದ ಸಿದ್ದರಾಮಯ್ಯ

ಪದೇಪದೆ ಡಿಕೆ ಡಿಕೆ ಎಂದು ಕೆಲವರು ಘೋಷಣೆ ಕೂಗುತ್ತಿದ್ದರು. ಇನ್ನು ಕೆಲವರು ಜಮೀರ್ ಫೋಟೋ ಹಿಡಿದು ಘೋಷಣೆ ಹಾಕುತ್ತಿದ್ದರು. ಹೀಗಾಗಿ ಸಿಟ್ಟಾದ ಸಿದ್ದರಾಮಯ್ಯ ಅರ್ಧಕ್ಕೆ ಭಾಷಣ ನಿಲ್ಲಿಸಿ ವೇದಿಕೆಯಿಂದ ಕೆಳಗೆ ಇಳಿದಿದ್ದಾರೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್​ನಲ್ಲಿ ಬಣ ರಾಜಕೀಯ ಮತ್ತೆ ಭುಗಿಲೆದ್ದಿದೆ. ಮಂಗಳವಾರ ಅರಮನೆ ಮೈದಾನದಲ್ಲಿ ನಡೆದ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಬೆಂಬಲಿಗರು,  ಶಾಂತಿನಗರ ಶಾಸಕ ಎನ್‌ಎ ಹ್ಯಾರೀಸ್  ಅವರನ್ನು ಕಡೆಗಣಿಸಿದ್ದಾರೆ ಎಂದು ಆರೋಪ  ಕೇಳಿ ಬಂದಿದೆ.

ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಷಣಕ್ಕೆ ಅಡ್ಡಿಯಾಗಿದೆ.  ಪದೇಪದೆ ಡಿಕೆ ಡಿಕೆ ಎಂದು ಕೆಲವರು ಘೋಷಣೆ ಕೂಗುತ್ತಿದ್ದರು. ಇನ್ನು ಕೆಲವರು ಜಮೀರ್ ಫೋಟೋ ಹಿಡಿದು ಘೋಷಣೆ ಹಾಕುತ್ತಿದ್ದರು. ಹೀಗಾಗಿ ಸಿಟ್ಟಾದ ಸಿದ್ದರಾಮಯ್ಯ ಅರ್ಧಕ್ಕೆ ಭಾಷಣ ನಿಲ್ಲಿಸಿ ವೇದಿಕೆಯಿಂದ ಕೆಳಗೆ ಇಳಿದಿದ್ದಾರೆ.

ಬಳಿಕ ವೇದಿಕೆಗೆ ಬಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಪಕ್ಷ ನಾಯಕರು ಮಾತನಾಡಬೇಕಾದರೆ ನೀವು ಕೂಗುತ್ತೀರಿ. ನೀವು ಕಾಂಗ್ರೆಸ್ ದ್ರೋಹಿಗಳೆಂದು ಡಿಕೆ ಶಿವಕುಮಾರ್ ಗರಂ ಆದರು.

ಇನ್ನೂ ಶಾಸಕ ಹ್ಯಾರಿಸ್ ಮಾತನಾಡಿ ಖರ್ಗೆ ಮತ್ತು ಶಿವಕುಮಾರ್ ಅವರನ್ನು ಹೊಗಳಿ , ಜಮೀರ್  ವಿರುದ್ಧ ಪರೋಕ್ಷವಾಗಿ ಟೀಕಿಸಿದರು. ಕಾರ್ಯಕ್ರಮಕ್ಕೆ ಸಿಎಂ ಇಬ್ರಾಹಿಂ ಕೂಡ ಆಗಮಿಸಿರಲಿಲ್ಲ.  ಈ ಸಂಬಂಧ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಎಂ ಇಬ್ರಾಹಿಂ, ಅವರೆಲ್ಲಾ ಧೀಮಂತ ನಾಯಕರು, ಅವರ ಜೊತೆ ಸೇರುವುದು ಸರಿಯಲ್ಲ ಎಂದು ನಾನು ಕಾರ್ಯಕ್ರಮಕ್ಕೆ ಬರಲಿಲ್ಲ ಎಂದು ವ್ಯಂಗ್ಯವಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೀತ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

CJP ಪ್ರತಿಭಟನೆ ಹಿನ್ನೆಲೆಯಲ್ಲಿ ರೈಲುಗಳ ರದ್ದತಿ: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಮತದಾರರ ಪಟ್ಟಿ ಪರಿಷ್ಕರಣೆ: ಕರ್ನಾಟಕದಲ್ಲಿ 1.10 ಲಕ್ಷ ಫಾರಂ-7 ಅರ್ಜಿ ಸ್ವೀಕೃತಿ, 40.88 ಲಕ್ಷ ನೋಟಿಸ್ ವಿಚಾರಣೆ ಪೂರ್ಣ: ಅ.27ಕ್ಕೆ ಅಂತಿಮ ಪಟ್ಟಿ ಪ್ರಕಟ

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!