ಡಾ.ಜಿ. ಪರಮೇಶ್ವರ್ 
ರಾಜಕೀಯ

ಎ.ಕೆ. ಆಂಟನಿ ನೇತೃತ್ವದ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿ ಸದಸ್ಯರಾಗಿ ಡಾ. ಜಿ.ಪರಮೇಶ್ವರ್ ನೇಮಕ

ಕೇರಳದ ಎ.ಕೆ. ಆಂಟನಿ ಅವರನ್ನು ಕಾಂಗ್ರೆಸ್ ಪಕ್ಷದ ಶಿಸ್ತು ಪಾಲನಾ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಯಾಗಿದ್ದ ಡಾ. ಜಿ. ಪರಮೇಶ್ವರ್ ಅವರನ್ನು ಶಿಸ್ತು ಪಾಲನಾ ಸಮಿತಿ ಸದಸ್ಯರನ್ನಾಗಿ ನೇಮಿಸುವ ಮೂಲಕ ಪಕ್ಷದ ಕೇಂದ್ರ ಸಂಘಟನೆಗೆ ನಿಯೋಜಿಸಿದಂತಾಗಿದೆ. 

ನವದೆಹಲಿ: ಕೇರಳದ ಎ.ಕೆ. ಆಂಟನಿ ಅವರನ್ನು ಕಾಂಗ್ರೆಸ್ ಪಕ್ಷದ ಶಿಸ್ತು ಪಾಲನಾ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಯಾಗಿದ್ದ ಡಾ. ಜಿ. ಪರಮೇಶ್ವರ್ ಅವರನ್ನು ಶಿಸ್ತು ಪಾಲನಾ ಸಮಿತಿ ಸದಸ್ಯರನ್ನಾಗಿ ನೇಮಿಸುವ ಮೂಲಕ ಪಕ್ಷದ ಕೇಂದ್ರ ಸಂಘಟನೆಗೆ ನಿಯೋಜಿಸಿದಂತಾಗಿದೆ. 

ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ , ಮಾಜಿ ಕೇಂದ್ರ ಸಚಿವೆ ಅಂಬಿಕಾ ಸೋನಿ ಹಾಗೂ ಹಿರಿಯ ಮುಖಂಡ ತಾರಿಖ್ಅನ್ವಾರ್ ಅವರನ್ನು ಸೇರಿದಂತೆ ಐವರು ಸದಸ್ಯರನ್ನೊಳಗೊಂಡ ಪಕ್ಷದ ಶಿಸ್ತು ಪಾಲನಾ ಸಮಿತಿಯನ್ನು ಗುರುವಾರ ಕಾಂಗ್ರೆಸ್ ಪುನರ್ ರಚಿಸಿದೆ.

ಕೂಡಲೇ ಜಾರಿಗೆ ಬರುವಂತೆ ಕಾಂಗ್ರೆಸ್ ಅಧ್ಯಕ್ಷರು ಎಐಸಿಸಿ ಶಿಸ್ತು ಪಾಲನಾ ಸಮಿತಿಯನ್ನು ಪುನರ್ ರಚಿಸಿದ್ದು, ಎ. ಕೆ. ಆಂಟನಿ ಇದರ ಮುಖ್ಯಸ್ಥರಾಗಿರುತ್ತಾರೆ. ತಾರಿಖ್ ಅನ್ವರ್ ಸದಸ್ಯ ಕಾರ್ಯದರ್ಶಿಯಾಗಿದ್ದಾರೆ ಎಂದು ಪಕ್ಷದ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ದೆಹಲಿಯ ಮಾಜಿ ಸಂಸದ ಜೈ ಪ್ರಕಾಶ್ ಅಗರ್ ವಾಲ್ ಮತ್ತು ಜಿ ಪರಮೇಶ್ವರ್ ಈ ಸಮಿತಿಯ ಇತರ ಪ್ರಮುಖ ಸದಸ್ಯರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT